Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
Team Udayavani, Jan 6, 2025, 12:24 PM IST
ನಟ ಯೋಗಿ (Yogi) ಹಾಗೂ ನಿರ್ದೇಶಕ ವಿಜಯ್ ಪ್ರಸಾದ್ (Vijay Prasad) ಅವರ ಕಾಂಬಿನೇಷನ್‌ನಲ್ಲಿ ಮೂಡಿಬಂದಿದ್ದ “ಸಿದ್ಲಿಂಗು’ ಚಿತ್ರ ಹಿಟ್ ಲೀಸ್ಟ್ ಸೇರಿದ್ದಲ್ಲದೇ, ಯೋಗಿ ಅವರಿಗೆ ಒಂದು ಬ್ರೇಕ್ ನೀಡಿದ್ದ ಸಿನಿಮಾ ಇದಾಗಿತ್ತು. ಈಗ ಇವರಿಬ್ಬರ ಕಾಂಬಿನೇಷನ್‌ನಲ್ಲಿ “ಸಿದ್ಲಿಂಗು 2′ ಸಿನಿಮಾ (Sidlingu 2 Cinema) ನಿರ್ಮಾಣವಾಗಿ, ಫೆಬ್ರವರಿ 14, ಪ್ರೇಮಿಗಳ ದಿನದಂದು ಚಿತ್ರ ಬಿಡುಗಡೆಗೊಳಿಸುವುದಾಗಿ ಚಿತ್ರತಂಡ ಹೇಳಿಕೊಂಡಿದೆ.
ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬಿಝಿಯಾಗಿರುವ “ಸಿದ್ಲಿಂಗು 2′ ಚಿತ್ರತಂಡ, ಡಬ್ಬಿಂಗ್ ಕಾರ್ಯವನ್ನೂ ಮುಗಿಸುವ ಹಂತಕ್ಕೆ ತಲುಪಿದ್ದು, ಶೀಘ್ರ ನಾಯಕಿ ಸೋನುಗೌಡ ಅವರ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಳಿಸಲು ಸಜ್ಜಾಗುತ್ತಿದೆ.
ಇದರ ಜೊತೆಗೆ ಹಾಡಿನ ಲಿರೀಕಲ್ ವಿಡಿಯೊ ಬಿಡುಗಡೆ ಮಾಡಲು ಸಜ್ಜಾಗುತ್ತಿರುವ ತಂಡ, ಜನವರಿ ಅಂತ್ಯದಲ್ಲಿ ಮತ್ತೂಂದು ಹಾಡಿನ ಸಂಪೂರ್ಣ ವಿಡಿಯೊ ಬಿಡುಗಡೆಗೊಳಿಸಲು ಯೋಜನೆ ಹಾಕಿಕೊಂಡಿದೆ. ಅನೂಪ್ ಸೀಳಿನ್ ಸಂಗೀತ, ಅರಸು ಅಂತಾರೆ ಸಾಹಿತ್ಯ ಚಿತ್ರಕ್ಕಿರಲಿದ್ದು, ಪದ್ಮಜಾ ರಾಜ್, ಆಂಟೊನಿ ಕಮಲ್, ಮಹಾಂತೇಶ್ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
Kasaragod: ಯುವತಿ ನಾಪತ್ತೆ; ದೂರು ದಾಖಲು
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
Mangaluru: ಜ.11, 12ರಂದು ಮಂಗಳೂರು ಲಿಟ್ ಫೆಸ್ಟ್… ಕಲೆ, ಸಾಹಿತ್ಯ, ಜಾನಪದಗಳ ಸಂಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.