“ನಿಮ್ಹಾನ್ಸ್ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು
ಮನೋರೋಗಿಗಳ ಚಿಕಿತ್ಸೆಗಾಗಿ ವಿಶೇಷ ಬ್ಲಾಕ್, ಸಂಕೀರ್ಣ ಉದ್ಘಾಟನೆ
Team Udayavani, Jan 4, 2025, 12:06 AM IST
ಬೆಂಗಳೂರು: ಸಂಶೋಧನೆ, ವಸ್ತುನಿಷ್ಠ ಪಠ್ಯಕ್ರಮಗಳು ಮತ್ತು ರೋಗಿಗಳ ಬಗೆಗಿನ ವಿಶೇಷ ಕಾಳಜಿ ತೋರುವ ನಿಮ್ಹಾನ್ಸ್‌ನ ನಡೆಯು ಈ ಸಂಸ್ಥೆಯನ್ನು ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಕ್ಷೇತ್ರದಲ್ಲಿ ದೇಶದಲ್ಲೇ ಮುಂಚೂಣಿ ಸ್ಥಾನಕ್ಕೆ ತಂದಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
ನಿಮ್ಹಾನ್ಸ್‌ನ ಸಂಸ್ಥೆಯ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿಮ್ಹಾನ್ಸ್‌ನ ಸುವರ್ಣ ಮಹೋತ್ಸವ ಎಂದರೆ ಇಡೀ ದೇಶವೇ ಸಂಭ್ರಮಿಸಬೇಕಾದ ಕಾರ್ಯಕ್ರಮ. ಭಾರತವು ಮಾನಸಿಕ ಕಾಯಿಲೆಗೆ ಸಂಬಂಧಿಸಿದಂತೆ ಪಾಶ್ಚಾತ್ಯ ದೇಶಗಳಿಗಿಂತ ವಿಭಿನ್ನ ಮತ್ತು ಕ್ಲಿಷ್ಟಕರ ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ನಿಟ್ಟಿನಲ್ಲಿ ಬಳ್ಳಾರಿ ಮಾಡೆಲ್ (ಮೂಲಭೂತ ಮಾನಸಿಕ ಆರೋಗ್ಯ ಕಾಳಜಿಗಾಗಿ ಸಮುದಾಯ ಆಧಾರಿತ ಮಾದರಿ) ಮಾನಸಿಕ ಸಮಸ್ಯೆಯನ್ನು ಸ್ಥಳೀಯ ಮಟ್ಟದಲ್ಲಿ ಸರಿಪಡಿರುವ ಯಶಸ್ವಿ ವಿಧಾನವಾಗಿ ಹೊರಹೊಮ್ಮಿದೆ. ಸಂಸ್ಥೆಯು ಆಧುನಿಕ ವೈದ್ಯ ಪದ್ಧತಿ ಜತೆಗೆ ಯೋಗ, ಆಯುರ್ವೇದದ ಮೂಲಕ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ನಡೆಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೇಂದ್ರದ ಆರೋಗ್ಯ ಸಚಿವ ಜೆ. ಪಿ. ನಡ್ಡಾ ಮಾತನಾಡಿ, ವಿಶ್ವದ ಅಗ್ರ 200 ಆಸ್ಪತ್ರೆಗಳಲ್ಲಿ ನಿಮ್ಹಾನ್ಸ್ ಸಹ ಒಂದು ಎಂದವರು ಪ್ರಶಂಶಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ನಿಮ್ಹಾನ್ಸ್ ಸಂಸ್ಥೆಯ ಕಾರ್ಯನಿರ್ವಹಣೆಗಾಗಿ ಪ್ರತಿವರ್ಷ 137 ಕೋಟಿ ರೂ.ಗಳನ್ನು ಒದಗಿಸುವ ಮೂಲಕ ರಾಜ್ಯ ಸರಕಾರ ತನ್ನ ಬದ್ಧತೆಯನ್ನು ನಿರೂಪಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.