CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ
Team Udayavani, Jan 4, 2025, 11:19 PM IST
ಕಾಸರಗೋಡು: ಅಡಿಕೆಯು ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತಿದೆ ಎಂಬ ಬಗ್ಗೆ ಕಾಸರ ಗೋಡು ಕೇಂದ್ರೀಯ ತೋಟದ ಬೆಳೆಗಳ ಸಂಶೋಧನ ಸಂಸ್ಥೆ(ಸಿಪಿಸಿಆರ್ಐ)ಯು ಕೇಂದ್ರ ಸರಕಾರದ ಅನುದಾನದೊಂದಿಗೆ ಸಂಶೋಧನೆ ನಡೆಸಲಿದೆ ಎಂದು ಸಿಪಿಸಿಆರ್ಐ ನಿರ್ದೇಶಕ ಡಾ| ಕೆ.ಬಿ.ಹೆಬ್ಟಾರ್ ಹೇಳಿದರು.
ಸಿಪಿಸಿಆರ್ಐಯಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಸುಸ್ಥಿರ ಅಭಿವೃದ್ಧಿ ಗುರಿಗಳಿಗಾಗಿ ನೆಡುತೋಪು ವಲಯವನ್ನು ಬಳಸಿಕೊಳ್ಳುವುದು ಎಂಬ ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಕಲ್ಪ ಅಗ್ರಿಟೆಕ್ ಎಕ್ಸ್ಪೋ ಉದ್ಘಾಟನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಕೃಷಿ ಮತ್ತು ಕೃಷಿ ಸಂಶೋಧನ ಸಚಿವಾಲಯದ 9.9 ಕೋಟಿ ರೂ. ಅನುದಾನದಲ್ಲಿ ಸಂಶೋಧನೆ ಕೈಗೊಳ್ಳಲಾಗುವುದು ಹಾಗೂ ಮೂರು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು. ಸಂಶೋಧನ ತಂಡವು ಅಖೀಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಾಷ್ಟ್ರೀಯ ಸಸ್ಯಶಾಸ್ತ್ರೀಯ ಸಂಶೋಧನ ಸಂಸ್ಥೆ, ಸೆಲ್ಯುಲಾರ್ ಮತ್ತು ಜೀವಶಾಸ್ತ್ರ ಕೇಂದ್ರ, ಭಾರತೀಯ ವಿಜ್ಞಾನ ಸಂಸ್ಥೆ, ಜವಾಹರಲಾಲ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆ, ಕೇಂದ್ರ ಆಹಾರ ತಾಂತ್ರಿಕ ಸಂಶೋಧನ ಸಂಸ್ಥೆಗಳಿಂದ ಪ್ರಾತಿನಿಧ್ಯ ಹೊಂದಿರುತ್ತದೆ. ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಕೆ.ಎಸ್.ಹೆಗ್ಡೆ ವೈದ್ಯಕೀಯ ಅಕಾಡೆಮಿ ಮತ್ತು ಎಸ್ಡಿಎಂ ಕಾಲೇಜ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ಆಸ್ಪತ್ರೆಗಳ ನೆರವನ್ನು ಪಡೆಯಲಿದೆ ಎಂದರು.
ಐಸಿಎಆರ್ ಮಹಾನಿರ್ದೇಶಕ ಡಾ| ಹಿಮಾಂಶು ಪಾಠಕ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
Mangaluru ಎಚ್ಎಂಪಿ ವೈರಸ್; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ
BJP Leader; ಇಂಡಿಯಾ ಗೇಟ್ಗೆ “ಭಾರತ್ ಮಾತಾ ದ್ವಾರ’ ಹೆಸರಿಡಿ: ಮೋದಿಗೆ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.