Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Team Udayavani, Jan 5, 2025, 9:38 AM IST
ಬೆಂಗಳೂರು: ಅಕ್ರಮವಾಗಿ ವಶಪಡಿಸಿಕೊಂಡ ಆಟೋವನ್ನು ಬಿಡುಗಡೆ ಮಾಡಲು 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟ ಸಂಜಯ್ ನಗರ ಪೊಲೀಸ್ ಠಾಣೆಯ ಎಎಸ್‌ಐ ಸೇರಿದಂತೆ ಇಬ್ಬ ರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಸಂಜಯ್ ನಗರ ಪೊಲೀಸ್ ಠಾಣೆಯ ಎಎಸ್‌ಐ ವಿಜಯ್ ಕುಮಾರ್ ಹಾಗೂ ಲಂಚ ಪಡೆಯಲು ಸಹಕರಿಸಿದ ಸಾರ್ವಜನಿಕ ವ್ಯಕ್ತಿ ಸಯ್ಯದ್ ರಿಜ್ವಾನ್ ಬಂಧಿತರು. ಕೆ.ಜಿ.ಹಳ್ಳಿಯ ನಿವಾಸಿ ಆಟೋ ಚಾಲಕ ಮಹಮ್ಮದ್ ಸುಜಾತ್ ದೂರುದಾರರು.
ಮಹಮ್ಮದ್ ಸುಜಾತ್ ಅವರಿಗೆ ಸೇರಿದ ಆಟೋವನ್ನು ಅಕ್ರಮವಾಗಿ ಸಂಜಯ್ ನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದರು ಎನ್ನಲಾಗಿದೆ. ಆ ಆಟೋವನ್ನು ಬಿಡುಗಡೆ ಮಾಡಲು ರಿಜ್ವಾನ್ ಮೂಲಕ ಎಎಸ್‌ಐ ವಿಜಯ್ ಕುಮಾರ್ ಅವರು ಸುಜಾತ್ ಬಳಿ 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಆದರೆ, ಲಂಚ ನೀಡಲು ಇಚ್ಛಿಸದ ಸುಜಾತ್ ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಶನಿವಾರ ವಿಜಯ್ ಕುಮಾರ್ ಹಾಗೂ ಸಯ್ಯದ್ ರಿಜ್ವಾನ್ 40000 ರೂ. ಲಂಚ ಪಡೆಯುತ್ತಿದ್ದಾಗ ಲೋಕಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Fraud Case: 3.25 ಕೋಟಿ ವಂಚನೆ ಕೇಸ್; ಐಶ್ವರ್ಯ ದಂಪತಿ ಮತ್ತೆ ಸೆರೆ
Atul Subhash Case: ಪತ್ನಿ ಮೇಲಿನ ಕೇಸ್ ರದ್ದತಿಗೆ ನಿರಾಕರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.