Congress; ಪರಿಷತ್ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ
ಜ. 27ಕ್ಕೆ ಜೆಡಿಎಸ್ನ ತಿಪ್ಪೇಸ್ವಾಮಿ ನಿವೃತ್ತಿ ಬಳಿಕ 4 ಸ್ಥಾನ ತೆರವು
Team Udayavani, Jan 4, 2025, 6:43 AM IST
ಬೆಂಗಳೂರು: ವಿಧಾನ ಪರಿಷತ್ತಿನ 4 ನಾಮನಿರ್ದೇಶನ ಸ್ಥಾನಗಳಿಗೆ ಕಾಂಗ್ರೆಸ್ನಲ್ಲಿ ದಿನೇ ದಿನೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಈ ಅವಕಾಶಕ್ಕಾಗಿ ಆಕಾಂಕ್ಷಿಗಳು ತಿಂಗಳಿಗೂ ಹೆಚ್ಚು ಕಾಲ ಕಾಯಬೇಕಿದೆ. ಆದರೆ ಈ ಕುರಿತಾದ ಲಾಬಿಯಂತೂ ಈಗಲೇ ಆರಂಭವಾಗಿದೆ.
ಯು.ಬಿ. ವೆಂಕಟೇಶ್, ಪ್ರಕಾಶ್ ರಾಥೋಡ್ ಅವರ ನಿವೃತ್ತಿ, ಸಿ.ಪಿ. ಯೋಗೇಶ್ವರ್ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನದ ಜತೆಗೆ ಜ. 27ರಂದು ಜೆಡಿಎಸ್ನ ತಿಪ್ಪೇಸ್ವಾಮಿ ಅವರ ನಿವೃತ್ತಿಯಿಂದ ತೆರವಾಗುತ್ತಿರುವ ಸ್ಥಾನ ಸಹಿತ ಒಟ್ಟು 4 ಸ್ಥಾನಗಳಿಗೆ ನಾಮನಿರ್ದೇಶನ ಮಾಡಲು ಸರಕಾರಕ್ಕೆ ಅವಕಾಶವಿದೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ಕಾಂಗ್ರೆಸ್ನಲ್ಲಿ 4 ಸ್ಥಾನಗಳ ಮೇಲೆ ಒಂದೂವರೆ ಡಜನ್ಗೂ ಹೆಚ್ಚು ಮಂದಿ ಕಣ್ಣಿಟ್ಟಿದ್ದಾರೆ. ಯು.ಬಿ. ವೆಂಕಟೇಶ್, ಪ್ರಕಾಶ್ ರಾಥೋಡ್ ಮತ್ತೂಂದು ಅವಧಿಗೆ ಪ್ರಯತ್ನ ನಡೆಸಿದ್ದಾರೆ. ಜತೆಗೆ ಮೇಲ್ಮನೆಯ ಮಾಜಿ ಸಭಾಪತಿಗಳಾದ ಡಾ| ಬಿ.ಎಲ್. ಶಂಕರ್, ವಿ.ಆರ್. ಸುದರ್ಶನ, ಮಾಜಿ ಸಚಿವೆ ರಾಣಿ ಸತೀಶ್ ಸಹಿತ ಹಲವು ಮಾಜಿ ಸಚಿವರು, ಮಾಜಿ ಶಾಸಕರ ಹೆಸರು ಚಲಾವಣೆಯಲ್ಲಿವೆ.
ಈ ನೇಮಕಾತಿ ಸಂಬಂಧ ಈಗಾಗಲೇ ಸಚಿವ ಸಂಪುಟ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಟ್ಟಿದ್ದರೂ ಜಾತಿ, ಜಿಲ್ಲೆ, ಪ್ರಾದೇಶಿಕ ಸಮತೋಲನ ಎಲ್ಲವನ್ನು ಪರಿಗಣಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ. ಉಪ ಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ ಬಳಿಕ ಸಂಭವನೀಯ ಪಟ್ಟಿ ಸಿದ್ಧವಾಗುವ ಸಾಧ್ಯತೆಗಳಿವೆ. ಅನಂತರ ಇಬ್ಬರೂ ದಿಲ್ಲಿಗೆ ತೆರಳಿ ಪಕ್ಷದ ಹೈಕಮಾಂಡ್ ಜತೆ ಸಮಾಲೋಚನೆ ನಡೆಸಿದ ಬಳಿಕವೇ ಪಟ್ಟಿ ಬಿಡುಗಡೆ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.