Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
ಮೈಸೂರಿನ ಭಾಷಾ ಸಮ್ಮೇಳನ
Team Udayavani, Jan 5, 2025, 6:40 AM IST
ಮೈಸೂರು: “ಹಿಂದಿ ಭಾಷೆ ರಾಷ್ಟ್ರೀಯ ಏಕತೆಯನ್ನು ಬಲಪಡಿಸುವ ಮಾಧ್ಯಮವೂ ಆಗಿದ್ದು, ಹಿಂದಿಯನ್ನು ಸಂವಾದದ ಭಾಷೆಯನ್ನಾಗಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ’.ಹೀಗೆಂದು ಹೇಳಿರುವುದು ಕೇಂದ್ರ ಗೃಹ ವ್ಯವ ಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್.
ಕರ್ನಾಟಕ ರಾಜ್ಯ ಮುಕ್ತ ವಿ.ವಿ.ಯ ಘಟಿಕೋತ್ಸವ ಭವನದಲ್ಲಿ ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಭಾಷಾ ವಿಭಾಗ ಶನಿವಾರ ಆಯೋಜಿಸಿದ್ದ ದಕ್ಷಿಣ ಹಾಗೂ ನೈಋತ್ಯ ವಿಭಾಗದ ಅಧಿಕೃತ ಭಾಷಾ ಸಮ್ಮೇಳನ, ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತ ಮತ್ತು ಜಗತ್ತಿನಲ್ಲಿ ಹಿಂದಿ ಭಾಷೆ ತನ್ನದೇ
ಆದ ಸ್ಥಾನ ಹೊಂದಿದೆ. ಹಿಂದಿಯನ್ನು ಸಂವಾದದ ಭಾಷೆಯನ್ನಾಗಿ ಮಾಡಲು ನಾವು ಸಂಕಲ್ಪ ಮಾಡಿ ದ್ದೇವೆ. ತಮಿಳು, ಕನ್ನಡ, ತೆಲುಗು, ಮಲಯಾಳಂ ಭಾಷೆಗಳನ್ನು ಮಾತನಾಡುವ ದಕ್ಷಿಣ ಭಾರತದಲ್ಲಿ ಹಿಂದಿಯೂ ಪ್ರಮುಖ ಭಾಷಾ ಮಾಧ್ಯಮವಾಗಿದೆ. ಇದು ಜನರಿಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಂವಾದದಲ್ಲಿ ಭಾಗವಹಿ ಸಲು ಅವಕಾಶ ಕಲ್ಪಿಸುತ್ತದೆ ಎಂದು ಸಚಿವರು ಹೇಳಿದರು.
ಮಾತೃಭಾಷೆ ಜತೆಗೆ ಹಿಂದಿಗೆ ಒತ್ತು
ಕೇಂದ್ರ ಸರಕಾರವು ಹಿಂದಿಯ ಜತೆಗೆ ಮಾತೃ ಭಾಷಾ ಕಲಿಕೆ ಹಾಗೂ ಅಭಿವೃದ್ಧಿಗೆ ಮಹತ್ವ ನೀಡಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪ್ರಾದೇಶಿಕ ಭಾಷೆಗಳಿಗೂ ಆದ್ಯತೆ ಕೊಡಲಾಗಿದೆ ಎಂದು ಹೇಳಿದ ಅವರು, ರಾಷ್ಟ್ರೀಯ ಏಕೀಕರಣದಲ್ಲಿ ಹಿಂದಿ ಪಾತ್ರ ದೊಡ್ಡದು. ಮಹಾತ್ಮಾ ಗಾಂಧಿ ಅವರೂ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆ ಸ್ಥಾಪಿಸಿದ್ದರು ಎಂದು ಸ್ಮರಿಸಿದರು.
ಅಧಿಕೃತ ಭಾಷಾ ಇಲಾಖೆಯು ಕಂಠಸ್ಥ, ಲೀಲಾ ಆಪ್, ಇ-ಮಹಾ ಶಬ್ದ ಸಿಂಧು ಇತ್ಯಾದಿಗಳನ್ನು ಒಳಗೊಂಡಿರುವ ತಾಂತ್ರಿಕ ಅಭಿವೃದ್ಧಿಯಲ್ಲಿ ಪ್ರಮುಖ ಕಾರ್ಯ ನಿರ್ವಹಿಸುತ್ತಿದೆ. ಇದರ ಮೂಲಕ ಯಾವುದೇ ಭಾರತೀಯ ಭಾಷೆಯಲ್ಲಿರುವ ಯಾವುದೇ ಅಕ್ಷರವನ್ನು ಬಹು ಭಾಷೆಗಳಿಗೆ ತತ್‌ಕ್ಷಣವೇ ಅನುವಾದಿಸಬಹುದು. ಇದು ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳ ನಡುವೆ 15 ಭಾರತೀಯ ಭಾಷೆಗಳಲ್ಲಿ ಅವರ ಮೊದಲ ಅಧಿಕೃತ ಭಾಷೆ
ಯಲ್ಲಿ ಪತ್ರ ವ್ಯವಹಾರವನ್ನು ಸಕ್ರಿಯಗೊಳಿಸುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್ ಡಿನ್ನರ್‌ಗೆ ಹೈ ಕಮಾಂಡ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.