Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ
ಜೆಡಿಎಸ್, ಜಿಟಿಡಿಯದು ಗಂಡ- ಹೆಂಡತಿ ಸಂಬಂಧ: ಕೇಂದ್ರ ಸಚಿವ ಕುಮಾರಸ್ವಾಮಿ
Team Udayavani, Jan 5, 2025, 6:35 AM IST
ಮೈಸೂರು: ರಸ್ತೆಗೆ ತಮ್ಮ ಹೆಸರನ್ನಿಡುವ ವಿಷಯ ವಿವಾದದ ಸ್ವರೂಪ ಪಡೆದುಕೊಂಡರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾಣಮೌನಕ್ಕೆ ಶರಣಾಗಿದ್ದಾರೆ. ರಸ್ತೆಗೆ ತಮ್ಮ ಹೆಸರಿಡಬೇಕು ಎನ್ನುವ ಆಕಾಂಕ್ಷೆ ಬಹುಶಃ ಅವರಿಗೆ ಇರಬಹುದು. ಅದಕ್ಕೇ ಮೌನವಾಗಿದ್ದುಕೊಂಡು ಪಕ್ಷದ ಕಾರ್ಯಕರ್ತರನ್ನು ಮುಂದಿಟ್ಟು ಚಿತಾವಣೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದರು.
ಸುದ್ದಿಗಾರರೊಂದಿಗೆ “ಪ್ರಿನ್ಸೆಸ್ ರಸ್ತೆ’ ನಾಮಕರಣ ವಿವಾದ ಸಂಬಂಧ ಮಾತನಾಡಿ, ಸಿದ್ದರಾಮಯ್ಯ ಅವರಿಗೆ ಯಾವುದಾರೂ ರಸ್ತೆ ಅಥವಾ ಬಡಾವಣೆಗೆ ತಮ್ಮ ಹೆಸರು ಇಡಬೇಕು ಎನ್ನುವ ಮನಸ್ಸಿದ್ದರೆ ಇಡೀ ರಾಜ್ಯಕ್ಕೇ ಅವರ ಹೆಸರನ್ನು ಇಟ್ಟು ಬಿಡಲಿ ಎಂದು ಲೇವಡಿ ಮಾಡಿದರು. ಹೆಸರಿನ ರಾಜಕಾರಣವನ್ನು ಸಿದ್ದರಾಮಯ್ಯ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಜೆಡಿಎಸ್, ಜಿಟಿಡಿಯದು ಗಂಡ- ಹೆಂಡತಿ ಸಂಬಂಧ: ಎಚ್‌ಡಿಕೆ
ಜನತಾದಳದ್ದೂ ಜಿ.ಟಿ. ದೇವೇಗೌಡರದೂ ಗಂಡ-ಹೆಂಡತಿ ಸಂಬಂಧದಂತೆ. ಜಗಳ, ಮುನಿಸು ಇರುತ್ತದೆ. ಹಾಗಂತ ಸಂಬಂಧವೇನೂ ಮುರಿಯುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಜೆಡಿಎಸ್‌ನಿಂದ ಶಾಸಕ ಜಿಟಿಡಿ ದೂರ ಉಳಿದಿರುವ ವಿಚಾರಕ್ಕೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಆಯಾಯ ಸಂದರ್ಭಕ್ಕೆ ತಕ್ಕಂತೆ ಜಿ.ಟಿ. ದೇವೇಗೌಡರು ತಮಗೆ ಅನ್ನಿಸಿದ್ದನ್ನು ಹೇಳುತ್ತಾರೆ. ಅಷ್ಟಕ್ಕೆ ನಮ್ಮ-ಅವರ ಸಂಬಂಧ ಮುಗಿಯಿತು ಎಂದು ಅರ್ಥವಲ್ಲ. ಅವರು ಯಾವ ಪಕ್ಷಕ್ಕೂ ಹೋಗುವುದಿಲ್ಲ. ನಮ್ಮಲ್ಲೇ ನಮ್ಮ ಜತೆಯೇ ಇದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್ ಡಿನ್ನರ್‌ಗೆ ಹೈ ಕಮಾಂಡ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.