New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
ರೋಗಿಗಳೇ ತುಂಬಿರುವ ಆಸ್ಪತ್ರೆ ವೀಡಿಯೋ ವೈರಲ್
Team Udayavani, Jan 3, 2025, 7:12 AM IST
ಬೀಜಿಂಗ್: 2020ರಲ್ಲಿ ವಿಶ್ವವನ್ನು ಕಾಡಿದ್ದ ಕೋವಿಡ್-19 ಸಾಂಕ್ರಾಮಿಕದ ಕರಿನೆರಳಿನಿಂದ ಹೊರಬಂದು, ದೇಶಗಳು ಸಹಜ ಸ್ಥಿತಿಯತ್ತ ಮರಳುತ್ತಿರು ವಂತೆಯೇ ಚೀನದಲ್ಲಿ ಮತ್ತೊಂದು ಸಾಂಕ್ರಾಮಿಕ ಹರಡುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಆರಂಭವಾಗಿವೆ!
ಹೌದು, ಇದಕ್ಕೆ ಪುಷ್ಟಿ ನೀಡುವಂತೆ ಚೀನದಲ್ಲಿ ಆಸ್ಪತ್ರೆಗಳು ರೋಗಿಗಳಿಂದ ತುಂಬು ತುಳುಕುತ್ತಿರುವ ವೀಡಿಯೋಗಳೂ ವೈರಲ್ ಆಗಿದೆ. ಟ್ವಿಟರ್ನಲ್ಲಿ ವ್ಯಕ್ತಿಯೊಬ್ಬರು ಈ ವೀಡಿಯೋ ಪೋಸ್ಟ್ ಮಾಡಿ, “ಚೀನದಲ್ಲಿ ಹೊಸ ಸಾಂಕ್ರಾಮಿಕದಿಂದ ಆಸ್ಪತ್ರೆಗಳು, ಶವಾಗಾರಗಳು ತುಂಬಿ ತುಳುಕುತ್ತಿದ್ದು, ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ವಿಷಮ ಶೀತ, ಜ್ವರ, ಕೋವಿಡ್ಸೇರಿ ಹಲವು ವೈರಸ್ಗಳು ವೇಗವಾಗಿ ಹಬ್ಬುತ್ತಿವೆ’ ಎಂದು ಬರೆದಿದ್ದಾರೆ. ಆದರೆ, ಈ ಅಂಶಗಳಿಗೆ ಯಾವುದೇ ಆಧಾರ ಸಿಕ್ಕಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯಾಗಲೀ, ಚೀನ ಆಡಳಿತವಾಗಲೀ ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟನೆ ಹೊರಡಿಸಿಲ್ಲ. ಇನ್ನೊಂದೆಡೆ, ಕೊರೊನಾ ವೈರಸ್ನ ಮೂಲದ ಬಗ್ಗೆ ಅಧ್ಯಯನ ನಡೆಸಲು ಕಳೆದ 5 ವರ್ಷಗಳ ದತ್ತಾಂಶ ನೀಡುವಂತೆ ಚೀನಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ
Karnataka: ವಿದ್ಯುತ್ ದರದಂತೆ ವರ್ಷವೂ ಬಸ್ ಯಾನ ದರ ಹೆಚ್ಚಳ?
Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.