Siddaramaiah; ಸಿದ್ದು ಹಿಂದ ಬಾಣ!: ಕನಕ ಪೀಠ ಸ್ಥಾಪಿಸಿ ಕುರುಬರಿಗೆ ಶಕ್ತಿ ನೀಡಿದ್ದು ನಾನು


Team Udayavani, Jan 6, 2025, 6:55 AM IST

1-hindaaaa

ದಾವಣಗೆರೆ: ರಾಜ್ಯ ರಾಜಕಾರಣದಲ್ಲಿ “ಔತಣಕೂಟ ರಾಜಕಾರಣ’ ಸದ್ದು ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೆಮುಂದೆ ನೋಡದೆ ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ಮತ್ತೂಮ್ಮೆ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಹಿಂದುಳಿದ, ದಲಿತ ಸ್ವಾಮೀಜಿಗಳು ಹಾಗೂ ತಮ್ಮ ಆಪೆ¤àಷ್ಟ ಸಚಿವರು, ಶಾಸಕರ ಸಮ್ಮುಖದಲ್ಲಿ ಸಿಎಂ ಬದಲಾವಣೆ ಕೂಗಿಗೆ ತೀಕ್ಷ್ಣ ತಿರುಗೇಟು ನೀಡಿದ್ದು, ಮುಂದಿನ ಮೂರೂವರೆ ವರ್ಷ ನಾನೇ ಸಿಎಂ ಎಂಬ ಪರೋಕ್ಷ ಸಂದೇಶವನ್ನೂ ರವಾನಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ವಿದೇಶ ಪ್ರವಾಸ ದಲ್ಲಿರುವಾಗಲೇ ಇಷ್ಟೆಲ್ಲ ಬೆಳವಣಿಗೆಗಳು ನಡೆದಿದ್ದು ಅಧಿಕಾರ ಹಸ್ತಾಂತರ ವೃತ್ತಾಂತ ಮತ್ತೂಂದು ಮಜಲು ತಲುಪಿದೆ.

ರವಿವಾರ ದಾವಣಗೆರೆಯ ಹೈಸ್ಕೂಲ್‌ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ 537ನೇ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ, ಹೊಸದುರ್ಗ ಕನಕ ಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಚಿತ್ರದುರ್ಗ ಭೋವಿ ಮಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಆಪ್ತ ಸಚಿವ ಬೈರತಿ ಸುರೇಶ್‌, ಮಾಜಿ ಸಚಿವರಾದ ಎಚ್‌. ಆಂಜನೇಯ, ಎಚ್‌.ಎಂ. ರೇವಣ್ಣ, ಶಾಸಕರಾದ ಕೆ.ಎಸ್‌. ಬಸವಂತಪ್ಪ, ಡಿ.ಜಿ. ಶಾಂತನಗೌಡ, ಲತಾ ಮಲ್ಲಿಕಾರ್ಜುನ್‌ ಸಮ್ಮುಖದಲ್ಲಿ ತಮ್ಮ ಹಿಂದೆ ಇರುವ ಬಲವನ್ನು ಪ್ರದರ್ಶಿಸಿದ್ದಾರೆ. ಅಲ್ಲದೆ ಅಧಿಕಾರ ಬದಲಾವಣೆ ಸಂದರ್ಭ ಬಂದರೆ ತಮ್ಮ ಬೆನ್ನಿಗೆ ನಿಲ್ಲುವಂತೆ ಪರೋಕ್ಷವಾಗಿ ಮನವಿಯನ್ನೂ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಶೋಷಿತರ ಪರ ಆಡಳಿತ ನೀಡಲು ನನಗೆ ಎಲ್ಲರ ಬೆಂಬಲ ಬೇಕು. ಎಸ್‌.ಆರ್‌. ಬೊಮ್ಮಾಯಿ ಸರಕಾರದಲ್ಲಿ ಸಾರಿಗೆ ಸಚಿವನಾಗಿದ್ದಾಗ ಕನಕದಾಸರ 500ನೇ ಜಯಂತಿ ಆರಂಭಿಸಿದೆವು. ಬಳಿಕ ಇಡೀ ರಾಜ್ಯ ಪ್ರವಾಸ ಮಾಡಿ ನಾನೇ ಕಾಗಿನೆಲೆ ಗುರುಪೀಠ ರೂಪಿಸಿ ಮಠ ಸ್ಥಾಪನೆ ಮಾಡಿದ್ದೇನೆ’ ಎಂದು ಇಡೀ ಸಮುದಾಯ ತಮ್ಮ ಬೆನ್ನಿಗೆ ನಿಲ್ಲುವಂತೆ ಪರೋಕ್ಷ ಸಂದೇಶ ರವಾನಿಸಿದ್ದಾರೆ.
ಚಿತ್ರದುರ್ಗದ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀ ಕೂಡ ಸಿದ್ದು ಬೆಂಬಲಕ್ಕೆ ನಿಂತಿದ್ದು, “ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಇರಬೇಕು. ಅವರು ಮುಖ್ಯಮಂತ್ರಿಯಾಗಿದ್ದರೆ ಎಲ್ಲರಿಗೂ ನೆಮ್ಮದಿ.ಹಾಗಾಗಿ ನಾವು ಅಂದರೆ ಎಲ್ಲ ಶೋಷಿತ, ದಲಿತ, ಹಿಂದುಳಿದ ವರ್ಗಗಳ ಸ್ವಾಮೀಜಿಗಳು ಸೇರಿ ಅವರಿಗೆ ಅನ್ನದಾತ… ಅಧಿಕಾರಭವ… ಎಂಬ ಆಶೀರ್ವಾದ ಮಾಡುತ್ತೇವೆ. ಸಿದ್ದರಾಮಯ್ಯ ದಲಿತರು, ಹಿಂದುಳಿದವರು, ಶೋಷಿತರ ಪರ ಇದ್ದಾರೆ. ಹಾಗಾಗಿ ನಾವು ಕೂಡ ಅವರ ಪರವಾಗಿಯೇ ಇರುತ್ತೇವೆ’ ಎಂದು ಬಹಿರಂಗವಾಗಿ ಅಭಯ ನೀಡಿದ್ದಾರೆ.

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಕೂಡ, “ಅಹಿಂದ ವರ್ಗದ ನಾಯಕರಾಗಿರುವ ಸಿದ್ದರಾಮಯ್ಯ ಮುಂದಿನ ಮೂರೂವರೆ ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ. ನಾನು ಕುರುಬ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವಂತೆ ಮಾಡಿರುವ ಸಿದ್ದರಾಮಯ್ಯ ಇರುವವರೆಗೆ ನಾವೆಲ್ಲರೂ ಸೇರಿ ಅವರ ಕೈ ಬಲಪಡಿಸಬೇಕು’ ಎಂದು ವೇದಿಕೆ ಮೇಲಿದ್ದ ಸ್ವಾಮೀಜಿಗಳಿಗೂ ಮನವಿ ಮಾಡಿ ಹಿಂದುಳಿದ ಹಾಗೂ ದಲಿತ ಸಮುದಾಯ ಸಿದ್ದರಾಮಯ್ಯ ಬೆನ್ನಿಗೆ ನಿಲ್ಲುವ ದಾಳ ಉರುಳಿಸಿದ್ದಾರೆ.

ಎಸ್‌.ಆರ್‌. ಬೊಮ್ಮಾಯಿ ಸರಕಾರದಲ್ಲಿ ನಾನು ಸಾರಿಗೆ ಸಚಿವನಾಗಿದ್ದಾಗ ಕನಕದಾಸರ 500ನೇ ಜಯಂತಿ ಆರಂಭಿಸಿದೆವು. ಬಳಿಕ ಇಡೀ ರಾಜ್ಯ ಪ್ರವಾಸ ಮಾಡಿ ಕಾಗಿನೆಲೆ ಗುರುಪೀಠ ರೂಪಿಸಿ ಮಠ ಸ್ಥಾಪನೆ ಮಾಡ ಲಾಯಿತು. ಆದ್ದರಿಂದ ಇಡೀ ಸಮುದಾಯ ಒಟ್ಟಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು. ಭಿನ್ನಾಭಿಪ್ರಾಯ ಮರೆತು ಮುಂದಿನ ದಿನಗಳಲ್ಲಿ ಒಗ್ಗಟ್ಟಾಗಿ ಕನಕ ಜಯಂತಿ ಆಚರಣೆ ಮಾಡಬೇಕು.
-ಸಿದ್ದರಾಮಯ್ಯ, ಮುಖ್ಯಮಂತ್ರಿ

ಎಸ್‌ಸಿ ಒಳಮೀಸಲಾತಿಗೆ ಬದ್ಧ: ಸಿದ್ದು ಭರವಸೆ
ದಾವಣಗೆರೆ: ಎಸ್‌ಸಿ ಸಮುದಾಯಕ್ಕೆ ಒಳ ಮೀಸಲಾತಿ ನೀಡಲು ನಮ್ಮ ಸರಕಾರ ಬದ್ಧ ವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಒಳ ಮೀಸಲಾತಿ ನೀಡಬೇಕೆಂದು ಸುಪ್ರೀಂ ಕೋರ್ಟ್‌ ಹೇಳಿದ್ದು, ಪ್ರಾಯೋಗಿಕ ಮಾಹಿತಿ ಇಲ್ಲದೆ ಇರುವುದರಿಂದ ನ್ಯಾ| ನಾಗ ಮೋಹನ್‌ ದಾಸ್‌ ನೇತೃತ್ವದ ಸಮಿತಿ ರಚಿಸ ಲಾಗಿದೆ ಎಂದಿದ್ದಾರೆ.

ಜಾತಿಗಣತಿ: ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ
ದಾವಣಗೆರೆ: ಶಾಶ್ವತ ಹಿಂದುಳಿದ ಆಯೋಗದ ಮಾಜಿ ಅಧ್ಯಕ್ಷ ಎಚ್‌. ಕಾಂತರಾಜು ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅನುಷ್ಠಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಾನು ಜಾತಿ ಜನ ಗಣತಿ ಪರವಾಗಿ ಇದ್ದೇನೆ. ಇದರಿಂದ ಜಾತಿಗಳ ಜನಸಂಖ್ಯೆ ಆಧಾರದಲ್ಲಿ ಯಾವುದೇ ಕಾರ್ಯ ಕ್ರಮ, ಯೋಜನೆ ರೂಪಿಸಲು ಅನುಕೂಲ ಆಗಲಿದೆ ಎಂದರು.

 

ಟಾಪ್ ನ್ಯೂಸ್

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.