ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Team Udayavani, Jan 5, 2025, 6:57 AM IST
ಬೆಳ್ತಂಗಡಿ: ಗೋವಿನ ತಲೆ,ಮೃತದೇಹ, ಚರ್ಮ, ಮೂಳೆ ಮೊದಲಾದ ಅವಶೇಷಗಳನ್ನು ಮೃತ್ಯುಂಜಯ ನದಿಗೆ ಎಸೆದ ಘಟನೆಯನ್ನು ಖಂಡಿಸಿ ವಿಹಿಂಪ ಮತ್ತು ಬಜರಂಗ ದಳದವರು ಜ. 6ರಂದು ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಅನ್ನಾರು ಸೇತುವೆ ಬಳಿ ಮೃತ್ಯುಂಜಯ ನದಿಗೆ ಡಿ.17ರಂದು ಕಿಡಿಗೇಡಿಗಳು 11 ಗೋಣಿ ಚೀಲಗಳಲ್ಲಿ ಗೋಮಾಂಸದ ಅವಶೇಷ ಹಾಗೂ ಕರುವಿನ ಮೃತದೇಹವನ್ನು ಎಸೆದಿರುವುದು ಕಂಡುಬಂದಿತ್ತು.
ಜ.3ರಂದು ಉಜಿರೆಯ ಶಾರದಾ ಮಂಟಪದಲ್ಲಿ ಜರಗಿದ ಸಭೆಯಲ್ಲಿ ಹಿಂದೂ ಸಂಘಟನೆಗಳು ಭಾಗವಹಿಸಿ ಜ.6ರಂದು ಕಕ್ಕಿಂಜೆಯಲ್ಲಿ ನಡೆಯಲಿರುವ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಸೂಚಿಸಿವೆ. ಡಿ.30ರಂದು ಕಕ್ಕಿಂಜೆಯಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಒಂದು ವಾರದೊಳಗೆ ಆರೋಪಿಗಳನ್ನು ಪತ್ತೆ ಹಚ್ಚುವುದಾಗಿ ಪೊಲೀಸ್ ಇಲಾಖೆ ತಿಳಿಸಿದ್ದ ಕಾರಣ ಮುಂದೂಡಲಾಗಿತ್ತು ಎಂದು ಬಜರಂಗದಳ ತಾಲೂಕು ಅಧ್ಯಕ್ಷ ದಿನೇಶ್ ಚಾರ್ಮಾಡಿ ತಿಳಿಸಿದ್ದಾರೆ.
ದೇಗುಲ ಅಪವಿತ್ರ ಉದ್ದೇಶ
ನದಿ ಪರಿಸರದಲ್ಲಿ ಧರ್ಮಸ್ಥಳ, ಪಜಿರಡ್ಕ ಸಹಿತ ಅನೇಕ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿದ್ದು, ಅವುಗಳನ್ನು ಅಪವಿತ್ರಗೊಳಿಸುವ ಹುನ್ನಾರ ಇದರ ಹಿಂದಿದೆ. ಜತೆಗೆ ಪ್ರತಿನಿತ್ಯ ಅಯ್ಯಪ್ಪ ವ್ರತಧಾರಿಗಳು ಸ್ನಾನಕ್ಕೆ ಬರುವಂಥ ಜಾಗದಲ್ಲೇ ಉದ್ದೇಶಪೂರ್ವಕ ವಾಗಿ ಈ ಕೃತ್ಯ ಎಸಗಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನದಿಯಲ್ಲಿ ಗೋವಿನ ಮೃತದೇಹ ಪತ್ತೆ ಆಗಿರುವ ಬಗ್ಗೆ ಈ ಹಿಂದೆ ದೂರು ನೀಡಿದ್ದರೂ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?
Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ
Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ
ಜನಾಭಿಪ್ರಾಯಕ್ಕೆ ಬೆಲೆ ಕೊಡದಿದ್ದರೆ ಪ್ರಜಾಪ್ರಭುತ್ವ ಉಳಿಯದು: ಜಗದೀಪ್ ಧನ್‌ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ಧ ಕೇಸ್
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.