ಕಟ್ಟೆಮಾಡು ದೇಗುಲ ವಸ್ತ್ರ ಸಂಹಿತೆೆ ವಿವಾದ: ಆಡಳಿತ ಮಂಡಳಿ ಸಭೆಯಲ್ಲಿ ಮೂಡದ ಒಮ್ಮತ
Team Udayavani, Jan 6, 2025, 6:47 AM IST
ಮಡಿಕೇರಿ: ಸಾಂಪ್ರದಾಯಿಕ ವಸ್ತ್ರ ಧರಿಸುವ ವಿವಾದಕ್ಕೆ ಸಂಬಂಧಿಸಿ ತಾಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಾಲಯದ ಆಡಳಿತ ಮಂಡಳಿ ರವಿವಾರ ಸಭೆ ನಡೆಸಿದ್ದು, ಒಮ್ಮತದ ನಿರ್ಧಾರಕ್ಕೆ ಬರಲು ವಿಫಲವಾಗಿದೆ.
ದೇಗುಲಕ್ಕೆ ಸಾಂಪ್ರದಾಯಿಕ ಉಡುಪು ಧರಿಸಿ ಪ್ರವೇಶಿಸುವ ವಿಷಯದಲ್ಲಿ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಇತ್ತೀಚೆಗೆ ಶಾಂತಿ ಸಭೆ ನಡೆಸಿ ಆಡಳಿತ ಮಂಡಳಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸೂಚನೆ ನೀಡಿ ದ್ದರು. ಈ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಕಟ್ಟೆಮನೆ ಶಶಿ ಜನಾರ್ದನ ಅವರ ಅಧ್ಯಕ್ಷತೆಯಲ್ಲಿ ಸಭೆ ಜರಗಿತು. ದೇಗುಲದ ವಾರ್ಷಿಕೋತ್ಸವದ ಕೊನೆಯ ದಿನ ಗ್ರಾಮಸ್ಥರು ಮಾತ್ರ ಸಾಂಪ್ರದಾಯಿಕ ಉಡುಪು ಧರಿಸಲು ಅವಕಾಶ ನೀಡುವ ಕುರಿತು ಪ್ರಸ್ತಾವಿಸಲಾಯಿತು ಎನ್ನಲಾಗಿದೆ. ಇದಕ್ಕೆ ಕೆಲವರು ಒಪ್ಪಿಗೆ ಸೂಚಿಸದ ಕಾರಣ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳದೆ ಪ್ರಸ್ತಾವಿಸಲ್ಪಟ್ಟ ವಿಷಯಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲು ಸಭೆ ನಿರ್ಣಯಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
Kollywood: ಸೂರ್ಯ – ಕಾರ್ತಿಕ್ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್ ಫಿಕ್ಸ್
Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.