6 ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ತನಿಖಾಸ್ತ್ರ ; 3 ತಿಂಗಳಲ್ಲಿ ವರದಿಗೆ ಸೂಚನೆ
ಮಂಗಳೂರು, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ, ತುಮಕೂರು ಕಾಮಗಾರಿಗಳ ಬಗ್ಗೆ ಅತೃಪ್ತಿ
Team Udayavani, Jan 3, 2025, 6:50 AM IST
ಬೆಂಗಳೂರು: ಸ್ಮಾರ್ಟ್ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸರಕಾರ ಮುಂದಾಗಿದ್ದು, ಬೆಂಗಳೂರು ಹೊರತುಪಡಿಸಿ ರಾಜ್ಯದ 6 ನಗರಗಳ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳನ್ನು ಸಂಪೂರ್ಣ ತನಿಖೆ ನಡೆಸಿ 3 ತಿಂಗಳಲ್ಲಿ ವರದಿ ನೀಡುವಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಸೂಚಿಸಿದ್ದಾರೆ.
ಸ್ಮಾರ್ಟ್ ಶಾಲೆಗಳು, ಆಸ್ಪತ್ರೆಗಳಂಥ ಕಾಮಗಾರಿಗಳನ್ನು ನಡೆಸುವ ಬದಲು ಒಳಚರಂಡಿ, ಉದ್ಯಾನ ದುರಸ್ತಿ ಕಾರ್ಯಗಳಿಗೆ ಅನುದಾನ ಬಳಸಿದ್ದು ಸರಕಾರದ ಅಸಮಾಧಾನಕ್ಕೆ ಕಾರಣ. ವಿಧಾನಸೌಧದಲ್ಲಿ ಸ್ಮಾರ್ಟ್ ಸಿಟಿ ಅಭಿಯಾನದಡಿ ರಾಜ್ಯದ ಮಂಗಳೂರು, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಶಿವಮೊಗ್ಗ ಹಾಗೂ ತುಮಕೂರು ನಗರಗಳಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವರು, ಸ್ಮಾರ್ಟ್ ಸಿಟಿ ಅಭಿಯಾನ ಆರಂಭವಾದಾಗಿನಿಂದ ಇಲ್ಲಿಯವರೆಗೂ 7 ಸ್ಮಾರ್ಟ್ ಸಿಟಿಗಳಲ್ಲಿ 6,415.51 ಕೋಟಿ ರೂ. ವೆಚ್ಚದ ಕಾಮಗಾರಿಗಳು ನಡೆದಿವೆ. ಪೂರ್ಣಗೊಂಡಿರುವ ಹಲವು ಕಾಮಗಾರಿಗಳು ತೃಪ್ತಿದಾಯಕವಾಗಿಲ್ಲದ ಕಾರಣ 6 ನಗರಗಳಲ್ಲಿ ನಡೆದ ಕಾಮಗಾರಿಗಳ ಸಂಪೂರ್ಣ ತನಿಖೆ ನಡೆಸುವಂತೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದರು.
ಕೈಗೆತ್ತಿಕೊಂಡ ಕಾಮಗಾರಿಗಳಿಗೆ ಅಸಮಾಧಾನ
ಕೇಂದ್ರ ಮತ್ತು ರಾಜ್ಯ ಸರಕಾರದ 50:50 ಅನುಪಾತದ ಅನುದಾನದಡಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಪ್ರತೀ ಸ್ಮಾರ್ಟ್ ಸಿಟಿಗೂ ಅಂದಾಜು 990 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಬಹುತೇಕ ಕಾಮಗಾರಿ ಪೂರ್ಣಗೊಂಡಿವೆ. ಆದರೆ ಸ್ಮಾರ್ಟ್ ಶಾಲೆಗಳು, ಆಸ್ಪತ್ರೆ, ಗ್ರಂಥಾಲಯ, ಬಸ್ ನಿಲ್ದಾಣ ಸೇರಿ ಶಾಶ್ವತ ಕಟ್ಟಡಗಳ ನಿರ್ಮಾಣಕ್ಕೆ ಒತ್ತು ನೀಡಬೇಕಾಗಿತ್ತು ಎಂದು ಸಚಿವರು ತಿಳಿಸಿದರು.
ಮಾರ್ಚ್‌ಗೆ ಪೂರ್ಣ: ಸಚಿವ
2025ರ ಮಾರ್ಚ್ ಅಂತ್ಯಕ್ಕೆ ಸ್ಮಾರ್ಟ್ ಸಿಟಿ ಅಭಿಯಾನ ಮುಗಿಯಲಿದ್ದು, ಬರಬೇಕಾಗಿರುವ ಉಳಿಕೆ ಮೊತ್ತ ಹಾಗೂ ಹಾಲಿ ಉಳಿದಿರುವ ಮೊತ್ತದಲ್ಲಿ ಆಧುನಿಕ ತಂತ್ರಜ್ಞಾನದ ಅಂತಾರಾಷ್ಟ್ರೀಯ ಮಟ್ಟದ ಸ್ಮಾರ್ಟ್ ಶಾಲೆಗಳ ನಿರ್ಮಾಣಕ್ಕೆ ವಿನೀಯೋಗಿಸಬೇಕು. ಇದರಿಂದಾಗಿ ನಮ್ಮ ಬಡ ಮಕ್ಕಳು ಸಹ ಕಲಿಕೆಯಲ್ಲಿ ಮುಂದುವರಿಯಬೇಕು. ಇದಕ್ಕಾಗಿ ಅತ್ಯಾಧುನಿಕ ಕಲಿಕ ಸಾಮಗ್ರಿಗಳು ಸ್ಮಾರ್ಟ್ ಶಾಲೆಗಳಲ್ಲಿ ಒಳಗೊಳ್ಳಬೇಕು ಎಂದು ಸಚಿವ ಬೈರತಿ ಸುರೇಶ್ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Karnataka: ವಿದ್ಯುತ್ ದರದಂತೆ ವರ್ಷವೂ ಬಸ್ ಯಾನ ದರ ಹೆಚ್ಚಳ?
Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ
Local Body Election: ಪರಾಭವಗೊಂಡ ಅಭ್ಯರ್ಥಿಗಳ ಜತೆ ಜ.10ಕ್ಕೆ ಬಿ.ವೈ.ವಿಜಯೇಂದ್ರ ಸಭೆ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.