Udupi; ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನಿಲ್ ಕುಮಾರ್ ಆಕ್ರೋಶ
Team Udayavani, Jan 4, 2025, 4:35 PM IST
ಉಡುಪಿ: ಸಮಾಜ ಸುಧಾರಕ, ಸನಾತನ ಧರ್ಮದ ಪ್ರತಿಪಾದಕ ಶ್ರೀನಾರಾಯಣ ಗುರುಗಳನ್ನು ಸನಾತನ ಧರ್ಮದ ಶತ್ರು ಎಂದು ಬಿಂಬಿಸುವ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಾರಾಯಣ ಗುರುಗಳನ್ನು ಅವಮಾನಿಸಿದ್ದಾರೆ. ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅವರ ಹೇಳಿಕೆ ದುರುದ್ದೇಶಪೂರಿತ ಮತ್ತು ಸಂಪೂರ್ಣ ಖಂಡನೀಯ. ತರ್ಕಬದ್ಧ ಚಿಂತನೆಯನ್ನು ಉತ್ತೇಜಿಸುವ ನೆಪದಲ್ಲಿ ಹಿಂದೂ ನಂಬಿಕೆಗಳನ್ನು ಅವರು ಅವಮಾನಿಸಿದ್ದಾರೆ ಎಂದು ಕಾರ್ಕಳ ಶಾಸಕ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಹೇಳಿದ್ದಾರೆ.
ಸನಾತನ ಧರ್ಮವನ್ನು ದ್ವೇಷಿಸಬೇಕು ಎಂಬುದು ವಿಜಯನ್ ಅವರ ಶಿವಗಿರಿ ಸಮಾವೇಶದಲ್ಲಿ ಭಾಷಣದ ತಿರುಳು. ಅವರ ಹೇಳಿಕೆಯನ್ನು ಖಂಡಿಸುವೆ. ಅವರ ಹೇಳಿಕೆ ಹಿಂದೂಗಳನ್ನು ಘಾಸಿಗೊಳಿಸಿದೆ. ಅವರ ಮಾತುಗಳು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂಬ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯ ಮುಂದುವರಿದ ಭಾಗದಂತಿದೆ. ಹಿಂದೂಗಳ ಮೇಲೆ ನಿರಂತರ ದಾಳಿ, ದಬ್ಬಾಳಿಕೆ, ಕೊಲೆಯಂತಹ ಪೈಶಾಚಿಕ ಕೃತ್ಯ ನಡೆಸಿಕೊಂಡು ಹಿಂದೂಗಳ ಮೇಲಿನ ಅಕ್ರಮಣವನ್ನು ಪೋಷಿಸಿದ ಪ್ಯಾಶಿಸ್ಟ್ ಪಿಣರಾಯಿ ನೇತೃತ್ವದ ಕೇರಳ ಸರಕಾರ ಇದೀಗ ಹಿಂದೂ ಧರ್ಮ ಪ್ರತಿಪಾದಕರನ್ನು ನಿಂದಿಸಿ, ಧರ್ಮದ ಅವಹೇಳನಕ್ಕೆ ಮುಂದಾಗಿದೆ. ಹಿಂದೂ ಸಮಾಜ ಸುಧಾರಕರ ವಿರುದ್ಧ ಅಲ್ಲಿನ ಸರಕಾರ ಮಾತನಾಡಲು ಆರಂಭಿಸಿದೆ. ಕಮ್ಯುನಿಸ್ಟ್ ನ ಹಿಂದೂ ವಿರೋಧಿ ಇಂತಹ ದ್ವೇಷ ಪ್ರಚಾರವನ್ನು ಕೇರಳದ ಜನರು ತಿರಸ್ಕರಿಸಬೇಕು ಅಲ್ಲದೆ ಸಮಾಜ ಸುಧಾರಕರ ವಿರುದ್ಧ ಇಷ್ಟೊಂದು ಕೆಳ ಮಟ್ಟಕ್ಕೆ ಇಳಿದು ಸಾರ್ವಜನಿಕವಾಗಿ ಮಾತನಾಡಿದ ಕೇರಳ ಸಿಎಂ ವಿರುದ್ಧ ಸಮಸ್ತ ಹಿಂದೂಗಳು ತರಾಟೆಗೆ ತೆಗೆದುಕೊಂಡು ಸಿಎಂ ವಿರುದ್ದ ಎದ್ದೆಳಬೇಕು ಎಂದರು.
ಹಿಂದೂ ಧರ್ಮ ಪ್ರತಿಪಾದಕರ ಬಗ್ಗೆ ಬಾಲಿಶ ಹೇಳಿಕೆ ನೀಡುವ ಪಿಣರಾಯಿ ಅನ್ಯ ಧರ್ಮಧ ಧರ್ಮಗುರುಗಳ ಬಗ್ಗೆ ಇಂತಹ ಮಾತುಗಳನ್ನು ಹೇಳಲು ಸಿಎಂಗೆ ಧೈರ್ಯವಿದೆಯೇ ಎಂದು ಸುನಿಲ್ ಕುಮಾರ್ ಸವಾಲು ಹಾಕಿದರು.
ಈ ಹಿಂದೆ ಶಬರಿಮಲೆಯ ಅಯ್ಯಪ್ಪ ಸನ್ನಿಧಿಯಲ್ಲಿ ಹಿಂದೂಗಳ ನಂಬಿಕೆಗೆ ಸವಾಲು ಹಾಕಲು ಯತ್ನಿಸಿದ್ದ ಪಿಣರಾಯಿ ಇದೀಗ ನಾರಾಯಣ ಗುರುಗಳು ಸನಾತನ ಧರ್ಮದ ವಕ್ತಾರರೂ ಅಲ್ಲ, ಸಾಧಕರೂ ಅಲ್ಲ ಎಂದು ಪುಣ್ಯಭೂಮಿ ಶಿವಗಿರಿಯಲ್ಲಿ ಹೇಳಿ ಸನಾತನ ಧರ್ಮ ಮತ್ತು ಶ್ರೀ ನಾರಾಯಗಳ ಧಾರ್ಮಿಕ ಮೌಲ್ಯಗಳನ್ನು ತುಳಿಯುವ ನೀಚ, ಹೀನ ಕೃತ್ಯಕ್ಕೆ ಇಳಿದಿದೆ. ಇದು ಇಡೀ ಹಿಂದೂ ಸಮಾಜಕ್ಕೆ ಪಿಣರಯಿ ಮಾಡಿದ ಮಹಾದ್ರೋಹ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.