Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ನಮ್ಮ ಬಗ್ಗೆ ಕಾಂಗ್ರೆಸ್ ಚಿಂತೆ ಮಾಡೋದು ಬೇಡ ಕಾಂಗ್ರೆಸನ್ನು ಗಂಭೀರವಾಗಿ ಪರಿಗಣಿಸಲ್ಲ: ಮಾಜಿ ಸಿಎಂ
Team Udayavani, Jan 5, 2025, 4:14 AM IST
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಪ್ ಅನ್ನು ಸೋಲಿಸಲು ಕಾಂಗ್ರೆಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿವೆ ಎಂದು ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ. ನವದೆಹಲಿಯಲ್ಲಿ ಶನಿವಾರ ಮಾತನಾಡಿದ ಅವರು, ತೆರೆಮರೆಯಲ್ಲಿ ನಮ್ಮ ವಿರುದ್ಧ ಕೆಲಸ ಮಾಡುವ ಬದಲು ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ನಡುವಿನ ಮೈತ್ರಿಯನ್ನು ಬಹಿರಂಗವಾಗಿಯೇ ಘೋಷಿಸಿಕೊಳ್ಳಬೇಕು ಎಂದು ಸವಾಲು ಹಾಕಿದ್ದಾರೆ.
ಈ ಮೂಲಕ ಕಾಂಗ್ರೆಸ್ ಮತ್ತು ಆಪ್ ನಡುವಿನ ಬಾಂಧವ್ಯದಲ್ಲಿ ಮತ್ತಷ್ಟು ಬಿರುಕು ಮೂಡಿರುವುದು ವ್ಯಕ್ತವಾಗಿದೆ. ಇತ್ತೀಚೆಗಷ್ಟೇ “ಇಂಡಿಯಾ’ ಒಕ್ಕೂಟದಲ್ಲಿ ಕಾಂಗ್ರೆಸ್ ನಾಯಕತ್ವ ವಿರುದ್ಧ ಆಪ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಹರ್ಯಾಣ ವಿಧಾನಸಭೆ ಚುನಾವಣೆ ಬಳಿಕ 2 ಪಕ್ಷಗಳ ನಡುವಿನ ಬಾಂಧವ್ಯ ಹದಗೆಡಲು ಆರಂಭವಾಗಿದೆ.
ಇದಕ್ಕೂ ಮೊದಲು ಪಂಜಾಬ್ನ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ರಾಜ್ಯದಲ್ಲಿಯೂ ಕೂಡ ಪ್ರತಿ ತಿಂಗಳು ಮಹಿಳೆಯರಿಗೆ 1000 ರೂ. ನೆರವು ನೀಡಬೇಕು ಎಂದು ನವದೆಹಲಿಯ ಕೇಜ್ರಿವಾಲ್ ನಿವಾಸದಲ್ಲಿ ಪ್ರತಿಭಟನೆ ನಡೆಸಿದ್ದರು. ಅದನ್ನು ಲೇವಡಿ ಮಾಡಿದ್ದ ಕೇಜ್ರಿವಾಲ್ ಅವರೆಲ್ಲರೂ ಪಂಜಾಬ್ನ ಮಹಿಳೆಯರಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗೆ ಸೇರಿದವರು ಎಂದು ಲೇವಡಿ ಮಾಡಿದ್ದರು. ಇದೇ ವೇಳೆ, ಕೆಲವು ಮಾಧ್ಯಮ ವ್ಯಕ್ತಿಗಳನ್ನು ನಿಷೇಧಿಸಿರುವ ಕಾಂಗ್ರೆಸ್ ಪಕ್ಷವನ್ನು ಜನರು ಗಂಭೀರವಾಗಿ ಪರಿಗಣಿಸುವುದನ್ನು ನಿಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್ಪೋಲ್’
Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್ ಡಿನ್ನರ್ಗೆ ಹೈ ಕಮಾಂಡ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.