Convention: ಮೊಗವೀರರ ಬೇಡಿಕೆ ಮುಂದಿನ ಬಜೆಟ್‌ನಲ್ಲಿ ಈಡೇರಿಸಲು ಬದ್ಧ: ಸಿದ್ದರಾಮಯ್ಯ

ಮೊಗವೀರರ ಬೃಹತ್‌ ಸಮಾವೇಶದಲ್ಲಿ ಮುಖ್ಯಮಂತ್ರಿ ಭರವಸೆ

Team Udayavani, Jan 6, 2025, 7:25 AM IST

mogveera-Samavesha

ಬೆಂಗಳೂರು: ಮೊಗವೀರ ಸಮುದಾಯ ಮಂಡಿಸಿರುವ ಬೇಡಿಕೆಗಳನ್ನು ಮುಂದಿನ ಬಜೆಟ್‌ನಲ್ಲಿ ಈಡೇರಿಸಲು ಪ್ರಯತ್ನಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮೊಗವೀರ ಸಂಘ ಬೆಂಗಳೂರು ಸುವರ್ಣ ಪಥ ರವಿವಾರ ಅರಮನೆ ಮೈದಾನದಲ್ಲಿ ಹಮ್ಮಿಕೊಂಡ ಬೃಹತ್‌ ಮೊಗವೀರ ಸಮಾವೇಶ, ಸಾಂಸ್ಕೃತಿಕ ಉತ್ಸವ, ಸುವರ್ಣ ಪಥ ಸಮಾರೋಪ, ಪ್ರಶಸ್ತಿ ಪುರಸ್ಕಾರ, ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿ ಸಮಾಜದಲ್ಲಿ ಅನೇಕ ಸಮುದಾಯಗಳು ಹಿಂದುಳಿದೆ. ಇದಕ್ಕೆ ಮುಖ್ಯ ಕಾರಣ ಜಾತಿ ವ್ಯವಸ್ಥೆ. ಹಿಂದೆ ಕಸುಬಿನ ಆಧಾರದ ಮೇಲೆ ಜಾತಿ ನಿಗದಿ ಪಡಿಸಲಾಗಿತ್ತು. ಮೊದಲ ಮೂರು ವರ್ಗಗಳಾದ ಬ್ರಾಹ್ಮಣ, ಕ್ಷತ್ರಿಯ, ವೈಷ್ಯರಿಗೆ ಮಾತ್ರ ವಿದ್ಯೆ ಕಲಿಯುವ ಅವಕಾಶವಿತ್ತು. ಶೂದ್ರರಿಗೆ ಇರದ ಕಾರಣ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ತೀರಾ ಹಿಂದುಳಿದ್ದಾರೆ. ಮಕ್ಕಳಿಗೆ ಶಿಕ್ಷಣ ನೀಡಿದಾಗ ಗುಲಾಮಗಿರಿಯಿಂದ ಹೊರಬರಲು ಸಾಧ್ಯ ಎಂದು ಹೇಳಿದರು.

ಎಸ್‌ಟಿಗೆ ಸೇರಿಸಲು ಪ್ರಯತ್ನ
ಮೀನುಗಾರರು ಪ್ರವರ್ಗ 1ರ ವ್ಯಾಪ್ತಿಗೆ ಬರುತ್ತಾರೆ. ಕೋಲಿ, ಗೊಲ್ಲರನ್ನು ಎಸ್‌ಟಿಗೆ ಸೇರಿಸೇಕು ಎನ್ನುವ ನಿಟ್ಟಿನಲ್ಲಿ ಕುಲಶಾಸ್ತ್ರ ಅಧ್ಯಯನ ಮಾಡಲಾಗಿತ್ತು. ಆದರೆ ಕೇಂದ್ರ ಸರಕಾರ ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ. ಕೇಂದ್ರದ ಈ ನಡೆ ಬಗ್ಗೆ ಯಾರೂ ಪ್ರಶ್ನೆ ಮಾಡಿಲ್ಲ. ಆದರೂ ನಾನು ಮತ್ತೆ ಮೊಗವೀರ ಸಮುದಾಯವನ್ನು ಎಸ್‌ಟಿಗೆ ಸೇರಿಸುವಂತೆ ಶಿಫಾರಸು ಮಾಡುತ್ತೇನೆ, ಮೊಗವೀರ ಸಮುದಾಯದವರು ಸೇರಿ ಕೇಂದ್ರದ ಮೇಲೆ ಒತ್ತಡ ಹಾಕಿ ಎಂದರು.

ಡಾ| ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ಡಾ| ಜಿ. ಶಂಕರ್‌ ಮಾತನಾಡಿ, ಬಜೆಟ್‌ನಲ್ಲಿ ಘೋಷಣೆಯಾದ ಸಮುದ್ರ ಆ್ಯಂಬುಲೆನ್ಸ್‌ ಯೋಜನೆಯನ್ನು ಶೀಘ್ರದಲ್ಲಿ ಕಾರ್ಯರೂಪಕ್ಕೆ ತರಬೇಕು, ಬಂದರಿನ ಹೂಳೆತ್ತಲು ಡ್ರೆಜ್ಜರ್‌ ಯಂತ್ರ ಖರೀದಿಸಲು ಮೀನುಗಾರಿಕೆ ಇಲಾಖೆಗೆ ಅನುದಾನ ನೀಡುವುದು ಮೊದಲಾದ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಅನುದಾನ ಹೆಚ್ಚಿಸಿ
ಉಡುಪಿ ಶಾಸಕ ಯಶಪಾಲ್‌ ಸುವರ್ಣ ಮಾತನಾಡಿ, ರೈತರಿಗೆ ಸಾಲ ಹಾಗೂ ಬಡ್ಡಿ ಮನ್ನಾ ಮಾಡುವ ರೀತಿಯಲ್ಲಿ ಮೀನುಗಾರರಿಗೂ ಅನು
ಕೂಲ ಕಲ್ಪಿಸಬೇಕು. ಮುಂಬರುವ ಬಜೆಟ್‌ನಲ್ಲಿ ಮೀನುಗಾರರಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿದರು.

ಗೀತಾನಂದ ಫೌಂಡೇಶನ್‌ ಪ್ರವರ್ತಕ ಆನಂದ್‌ ಸಿ. ಕುಂದರ್‌, ಉದ್ಯಮಿ ಪ್ರಸಾದ್‌ ರಾಜ್‌ ಕಾಂಚನ್‌, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಮುಂಬಯಿ ಮೊಗವೀರ ಮಹಾಜನ ಸೇವಾ ಸಂಘದ ಬಗ್ವಾಡಿ ಹೋಬಳಿ ಅಧ್ಯಕ್ಷ ರಾಜು ಮೆಂಡನ್‌ ವಂಡ್ಸೆ, ಮುಂಬಯಿ ಮೊಗವೀರ ಮಹಾಜನ ಸೇವಾ ಸಂಘದ ಕುಂದಾಪುರ ಶಾಖೆಯ ಅಧ್ಯಕ್ಷ ಉದಯ ಕುಮಾರ್‌ ಹಟ್ಟಿಯಂಗಡಿ ಮೊದಲಾದವರಿದ್ದರು. ಡಾ| ಜಿ. ಜಿ. ಶಂಕರ್‌ ಅವರಿಗೆ ಮಾಧವ ಮಂಗಲ ಪ್ರಶಸ್ತಿಯನ್ನು ಸಿದ್ದರಾಮಯ್ಯ ಪ್ರದಾನ ಮಾಡಿದರು.

ಯಶಪಾಲ್‌ ಕಾಲೆಳೆದ ಸಿಎಂ ಸಿದ್ದರಾಮಯ್ಯ
ಮೊಗವೀರ ಸಮುದಾಯದ ಯಶಪಾಲ್‌ ಶಾಸಕ ಆಗಿದ್ದಾರೆ. ನಾಳೆ ಮುಖ್ಯಮಂತ್ರಿಯೂ ಆಗಬಹುದು ಎಂದಾಗ, ಯಶಪಾಲ್‌ “ಬೇಡ ಸರ್‌’ ಎಂದು ಹೇಳಿ ಕೈ ಮುಗಿದರು. ಸಿಎಂ ನೀನು ಆಗ್ತೀಯಾ ಅಂತ ಹೇಳಲಿಲ್ಲ. ನಿಮ್ಮ ಸಮುದಾಯದವರು ಆಗಬಹುದು ಎಂದು ಸಿಎಂ ಸಿದ್ದರಾಮಯ್ಯ ಕಾಲೆಳೆದರು.

ಟಾಪ್ ನ್ಯೂಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.