Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Team Udayavani, Jan 6, 2025, 11:58 AM IST
ಬೆಂಗಳೂರು: ಕಳೆದ 10 ವರ್ಷಗಳಿಂದ ಮಾದಕ ವಸ್ತು ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ರೌಡಿಶೀಟರ್‌ನನ್ನು ಚಾಮರಾಜಪೇಟೆ ಪೊಲೀಸರು ಪಿಐಟಿ-ಎನ್‌ಡಿಪಿಎಸ್ ಕಾಯ್ದೆ ಅಡಿ ಬಂಧಿಸಿದ್ದಾರೆ.
ರೌಡಿಶೀಟರ್ ಸೈಯದ್ ಚಾಂದ್ ಪಾಷಾ ಅಲಿಯಾಸ್ ಚಾಂದ್ ಪಾಷಾ(32) ಬಂಧಿತ. ಆರೋಪಿ ವಿರುದ್ದ 2015ರಿಂದ ಇದುವರೆಗೂ 13 ಎನ್‌ಡಿಪಿಎಸ್ ಕಾಯ್ದೆ ಅಡಿಯ ಪ್ರಕರಣಗಳು ದಾಖಲಾಗಿದ್ದು, ಪ್ರಕರಣಗಳಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿದ್ದಾನೆ. ಆದರೆ, ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿ ಕೊಂಡು ಓಡಾಡುತ್ತಿದ್ದ. ಅಲ್ಲದೆ, ಆರೋಪಿ ತನ್ನ ಸಹಚರರ ಮೂಲಕ ಆಂಧ್ರಪ್ರದೇಶ ಹಾಗೂ ಇತರೆಡೆಯಿಂದ ಗಾಂಜಾ ತರಿಸಿಕೊಂಡು ಪಶ್ಚಿಮ ಮತ್ತು ದಕ್ಷಿಣ ವಿಭಾಗದಲ್ಲಿ ಮಾರಾಟ ಮಾಡುತ್ತಿದ್ದ. ಹೀಗಾಗಿ ಆತನ ವಿರುದ್ಧ ಪಿಐಟಿ-ಎನ್‌ಡಿಪಿಎಸ್ ಕಾಯ್ದೆ ಅಡಿ ಬಂಧಿಸಲು ಚಾಮರಾಜಪೇಟೆ ಪೊಲೀಸರು, ಪಶ್ಚಿಮ ವಿಭಾಗದ ಡಿಸಿಪಿ ಮೂಲಕ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದರು. ಇದೀಗ ಪೊಲೀಸ್ ಆಯುಕ್ತರು ಒಪ್ಪಿಗೆ ನೀಡಿದ ಮೇರೆಗೆ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪಿಐಟಿ-ಎನ್‌ಡಿಪಿಎಸ್ ಕಾಯ್ದೆ ಅಡಿ ಸಾಮಾನ್ಯವಾಗಿ 6 ತಿಂಗಳಿಂದ 1 ವರ್ಷದವರೆಗೂ ಜಾಮೀನು ಸಿಗುವುದಿಲ್ಲ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
MUST WATCH
ಹೊಸ ಸೇರ್ಪಡೆ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.