Health Department: ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ
ದಿನವೊಂದಕ್ಕೆ 3,930 ರೂ. ಗೌರವಧನ ನಿಗದಿ
Team Udayavani, Jan 2, 2025, 11:41 PM IST
ಬೆಂಗಳೂರು: ಸರಕಾರ ನಿಗದಿ ಪಡಿಸಿದ ಮಾಸಿಕ ಗೌರವ ಧನದ ಆಧಾರದ ಮೇಲೆ ವಿಶೇಷ ತಜ್ಞ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ. ನೇಮಕಗೊಂಡ ವಿಶೇಷ ತಜ್ಞ ವೈದ್ಯರಿಗೆ ಸರಕಾರ ನಿಗದಿ ಪಡಿಸಿದ ಮಾಸಿಕ ಗೌರವಧನದ ಆಧಾರ ಮೇಲೆ ವೇತನ ನೀಡಲಾಗುತ್ತದೆ.
ದಿನವೊಂದಕ್ಕೆ 3,930 ರೂ. ಗೌರವಧನ ನಿಗದಿ ಪಡಿಸಲಾಗಿದೆ. ವೈದ್ಯರು ಮಾಸಿಕ ಎಷ್ಟು ದಿನಗಳು ಕರ್ತವ್ಯ ನಿರ್ವಹಿಸಿದ್ದಾರೆ ಎನ್ನುವ ಹಾಜರಾತಿ ಮೇಲೆ ಗೌರವಧನ ಪಾವತಿಯಾಗಲಿದೆ. ತಜ್ಞ ವೈದ್ಯರು ಕಡ್ಡಾಯವಾಗಿ ವಾರದಲ್ಲಿ ಎರಡು ದಿನ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಬೇಕಾಗುತ್ತದೆ. ಇನ್ನೂ ವಿಶೇಷ ತಜ್ಞ ವೈದ್ಯರು ಆಯುಷ್ ಭಾರತ್ ಆರೋಗ್ಯ ಕರ್ನಾಟಕ (ಎಬಿಎಆರ್‌ಕೆ) ಯೋಜನೆಯಡಿ ಯಾವುದೇ ಶಸ್ತ್ರ ಚಿಕಿತ್ಸೆಯನ್ನು ಕೈಗೊಂಡರೆ, ಅವರಿಗೆ ಶಸ್ತ್ರ ಚಿಕಿತ್ಸೆಯ ಒಟ್ಟು ಮೊತ್ತದಲ್ಲಿ ನಿಗದಿತ ಪ್ರಮಾಣ ಮೊತ್ತವನ್ನು ಪ್ರೋತ್ಸಾಹಕ ರೂಪದಲ್ಲಿ ನೀಡಲಾಗುತ್ತದೆ. ಇನ್ನೂ ವಿಶೇಷವಾಗಿ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗ, ಅರವಳಿಕೆ ಸೇರಿದಂತೆ ವಿಭಾಗದ ಶಸ್ತ್ರ ಚಿಕಿತ್ಸಕರು ಪ್ರೋತ್ಸಾಹ ಧನ ಪಡೆಯಲು ಅರ್ಹರಾಗಿದ್ದಾರೆ. ಈ ಕುರಿತು ಮಾರ್ಗಸೂಚಿ ನೀಡಲಾಗಿದೆ.
ರೇಡಿಯಾಲಜಿಸ್ಟ್ ಸೇವೆ, ರೇಡಿಯೋಗ್ರಫಿ, ಸಿಟಿ ಎಂಆರ್ ಸ್ಕ್ಯಾನಿಂಗ್ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ವಿಶೇಷ ತಜ್ಞ ವೈದ್ಯರು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.