ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
Team Udayavani, Jan 5, 2025, 6:30 AM IST
ಮಂಗಳೂರು: ಟ್ರಾವೆಲ್ ಏಜೆನ್ಸಿಯೊಂದರ ಮೂಲಕ ಮೆಕ್ಕಾ – ಮದೀನಾ ಯಾತ್ರೆಗೆ ತೆರಳಿ ವಂಚನೆಗೊಳಗಾಗಿ ಊರಿಗೆ ಮರಳಲು ಸಾಧ್ಯವಾಗದೆ ಸಂಕಷ್ಟದಲ್ಲಿ ಸಿಲುಕಿದ್ದವರನ್ನು ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಸ್ನೇಹಿತರ ಮೂಲಕ ಊರಿಗೆ ಕರೆಸಿಕೊಂಡಿದ್ದಾರೆ.
ಕಬಕದ ಟ್ರಾವೆಲ್ ಏಜೆನ್ಸಿಯೊಂದು ಉಮ್ರಾ ಯಾತ್ರೆಗಾಗಿ 17 ದಿನಗಳ ಹಿಂದೆ 172 ಮಂದಿಯನ್ನು ಕರೆದೊಯ್ದಿತ್ತು. ಅವರನ್ನು ಮೆಕ್ಕಾಕ್ಕೆ ಕರೆದುಕೊಂಡು ಹೋಗಿ ಬಳಿಕ ಮದೀನಾಕ್ಕೆ ತೆರಳಿದ್ದರು. ಅಲ್ಲಿ ಅಷ್ಟೂ ಮಂದಿಯನ್ನು ಬಿಟ್ಟು ಏಜೆನ್ಸಿಯವರು ಭಾರತಕ್ಕೆ ವಾಪಸ್ ಬಂದಿದ್ದರಿಂದ ಯಾತ್ರಿಕರು ಅತಂತ್ರರಾಗಿದ್ದರು.
ನೂರಕ್ಕೂ ಅಧಿಕ ಮಂದಿ ಸಂಬಂಧಿಕರ ನೆರವಿನಿಂದ ಊರಿಗೆ ವಾಪಸಾಗಿದ್ದಾರೆ. ಆದರೆ ಮಹಿಳೆಯರು, ವೃದ್ಧರು ಸಹಿತ 58 ಮಂದಿ ನೆರವು ಸಿಗದೆ ಕಂಗಾಲಾಗಿದ್ದರು. ವಿಷಯ ತಿಳಿದ ಮೊಯ್ದಿನ್ ಬಾವ, ತತ್‌ಕ್ಷಣ ಸೌದಿಯಲ್ಲಿದ್ದ ತನ್ನ ಸ್ನೇಹಿತರು ಹಾಗೂ ವಿವಿಧ ಸಂಘಟನೆಗಳನ್ನು ಸಂಪರ್ಕಿಸಿ ಅಷ್ಟೂ ಮಂದಿಯ ಪ್ರಯಾಣದ ಹಣವನ್ನು ಹೊಂದಿಸಿದ್ದಾರೆ. ಪರಿಣಾಮವಾಗಿ ಸಂತ್ರಸ್ತರೆಲ್ಲರೂ ಮಂಗಳೂರು, ಕಣ್ಣೂರು, ಕೋಯಿಕ್ಕೋಡ್, ಬೆಂಗಳೂರು ವಿಮಾನ ನಿಲ್ದಾಣ ಮೂಲಕ ಊರಿಗೆ ಮರಳಿದ್ದಾರೆ.
ಟ್ರಾವೆಲ್ ಏಜೆನ್ಸಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಸುದ್ದಿಗಾರರೊಂದಿಗೆ ಮಾತನಾಡಿದ ಮೊಯ್ದಿನ್ ಬಾವ, ಮದೀನಾದಲ್ಲಿ ಯಾತ್ರಾರ್ಥಿಗಳು ಸಿಲುಕಿರುವ ಸುದ್ದಿ ತಿಳಿದ ಕೂಡಲೇ ಸ್ನೇಹಿತರ ಮೂಲಕ ಅವರ ಸುರಕ್ಷೆಗೆ ಆದ್ಯತೆ ನೀಡಲಾಯಿತು. ಬಳಿಕ 58 ಮಂದಿಯ ಪ್ರಯಾಣ ವೆಚ್ಚವನ್ನು ನಾವೆಲ್ಲರೂ ಸೇರಿ ಹೊಂದಿಸಿ ಅವರನ್ನು ಊರಿಗೆ ಕರೆತಂದಿದ್ದೇವೆ. ರಿಟರ್ನ್ ಟಿಕೆಟ್ ಇಲ್ಲದೆ ಕೇವಲ ಡಮ್ಮಿ ಟಿಕೆಟ್ ಪಡೆದುಕೊಂಡು ವಂಚಿಸುವ ಇಂತಹ ಟ್ರಾವೆಲ್ ಏಜೆನ್ಸಿ ವಿರುದ್ಧ ಹಾಗೂ ಇದಕ್ಕೆ ಅವಕಾಶ ನೀಡುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅವುಗಳ ಲೈಸನ್ಸ್ ಅನ್ನೂ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ವಂಚನೆಗೊಳಗಾಗಿರುವ ಬಗ್ಗೆ ಸಂತ್ರಸ್ತರೆಲ್ಲರೂ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ತೆರಳಿ ದೂರು ದಾಖಲಿಸಬೇಕು ಎಂದು ಬಾವ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
ಕ್ಯುಆರ್ ಕೋಡ್ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ
Tannirbhavi: ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ
Mangaluru ಎಚ್‌ಎಂಪಿ ವೈರಸ್; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.