Hunsur: ಹೊಸ ವರ್ಷಾಚರಣೆ: ಕೇಕ್ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಬಿಇಒಯಿಂದ ಮಕ್ಕಳ ಆರೋಗ್ಯ ವಿಚಾರಣೆ
Team Udayavani, Jan 4, 2025, 12:13 AM IST
ಹುಣಸೂರು: ಹೊಸ ವರ್ಷದ ಅಂಗವಾಗಿ ಶಾಲೆಯಲ್ಲಿ ಕೇಕ್ ತಿಂದಿದ್ದ 45ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ-ಭೇದಿಯಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಬಿಳಿಕೆರೆ ಹೋಬಳಿಯ ಬೋಳನಹಳ್ಳಿಯ ಶ್ರೀ ಮಂಜುನಾಥ ಅನುದಾನಿತ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದಲ್ಲಿ ನಡೆದಿದೆ.
ಹೊಸವರ್ಷದ ಅಂಗವಾಗಿ ಕೇಕ್ ಕಟ್ ಮಾಡಿ ಮಕ್ಕಳಿಗೆ ವಿತರಿಸಿದ್ದಾರೆ. ಕೇಕ್ ತಿಂದಿದ್ದರಿಂದಾಗಿ ಶುಕ್ರವಾರ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಮಕ್ಕಳನ್ನು ಬೋಳನಹಳ್ಳಿ ಗ್ರಾಮದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಒಮ್ಮೆಲೆ ಬಂದ ಮಕ್ಕಳನ್ನು ಪರೀಕ್ಷಿಸಿದ ವೈದ್ಯೆ ದಾಕ್ಷಯಣಿ ಹಾಗೂ ಸಿಬ್ಬಂದಿ ಅಸ್ವಸ್ಥಗೊಂಡ ಮಕ್ಕಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿದ್ದ ಬಿಇಒ ಮಹದೇವ್, ಮಕ್ಕಳ ಆರೋಗ್ಯ ವಿಚಾರಿಸಿ, ಕೇಕ್ ತಿಂದಿರುವ ಬಗ್ಗೆ ಮಾಹಿತಿ ಪಡೆದುಕೊಂಡು ಶಾಲೆಯ ಮುಖ್ಯಶಿಕ್ಷಕ ಅಶ್ವತ್ ಅವರನ್ನು ತರಾಟೆ ಗೊಳಪಡಿಸಿದರು. ವೈದ್ಯರಿಂದ ಮಾಹಿತಿ ಪಡೆದರು. ಮಕ್ಕಳಿಗೆ ಧೈರ್ಯ ತುಂಬಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಂದ್ರ ಇದ್ದರು.
ಭೇದಿ ಕಾಣಿಸಿಕೊಂಡಿದ್ದ 36 ಮಕ್ಕಳ ಪೈಕಿ 6 ಮಕ್ಕಳು ತಕ್ಷಣವೇ ಚೇತರಿಸಿಕೊಂಡಿದ್ದರಿಂದ ಮನೆಗೆ ಕಳುಹಿಸಲಾಗಿದೆ. ಉಳಿದ ಮಕ್ಕಳನ್ನು ದಾಖಲಿಸಿಕೊಂಡು ಸಂಜೆವರೆಗೆ ಚಿಕಿತ್ಸೆ ನೀಡಿದ ನಂತರ ಚೇತರಿಸಿಕೊಂಡವರನ್ನು ಬಿಡುಗಡೆ ಮಾಡಲಾಗಿದೆ. ಕೇಕ್‌ನ ಸ್ಯಾಂಪಲ್ ಪಡೆದಿದ್ದು, ಲ್ಯಾಬ್‌ಗ ಕಳುಹಿಸಲಾಗುವುದು, ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಶೋಕಾಸ್ ನೋಟಿಸ್:
ಮಕ್ಕಳ ಅಸ್ವಸ್ಥ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಶನಿವಾರ ಮುಖ್ಯ ಶಿಕ್ಷಕರಿಗೆ ಶೋಕಾಸ್ ನೋಟಿಸ್ ನೀಡಲಾಗುವುದೆಂದು ಬಿಇಒ ಮಹದೇವ್ ಪತ್ರಿಕೆಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.