ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
ಅಧಿಕಾರದ ಮದ, ದರ್ಪದಿಂದಿರುವ ಕಾಂಗ್ರೆಸ್ ಸರ್ಕಾರಕ್ಕೆ ಕನಿಷ್ಠ ಪ್ರಜ್ಞೆ, ಸಂವೇದನೆ ಇಲ್ಲ: ಮಾಜಿ ಸಿಎಂ ವಾಗ್ದಾಳಿ
Team Udayavani, Jan 5, 2025, 11:00 PM IST
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಸ್ ದರವನ್ನು ಮನಸೋ ಇಚ್ಛೆ ಏರಿಕೆ ಮಾಡಿ ಜನರಿಗೆ ಬರೆ ಎಳೆದಿದೆ. ಇದನ್ನು ನಾನು ಖಂಡಿಸುತ್ತೇನೆ. ಮಹಿಳೆಯರಿಗೆ ಉಚಿತವಾಗಿ ಕೊಟ್ಟು ಅದರ ಭಾರವನ್ನು ಪುರುಷರ ಮೇಲೆ ಹೇರುವುದು ಸರಿಯಲ್ಲ. ತಕ್ಷಣ ದರ ಏರಿಕೆ ವಾಪಸ್ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದರು.
ರವಿವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರ್ಕಾರ ದರ ಏರಿಕೆ ಮೂಲಕ ಜನರ ಮೇಲೆ ಹೊರೆ ಹಾಕುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುತ್ತೇವೆಂದು ಹೇಳಿ, ಅದರ ವೆಚ್ಚ ಭರಿಸಲು ಬೆಲೆ ಏರಿಕೆ ಮಾಡುತ್ತಿರುವ ಈ ಪಕ್ಷಕ್ಕೆ ಜನ ಕೂತಲ್ಲಿ, ನಿಂತಲ್ಲಿ ಛೀಮಾರಿ ಹಾಕುತ್ತಿದ್ದಾರೆ ಎಂದರು.
ಅಧಿಕಾರದ ಮದ, ದರ್ಪದಿಂದ ನಡೆಯುತ್ತಿರುವ ಈ ಸರ್ಕಾರಕ್ಕೆ ಕನಿಷ್ಠ ಪ್ರಜ್ಞೆ, ಸಂವೇದನೆ ಇಲ್ಲ. ಈ ಸರ್ಕಾರ ಹೇಳಿದ್ದನ್ನು ಕೇಳಿಸಿಕೊಂಡು, ಮಾಡಿದ್ದನ್ನು ನೋಡಿಕೊಂಡು ಇರಲು ಸಾಧ್ಯವಿಲ್ಲ. ಅನ್ಯಾಯದ ವಿರುದ್ಧ ಪ್ರತಿಭಟಿಸುವ ಹಕ್ಕನ್ನು ನಮ್ಮ ಸಂವಿಧಾನವೇ ನಮಗೆ ಕೊಟ್ಟಿದೆ ಎಂದು ಎಚ್ಚರಿಕೆ ನೀಡಿದರು.
ಗೊತ್ತು-ಗುರಿ ಇಲ್ಲದ ಸರ್ಕಾರ: ಎಂಪಿಆರ್
ಬಸ್ ದರ ಏರಿಕೆ ವಿರುದ್ಧ ಬಿಜೆಪಿ ಈಗಾಗಲೇ ಹೋರಾಟ ನಡೆಸುತ್ತಿದೆ. ಈ ಸರ್ಕಾರಕ್ಕೆ ಗೊತ್ತು-ಗುರಿ ಇಲ್ಲ. ಸರ್ಕಾರ ಸತ್ತು ಹೋಗಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿಗಳ ಹಿಂಪಡೆದಿರುವ ಕಾಂಗ್ರೆಸ್, ಕರ್ನಾಟಕದಲ್ಲೂ ಹಿಂಪಡೆಯುವ ಮುನ್ಸೂಚನೆ ನೀಡುತ್ತಿದೆ. ಈ ಕಡೆ ಕೊಟ್ಟಂತೆ ಮಾಡಿ ಮತ್ತೊಂದೆಡೆ ಭಾರ ಹೇರುತ್ತಿದೆ. ಇದು ಜನವಿರೋಧಿ ಸರ್ಕಾರ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Sullia: ಜಾಕ್ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.