Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ
Team Udayavani, Jan 2, 2025, 8:26 PM IST
ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮತ್ತು ಪ್ರತಿಪಕ್ಷಗಳ ನಡುವೆ “ನಿರುದ್ಯೋಗ’ ಸಮರ ನಡೆಯುತ್ತಿದೆ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ತನ್ನ 10 ವರ್ಷಗಳ ಅವಧಿಯಲ್ಲಿ ಕೇವಲ 2.9 ಕೋಟಿ ಹೆಚ್ಚುವರಿ ಉದ್ಯೋಗಗಳನ್ನು ಸೃಷ್ಟಿಸಿದರೆ, ಮೋದಿ ಆಡಳಿತವು 17.19 ಕೋಟಿ ಹೊಸ ಉದ್ಯೋಗಗಳನ್ನು ಸೃಷ್ಟಿಸಿದೆ. ಕಳೆದ ಒಂದು ವರ್ಷದಲ್ಲಿ (2023-24) ಮೋದಿ ಸರ್ಕಾರ 4.6 ಕೋಟಿ ಉದ್ಯೋಗ ಸೃಷ್ಟಿಸಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನಸುಖ ಮಾಂಡವಿಯ ಹೇಳಿದ್ದಾರೆ.
ದೇಶದಲ್ಲಿ ಒಟ್ಟು ಉದ್ಯೋಗವು 2014-15ರಲ್ಲಿ 47.15 ಕೋಟಿ ಇತ್ತು. ಇದು 2023-24ರ ಹೊತ್ತಿಗೆ 64.33 ಕೋಟಿಗೆ ಅಂದರೆ, ಶೇ.36ರಷ್ಟು ಏರಿಕೆಯಾಗಿದೆ. ಆದರೆ, 2003-04ರಲ್ಲಿ ಇದ್ದ 44.23 ಕೋಟಿ ಉದ್ಯೋಗ 2014-15ರಲ್ಲಿ 47.15 ಕೋಟಿಗೆ ಏರಿಕೆಯಾಗಿತ್ತು ಎಂದು ಮಾಹಿತಿ ನೀಡಿದರು. ಅಲ್ಲದೆ, ಇದು ಆರ್ಬಿಐ ಅಂಕಿಅಂಶವಾಗಿದ್ದು, ನಮ್ಮ ಮಾಹಿತಿಯಲ್ಲ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.