Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Team Udayavani, Jan 5, 2025, 3:02 PM IST
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ದ ಘಾಟಿ ಕ್ಷೇತ್ರದಲ್ಲಿ ಜ.5ರ ರವಿವಾರ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತಾದಿಗಳು ರಥಕ್ಕೆ ಹಣ್ಣು, ದವನ ಅರ್ಪಿಸಿ, ದೇವರ ದರ್ಶನ ಪಡೆದು ಧನ್ಯತೆ ಮೆರೆದರು. ಬೆಳಗ್ಗೆ 3 ಗಂಟೆಯಿಂದಲೇ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ರಜಾ ದಿನವಾಗಿದ್ದರಿಂದ ಹಿಂದೆಂದಿಗಿಂತಲೂ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರಿಂದ ದೇವರ ದರ್ಶನಕ್ಕೆ ಗಂಟೆಗಟ್ಟಲೆ ಕಾಯುವಂತಾಗಿತ್ತು.
ತುಳುವ ಷಷ್ಠಿಯ ಅಂಗವಾಗಿ ನಾಗರಕಲ್ಲುಗಳಿಗೆ ಭಕ್ತಾದಿಗಳು ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಬ್ರಹ್ಮರಥೋತ್ಸವ ಹಾಗೂ ಜಾತ್ರೆಯ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳು ಜರುಗಿದವು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ವತಿಯಿಂದ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿತ್ತು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆಯಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
MUST WATCH
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಹೊಸ ಸೇರ್ಪಡೆ
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.