ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ
ಎರಡು ಕಾರುಗಳು ಜಖಂ, ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ: ಸವಾರರ ಪರದಾಟ
Team Udayavani, Jan 4, 2025, 10:46 PM IST
ಹುಣಸೂರು: ಮೈಸೂರು-ಹುಣಸೂರು ಹೆದ್ದಾರಿಯ ಸೋಮನಹಳ್ಳಿ ಬಳಿಯಲ್ಲಿ ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 6 ಮಂದಿ ತೀವ್ರ ಗಾಯಗೊಂಡಿದ್ದು, ಗಾಯಾಳುಗಳನ್ನು ಮೈಸೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತೊಡಕು ಉಂಟಾಗಿ ಅಸ್ತವ್ಯಸ್ತವಾಗಿತ್ತು.
ಹುಣಸೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಚಿತ್ರದುರ್ಗ ಮೂಲದ ಓಮಿನಿ ಹಾಗೂ ಮೈಸೂರು ಕಡೆಯಿಂದ ಬರುತ್ತಿದ್ದ ತಮಿಳುನಾಡಿನ ರಿಜಿಸ್ಟೇಷನ್ ಇರುವ ಮಾರುತಿ ಎಕ್ಸ್ ವಿ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಓಮಿನಿ ಸಂಪೂರ್ಣ ನಜ್ಜುಗುಜ್ಜಾಗಿದ್ದರೆ. ಎಕ್ಸ್ ವಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು. ಎರಡೂ ಕಾರಿನಲ್ಲಿದ್ದ 6 ಮಂದಿಗೆ ತೀವ್ರಗಾಯವಾಗಿದೆ. ಘಟನೆಯನ್ನು ಕಂಡ ಸ್ಥಳೀಯರು ಹಾಗೂ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನ ಸವಾರರು ಗಾಯಾಳುಗಳನ್ನು ಮೈಸೂರಿನ ವಿವಿಧ ಆಸ್ಪತ್ರೆಗೆ ಸಾಗಿಸಿದ್ದಾರೆ.
ಸಾಲುಗಟ್ಟಿ ನಿಂತ ವಾಹನಗಳು:
ಅಪಘಾತದಿಂದ ಹೆದ್ದಾರಿಯ ಎರಡೂ ಕಡೆ ಸುಮಾರು 2 ಕಿ.ಮೀ. ನಷ್ಟು ದೂರ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು. ಎಚ್.ಡಿ.ಕೋಟೆಯಲ್ಲಿ ನಡೆದ ಹನುಮ ಜಯಂತಿ ಬಂದೋಬಸ್ತ್ ತೆರಳಿದ್ದರಿಂದಾಗಿ ಬೆರಳೆಣಿಕೆಯಲ್ಲಿದ್ದ ಪೊಲೀಸರು ವಾಹನಗಳನ್ನು ತೆರವುಗೊಳಿಸಲು ಹರಸಾಹಸಪಟ್ಟರು. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
Mangaluru ಎಚ್‌ಎಂಪಿ ವೈರಸ್; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ
BJP Leader; ಇಂಡಿಯಾ ಗೇಟ್‌ಗೆ “ಭಾರತ್ ಮಾತಾ ದ್ವಾರ’ ಹೆಸರಿಡಿ: ಮೋದಿಗೆ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.