KEA: ಒಪ್ಪಿಗೆ ಬಳಿಕ 747 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಪಠ್ಯಕ್ರಮದ ಪ್ರಕಾರ ಪರೀಕ್ಷೆಗೆ ತಯಾರಿ ನಡೆಸಿಕೊಳ್ಳಲು ಸೂಚನೆ
Team Udayavani, Jan 3, 2025, 6:25 AM IST
ಬೆಂಗಳೂರು: ವಿವಿಧ ಇಲಾಖೆ ಅಥವಾ ನಿಗಮಗಳು ಒಟ್ಟು 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸಿಕೊಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಕೋರಿಕೆ ಸಲ್ಲಿಸಿದ್ದು, ಸರ್ಕಾರದ ಅಂತಿಮ ಒಪ್ಪಿಗೆ ಸಿಕ್ಕಿದ ನಂತರ ಅರ್ಜಿ ಆಹ್ವಾನಿಸಿ, ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಕೃಷಿ ಮಾರಾಟ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ವಾಯವ್ಯ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ- ಈ 7 ಸಂಸ್ಥೆಗಳು ನೇಮಕಾತಿ ಸಂಬಂಧ ಕ್ರಮ ತೆಗೆದುಕೊಳ್ಳುವಂತೆ ಕೋರಿಕೆ ಸಲ್ಲಿಸಿದ್ದವು. ಆ ಪ್ರಕಾರ ಸಂಕ್ಷಿಪ್ತ ಅಧಿಸೂಚನೆ ಕೂಡ ಹೊರಡಿಸಲಾಗಿತ್ತು. ಆದರೆ, ಈ ಸಂಸ್ಥೆಗಳು ವಿವಿಧ ಕಾರಣಗಳನ್ನು ನೀಡಿ ವಿವರವಾದ ಅಧಿಸೂಚನೆಗೆ ಸಮಯ ಕೋರಿರುವ ಕಾರಣಕ್ಕೆ ತಕ್ಷಣಕ್ಕೆ ಅರ್ಜಿ ಆಹ್ವಾನಿಸಲು ಸಾಧ್ಯವಾಗುತ್ತಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸರ್ಕಾರದ ಅನುಮತಿ ಬಳಿಕ ಪರೀಕ್ಷೆ:
ಈ ನಡುವೆ ಒಳಮೀಸಲಾತಿ ಸಂಬಂಧ ತೀರ್ಮಾನ ಆಗುವವರೆಗೂ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಹೀಗಾಗಿ ಸರ್ಕಾರ ಅನುಮತಿ ಕೊಟ್ಟ ನಂತರ ಆದಷ್ಟು ಬೇಗ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Local Body Election: ಪರಾಭವಗೊಂಡ ಅಭ್ಯರ್ಥಿಗಳ ಜತೆ ಜ.10ಕ್ಕೆ ಬಿ.ವೈ.ವಿಜಯೇಂದ್ರ ಸಭೆ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.