Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು
Team Udayavani, Jan 5, 2025, 10:10 PM IST
ಮಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ, ನಾ. ಡಿ’ಸೋಜಾ ಎಂದೇ ಕನ್ನಡಿಗರಿಗೆ ಚಿರಪರಿಚಿತರಾಗಿರುವ ಹಿರಿಯ ಸಾಹಿತಿ ನಾರ್ಬರ್ಟ್ ಡಿ’ಸೋಜಾ (87 ವರ್ಷ) ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ನಾ.ಡಿಸೋಜಾ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮೃತ ನಾ.ಡಿಸೋಜಾ ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯ ಅಗಲಿದ್ದಾರೆ. ಸಾಗರದ ನಗರಸಭೆ ಆವರಣದಲ್ಲಿರುವ ಗಾಂಧಿ ಮೈದಾನದಲ್ಲಿ ಡಿಸೋಜಾ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಜ.7ರಂದು ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ನಾ.ಡಿಸೋಜಾ ಪುತ್ರ ನವೀನ್ ಡಿಸೋಜಾ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಂದೆಯ ನಿಧನದ ಮಾಹಿತಿ ಪ್ರಕಟಿಸಿದ್ದಾರೆ. ಹಿರಿಯ ಸಾಹಿತಿ ನಾ.ಡಿಸೋಜ ನಿಧನದ ವಿಷಯ ತಿಳಿಯುತ್ತಿದ್ದಂತೆ ರಾಜ್ಯದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ನಾ ಡಿಸೋಜಾ ಅವರು ಮಡಿಕೇರಿಯಲ್ಲಿ ನಡೆದ 80ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಶರಾವತಿ ಮುಳುಗಡೆ ಪ್ರದೇಶದ ಹಿನ್ನೆಲೆ ಕಥನವಿದ್ದ ಇವರ ‘ದ್ವೀಪ’ ಕಾದಂಬರಿ ಸಿನಿಮಾ ಆಗಿತ್ತು.
ನವೀನ್ ಡಿಸೋಜಾ ಪೋಸ್ಟ್
ನಮ್ಮ ಪೂಜ್ಯ ತಂದೆ ಖ್ಯಾತ ಸಾಹಿತಿ, ನಾ.ಡಿಸೋಜಾ ರವಿವಾರ (05.01.2025) ಸಂಜೆ 7.50 ಕ್ಕೆ ಅನಾರೋಗ್ಯದ ಕಾರಣ ಮಂಗಳೂರಿನ ಆಸ್ಪತ್ರೆಯಲ್ಲಿ ದೈವಾಧೀನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದ ನಂತರ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು. – ಇಂತಿ ಅವರ ಕುಟುಂಬ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.