Editorial: ಕಾಳ್ಗಿಚ್ಚು ಸಂಭವಿಸುವ ಮುನ್ನವೇ ಇರಲಿ ಎಚ್ಚರಿಕೆ

Team Udayavani, Jan 6, 2025, 12:44 PM IST

1

ಬೇಸಗೆ ಬಂತೆಂದರೆ ಅರಣ್ಯದಂಚಿನಲ್ಲಿ ಕಾಳ್ಗಿಚ್ಚಿನದ್ದೇ ಆತಂಕ. ಪ್ರಸಕ್ತ ಚಳಿ ಆರಂಭಗೊಂಡಿದ್ದು, ಮಧ್ಯಾಹ್ನ ಸುಡುಬಿಸಿಲು ಕಂಡುಬರುತ್ತಿದೆ. ಮುಂದಿನ ಮೂರ್ನಾಲ್ಕು ತಿಂಗಳು ಕಾಳ್ಗಿಚ್ಚು ಉಂಟಾಗುವ ಸಾಧ್ಯತೆ ಹೆಚ್ಚು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸೂಕ್ತ ಕ್ರಮಕ್ಕೆ ಈಗಲೇ ಮುಂದಾಗಬೇಕಿದೆ.

ಮಳೆಗಾಲದಲ್ಲಿ ಬೆಳೆದ ಹುಲ್ಲು ಸೂರ್ಯನ ತಾಪಕ್ಕೆ ಒಣಗುವುದರಿಂದ ಸಣ್ಣ ಕಿಡಿ ಸೋಕಿದರೂ ಅರಣ್ಯ ನಾಶಕ್ಕೆ ಕಾರಣವಾಗುತ್ತದೆ. ಈ ಬಾರಿ ದೀರ್ಘ‌ ಕಾಲ ಉತ್ತಮ ಮಳೆಯಾಗಿದ್ದರಿಂದ ಹುಲ್ಲು ಕೂಡ ದಟ್ಟವಾಗಿ ಬೆಳೆದಿದೆ. ಆದುದರಿಂದ ಹಿಂದಿಗಿಂತ ಹೆಚ್ಚು ಎಚ್ಚರಿಕೆಯನ್ನು ಈ ಬಾರಿ ತೆಗೆದುಕೊಳ್ಳಬೇಕಾಗಿದೆ. ಕೆಲವೊಮ್ಮೆ ತಿಳಿದೋ ತಿಳಿಯದೆಯೋ ಕಿಡಿಗೇಡಿಗಳ ಉಪಟಳಕ್ಕೆ ಸಾವಿರಾರು ಎಕ್ರೆ ಅರಣ್ಯ ಪ್ರದೇಶ ನಾಶವಾಗುವುದಿದೆ. ಹೀಗಾಗಿ ಬಹಳ ಮುನ್ನೆಚ್ಚರಿಕೆ ವಹಿಸಬೇಕಿದೆ.

ಪ್ರತೀ ವರ್ಷ ಚಳಿಗಾಲ ಆರಂಭದಿಂದ ಬೇಸಗೆ ಮುಗಿಯುವ ವರೆಗೆ ಪಶ್ಚಿಮಘಟ್ಟ, ಚಾರ್ಮಾಡಿ ಅರಣ್ಯ ಸಹಿತ ಶಿಶಿಲ, ಅರಸಿನಮಕ್ಕಿ ಸೇರಿದಂತೆ ಗುಡ್ಡಗಾಡು ಪ್ರದೇಶಗಳಲ್ಲಿ, ರಸ್ತೆ ಬದಿಗಳಲ್ಲಿ ಬೆಂಕಿ ಆವರಿಸಿ ಅರಣ್ಯ ಸಂಪತ್ತು ನಾಶಕ್ಕೆ ಕಾರಣವಾಗುತ್ತಿರುತ್ತದೆ. ಕಳೆದ ಎರಡು ವರ್ಷಗಳಲ್ಲಿ ಅತೀ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಈ ವೇಳೆ ವಿದೇಶಗಳಲ್ಲಿರುವ ನಾನಾ ರೀತಿಯ ಬೆಂಕಿ ನಂದಿಸುವ ಸುಧಾರಿತ ಕ್ರಮಗಳ ಮೂಲಕ ನಮ್ಮ ದೇಶದಲ್ಲಿ; ಅದರಲ್ಲೂ ಪ್ರಮುಖವಾಗಿ ಪಶ್ಚಿಮಘಟ್ಟ ಸಂರಕ್ಷಣೆಗೆ ಒತ್ತು ನೀಡಬೇಕೆಂದು ಹಲವು ಬಾರಿ ಕೂಗು, ಬೇಡಿಕೆ, ಆಗ್ರಹಗಳು ನಾನಾ ಕಡೆಯಿಂದ ಬಂದರೂ ಸರಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಪರಿಣಾಮ ಹೇರಳವಾದ ಅರಣ್ಯ ಸಂಪತ್ತಿನ ಜತೆಗೆ ಪ್ರಾಣಿ ಸಂಕುಲಗಳು ಅಳಿಯುವಂತಾಗಿದೆ.

ದಾರಿ ಬದಿ, ಗುಡ್ಡಗಾಡುಗಳ ಅಂಚಿನಲ್ಲಿ ಬೀಡಿ, ಸಿಗರೇಟು ಸೇದಿ ಎಸೆದ ಬೆಂಕಿಯಿಂದ ಅಥವಾ ಕಾಳ್ಗಿಚ್ಚಿನಿಂದ ಅಪಾರ ಪ್ರಮಾಣದ ಮರಮಟ್ಟು ನಾಶವಾಗಿ ವಾಯುಮಾಲಿನ್ಯದ ಜತೆಗೆ ಅಂತರ್ಜಲದ ಮೇಲೂ ಪರಿಣಾಮ ಬೀರುತ್ತದೆ. ಪ್ರತೀ ವರ್ಷ ಅರಣ್ಯ ಇಲಾಖೆ ಬೆಂಕಿ ರೇಖೆಯನ್ನು ರಚಿಸಿ ಕಾಳ್ಗಿಚ್ಚಿನಿಂದ ಅರಣ್ಯ ಸಂಪತ್ತು ರಕ್ಷಿಸಲು ಮುಂದಾಗುತ್ತದೆ. ಆದರೆ ಬೆಂಕಿ ರೇಖೆ ಮಾಡುವ ಸ್ಥಳಗಳನ್ನು ಹೊರತು ಪಡಿಸಿ ದಟ್ಟ ಅರಣ್ಯದ ಮಧ್ಯೆಯೇ ಬೆಂಕಿ ಬೀಳುವ ಸಂದರ್ಭ ಅದನ್ನು ನಂದಿಸಲು ಯಾವುದೇ ವಾಹನ ಸಾಗಲು ಸಾಧ್ಯವಾಗದ ಸ್ಥಿತಿ ಇದೆ. ಈ ವೇಳೆ ಅಪಾಯದ ತೀವ್ರತೆ ಹೆಚ್ಚಾಗಿರುತ್ತದೆ. ಅರಣ್ಯದಲ್ಲಿ ಪ್ರಾಣಿಗಳ ಬೇಟೆಯಾಡಿ ಅಲ್ಲೇ ಅಡುಗೆ ಮಾಡುವುದರಿಂದ ಕಾಳ್ಗಿಚ್ಚು ಉಂಟಾಗುವ ಬಗ್ಗೆ ಸ್ಥಳೀಯರು ಅನೇಕ ಬಾರಿ ದೂರು ನೀಡಿದರೂ ಯಾವುದೇ ದೊಡ್ಡ ಕ್ರಮ ಸಾಧ್ಯವಾಗಿಲ್ಲ.

ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವುದು ನಮ್ಮೆಲ್ಲರ ಹೊಣೆಗಾರಿಕೆ. ಆದ್ದರಿಂದ ಕಾಳ್ಗಿಚ್ಚು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ವಿದ್ಯುತ್‌ ಕಂಬಗಳ ಸನಿಹ ಇರುವ ಪೊದೆಗಳ ಸ್ವತ್ಛತೆ, ರಸ್ತೆ ಅಂಚಿನಲ್ಲಿ ಒಣ ಹುಲ್ಲುಗಳ ತೆರವು ಸಹಿತ ಅಗತ್ಯ ಕ್ರಮಗಳನ್ನು ಅರಣ್ಯ ಇಲಾಖೆ, ಸ್ಥಳೀಯಾಡಳಿತಗಳು, ಮೆಸ್ಕಾಂ ಹಾಗೂ ಸಾರ್ವಜನಿಕರು ಕೈಗೊಳ್ಳುವುದು ಅತ್ಯಗತ್ಯವಾಗಿದೆ. ಈ ಮೂಲಕ ಸಂಭವನೀಯ ಅಪಾಯವನ್ನು ತಪ್ಪಿಸಿ ಅರಣ್ಯ ಸಂಪತ್ತು, ಪ್ರಾಣಿ, ಜೀವಸಂಕುಲಗಳ ರಕ್ಷಣೆಯೆಡೆಗೆ ಎಲ್ಲರೂ ಕೈಜೋಡಿಸುವ ಅಗತ್ಯವಿದೆ.

ಟಾಪ್ ನ್ಯೂಸ್

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreme-Court

Editorial: ಗಿಫ್ಟ್ ಡೀಡ್‌: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು

14

Editorial: ಕಾಮಗಾರಿಯ ವಿಳಂಬ ಸಲ್ಲದು

8

Editorial: ಕುಂದಾಪುರದ ಹೆದ್ದಾರಿ ಸಮಸ್ಯೆ ಸರಿಪಡಿಸಿ

6

Editorial: ಸಂಚಾರ, ಪಾರ್ಕಿಂಗ್‌; ಸಮನ್ವಯದ ಕ್ರಮ ಆಗಬೇಕು

Hospital

Editorial: ರಾಜ್ಯದ ಸರಕಾರಿ ಆಸ್ಪತ್ರೆಗಳಿಗೆ ಬೇಕಿದೆ ತುರ್ತು ಕಾಯಕಲ್ಪ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.