Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Team Udayavani, Jan 5, 2025, 1:56 PM IST
ಅಹಮದಬಾದ್: ಸೇನಾ ಹೆಲಿಕಾಪ್ಟರ್ ಪತನಗೊಂಡು ಮೂವರು ಮೃತಪಟ್ಟಿರುವ ಘಟನೆ ಗುಜರಾತ್ ನ ಪೋರ್ ಬಂದರ್ ನಲ್ಲಿ ಭಾನುವಾರ (ಜ.5ರಂದು) ನಡೆದಿರುವುದು ವರದಿಯಾಗಿದೆ.
ಭಾರತೀಯ ಕೋಸ್ಟ್ ಗಾರ್ಡ್ ಅಡ್ವಾನ್ಸ್‌ಡ್ ಲೈಟ್ ಹೆಲಿಕಾಪ್ಟರ್ (ಎಎಲ್‌ಎಚ್) ಧ್ರುವ್ ಭಾನುವಾರ ಗುಜರಾತ್‌ನ ಪೋರಬಂದರ್‌ನಲ್ಲಿ ದಿನನಿತ್ಯದ ತರಬೇತಿಯ ಸಮಯದಲ್ಲಿ ಪತನಗೊಂಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಪೋರಬಂದರ್‌ನ ಕೋಸ್ಟ್ ಗಾರ್ಡ್ ಏರ್ ಎನ್‌ಕ್ಲೇವ್‌ನಲ್ಲಿ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.
ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ತೊಂದರೆ ಉಂಟಾದ ಪರಿಣಾಮವಾಗಿ ಅಪಘಾತ ಸಂಭವಿಸಿದೆ. ಇಬ್ಬರು ಪೈಲಟ್‌ಗಳು ಮತ್ತು ಇತರ ಮೂವರು ವಿಮಾನದಲ್ಲಿದ್ದರು ಎಂದು ವರದಿ ತಿಳಿಸಿದೆ.
ಅಪಘಾತದಲ್ಲಿ ಕೆಲ ಜನರಿಗೆ ಗಾಯಗಳಾಗಿವೆ ಅವರನ್ನು ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಘಟನೆ ವೇಳೆ ಹೆಲಿಕಾಪ್ಟರ್‌ನಿಂದ ಒಬ್ಬರು ಜಿಗಿದ ಪರಿಣಾಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಎರಡು ತಿಂಗಳ ಹಿಂದಷ್ಟೇ ಪೋರ್ ಬಂದರ್ ಬಳಿ ಅರಬ್ಬಿ ಸಮುದ್ರದಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನಗೊಂಡ ಬಳಿಕ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್‌ಪೋಲ್’
Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.