Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
ನಾನು ಊಟಕ್ಕೆ ಕರೆದರೂ ಸಿಎಂ ಬರುತ್ತಾರೆ: ಬೃಹತ್, ಮಧ್ಯಮ ಕೈಗಾರಿಕೆ ಸಚಿವ
Team Udayavani, Jan 6, 2025, 2:55 AM IST
ಬೆಂಗಳೂರು: “ಮುಖ್ಯಮಂತ್ರಿ ನಮ್ಮ ಮನೆಗೂ ಊಟಕ್ಕೆ ಕರೆದರೆ ಬರುತ್ತಾರೆ. ಊಟಕ್ಕೆ ಹೋದರೆ ಅದರಲ್ಲಿ ತಪ್ಪೇನಿದೆ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಪ್ರಶ್ನಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಶಾಸಕರು, ಸಚಿವರು ಊಟಕ್ಕೆ ಕರೆದಿದ್ದರು. ಸಹಜವಾಗಿ ಅವರೆಲ್ಲ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿರುತ್ತಾರೆ. ಸಿಎಂ ನಮ್ಮ ಮನೆಗೆ ಊಟಕ್ಕೆ ಕರೆದರೂ ಬರುತ್ತಾರೆ. ಅದರಲ್ಲಿ ತಪ್ಪೇನಿದೆ? ಹಾಗೊಂದು ವೇಳೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಡಾ.ಅಶ್ವತ್ಥ ನಾರಾಯಣ ಊಟಕ್ಕೆ ಬಂದಿದ್ದರೆ, ಅದು ದೊಡ್ಡ ಸುದ್ದಿ ಆಗುತ್ತಿತ್ತು’ ಎಂದು ಹೇಳಿದರು.
ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಪ್ರಿಯಾಂಕ್ ಖರ್ಗೆ ಫುಲ್ ಆ್ಯಕ್ಟಿವ್ ಆಗಿದ್ದಾರೆ. ಹಾಗಾಗಿ, ಅನಗತ್ಯವಾಗಿ ಆತ್ಮಹತ್ಯೆ ಪ್ರಕರಣದಲ್ಲಿ ಅವರನ್ನು ಎಳೆದು ತರಲಾಗುತ್ತಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಗುತ್ತಿಗೆದಾರ ಅಲ್ಲ ಅಂತ ಗೊತ್ತಾಗಿದೆ. ಡೆತ್‌ನೋಟ್‌ನಲ್ಲಿ ಅವರೇನೋ ಬರೆದು ಇಟ್ಟಿದ್ದಾರೆ. ಅದರಲ್ಲಿ ಸಚಿವರ ಹೆಸರೂ ಇಲ್ಲ. ಆದಾಗ್ಯೂ ಉದ್ದೇಶಪೂರ್ವಕವಾಗಿ ಗುರಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಬಿಜೆಪಿ ಅವಧಿಯಲ್ಲಿನ ಸರ್ಕಾರ ಚೆನ್ನಾಗಿತ್ತು ಎಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಎಂ.ಬಿ. ಪಾಟೀಲ್, “ಕುಮಾರಸ್ವಾಮಿ ಹೇಳಿಕೆ ಯಾವಾಗ ಬದಲಾಗುತ್ತದೆಯೋ ಗೊತ್ತಿಲ್ಲ. ಈಚೆಗೆ ಉಪಚುನಾವಣೆ ಆದ ಮೆಲೆ ಪರಿಸ್ಥಿತಿ ಬದಲಾಗಿದೆ. ಹಾಗೆಯೇ ಸದ್ಯದಲ್ಲೇ ಕುಮಾರಸ್ವಾಮಿ ಹೇಳಿಕೆಯೂ ಬದಲಾಗಬಹುದು’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.