Sullia: ಮಹಿಳೆ ಶೌಚಾಲಯದಲ್ಲಿದ್ದ ವೇಳೆ ಫೋಟೋ ತೆಗೆದು ಕಿಡಿಗೇಡಿ ಪರಾರಿ
Team Udayavani, Jan 6, 2025, 6:55 AM IST
ಸುಳ್ಯ: ಮಹಿಳೆಯೋರ್ವರು ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿದ್ದ ವೇಳೆ ಕಿಡಿಗೇಡಿಯೊಬ್ಬ ಶೌಚಾಲಯದ ಕಿಟಕಿಯಿಂದ ಫೋಟೋ ತೆಗೆದು ಪರಾರಿಯಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯಕ್ಕೆ ಮಹಿಳೆ ಹೋಗಿದ್ದಾಗ ಹಿಂಬದಿಯಲ್ಲಿರುವ ಕಿಟಕಿಯ ಮೂಲಕ ಫೋಟೋ ತೆಗೆದಿರುವುದಾಗಿ ಮಹಿಳೆ ಆರೋಪಿಸಿದ್ದಾರೆ. ಶೌಚಾಲಯದ ಕಿಟಕಿಯ ಗ್ಲಾಸ್ ಸರಿದಿದ್ದು ಸರಿದ ಭಾಗದಿಂದ ಫೋಟೋವನ್ನು ಕಿಡಿಗೇಡಿ ಕ್ಲಿಕ್ಕಿಸಿದ್ದಾನೆ. ಮಹಿಳೆ ಈ ಘಟನೆಯನ್ನು ಮತ್ತು ಆತನ ಕೈಯನ್ನು ನೋಡಿದ್ದು, ಮಹಿಳೆ ಜೋರಾಗಿ ಕಿರುಚಿಕೊಂಡಾಗ ಆತ ಅಲ್ಲಿಂದ ಪರಾರಿಯಾಗಿದ್ದಾನೆ.
ಘಟನೆ ಬಗ್ಗೆ ಮಹಿಳೆ ಸುಳ್ಯ ಠಾಣೆಗೆ ಹಾಗೂ ಬಸ್ ನಿಲ್ದಾಣ ಅ ಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲೆ ನಡೆಸಿದ್ದಾರೆ. ಬಸ್ ನಿಲ್ದಾಣದ ಸಿಬ್ಬಂದಿಯನ್ನು ಠಾಣೆಗೆ ಕರೆಸಿ ಅಲ್ಲಿನ ಅವ್ಯವಸ್ಥೆ ಸರಿಪಡಿಸಲು ಸೂಚಿಸಿದ್ದಾರೆ. ಅವ್ಯವಸ್ಥೆ ಸರಿಪಡಿಸುತ್ತೇವೆ ಎಂದು ನಿಲ್ದಾಣದವರು ತಿಳಿಸಿದ್ದಾರೆ ಎನ್ನಲಾಗಿದೆ. ಘಟನೆ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.
ಮತ್ತೆ ಅಪರಾಧ ಕೃತ್ಯ:
ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಾರದ ಹಿಂದೆ ಮಲಗಿದ್ದ ಪ್ರಯಾಣಿಕರೋರ್ವರ ಬ್ಯಾಗ್, ಶೂ ಕಳ್ಳತನ ಆಗಿತ್ತು. ಈ ನಡುವೆ ಶೌಚಾಲಯದಲ್ಲಿ ಮಹಿಳೆಯಿದ್ದ ವೇಳೆ ಫೋಟೋ ಕ್ಲಿಕ್ಕಿಸಿದ ಘಟನೆ ನಡೆದಿದೆ. ಇಲ್ಲಿ ರಾತ್ರಿ ವೇಳೆ ಯಾವುದೇ ಭದ್ರತಾ ಸಿಬ್ಬಂದಿಗಳು ಇರುವುದಿಲ್ಲ, ಬಸ್ ನಿಲ್ದಾಣ ಠಾಣಾ ಬಳಿಯಲ್ಲೇ ಇದ್ದರೂ ಅಪರಾಧ ಕೃತ್ಯಗಳು ಮಾತ್ರ ಮುಂದುವರಿಯುತ್ತಲೇ ಇದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kundapura: ಶಾಸ್ತ್ರಿ ಸರ್ಕಲ್ ಬಳಿ ವ್ಯಕ್ತಿಯ ಶವ ಪತ್ತೆ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.