Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Team Udayavani, Jan 3, 2025, 7:47 PM IST
ಮಡಿಕೇರಿ: ನಿಯಂತ್ರಣ ತಪ್ಪಿದ ಲಾರಿಯಿಂದ ಹಾರಿದ ಚಾಲಕರೊಬ್ಬರು ಚಕ್ರದಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಶನಿವಾರಸಂತೆ ಸಮೀಪ ಗುಡುಗಳಲೆ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ.
ಸುಂಕಣ್ಣ ಎಂಬುವವರೇ ಮೃತ ದುರ್ದೈವಿಯಾಗಿದ್ದು, ನಿರ್ವಾಹಕ ನರೇಶ್ ಅಪಾಯದಿಂದ ಪಾರಾಗಿದ್ದಾರೆ.
ಆಂಧ್ರಪ್ರದೇಶದಿಂದ ಸೋಮವಾರಪೇಟೆಗೆ ತೆರಳುತಿದ್ದ ಸಿಮೆಂಟ್ ತುಂಬಿದ ಲಾರಿ ಗುಡುಗಳಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚುವ ಹಂತದಲ್ಲಿತ್ತು. ಅಪಾಯದ ಮುನ್ಸೂಚನೆ ಅರಿತ ಇಬ್ಬರು ಲಾರಿಯಿಂದ ಹಾರಿದ್ದಾರೆ. ಈ ಸಂದರ್ಭ ಲಾರಿಯ ಹಿಂಬದಿಯ ಚಕ್ರ ಸುಂಕಣ್ಣ ಅವರ ಮೇಲೆ ಹರಿದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಶನಿವಾರಸಂತೆ ಪೊಲೀಸ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbale: ಮೊಬೈಲ್ ಫೋನ್ ಕಳವು: ಆರೋಪಿ ಸೆರೆ
Kasaragodu: ಆದೂರು ಶ್ರೀಭಗವತಿ ದೈವಸ್ಥಾನ: 351 ವರ್ಷ ಬಳಿಕ ಪೆರುಂಕಳಿಯಾಟ ಸಂಭ್ರಮ
Kodagu: ಬ್ಯಾಂಕ್ ಅಧಿಕಾರಿಗಳು, ಜುವೆಲರಿ ಮಾಲಕರ ಜೊತೆ ಎಸ್‌ಪಿ ಸಭೆ
Madikeri: ಸೋಲಾರ್ ಅಂಗಡಿಯಿಂದ 2.16 ಲಕ್ಷ ರೂ. ಕಳವು: ಆರೋಪಿ ಬಂಧನ
Madikeri: ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಅಸ್ವಸ್ಥಗೊಂಡಿದ್ದ ಮಹಿಳೆ ಸಾವು