ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Team Udayavani, Jan 6, 2025, 6:49 PM IST
ಬೆಂಗಳೂರು: ಚಿತ್ರದುರ್ಗ ರೇಣುಕಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ನಟ ದರ್ಶನ್ ಗೆ (Actor Darshan) ಮತ್ತೆ ಢವ ಢವ ಶುರುವಾಗಿದೆ.
ನಟ ದರ್ಶನ್ ಸೇರಿದಂತೆ 7 ಮಂದಿಯ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 7 ಮಂದಿಗೆ ಡಿ.13 ರಂದು ಕೋರ್ಟ್ ಜಾಮೀನು ನೀಡಲಾಗಿತ್ತು. ಜಾಮೀನು ಪಡೆದು ಆಚೆ ಬಂದ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮೈಸೂರಿಗೆ ತೆರಳಿದ್ದರು. ಫ್ಯಾಮಿಲಿ ಜತೆಗಿರುವ ದರ್ಶನ್‌ಗೆ ಬೆಂಗಳೂರು ಪೊಲೀಸರು ಶಾಕ್ ನೀಡಿದ್ದಾರೆ.
ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್, ಜಗದೀಶ್ ಅವರ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ.
ಸುಪ್ರೀಂಕೋರ್ಟ್ ವಕೀಲ ಅನಿಲ್ ಸಿ ನಿಶಾನಿ ಅವರು ಪೊಲೀಸರ ಪರವಾಗಿ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸಿದ್ದಾರೆ.
ಇತ್ತ ದರ್ಶನ್ ಅವರಿಗೆ ಮೈಸೂರಿಗೆ ತೆರಳಲು ಕೋರ್ಟ್ ನೀಡಿದ್ದ ಎರಡು ವಾರಗಳ ಗಡುವು ಭಾನುವಾರಕ್ಕೆ (ಜನವರಿ 5) ಅಂತ್ಯಗೊಂಡಿದೆ. ಬೆಂಗಳೂರಿಗೆ ಆಗಮಿಸುವ ನಟ ದರ್ಶನ್ ತಮ್ಮ ಅನುಮತಿ ವಿಸ್ತರಣೆ ಮಾಡುವಂತೆ ಮತ್ತೆ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆಯಿದೆ.
ಬೆನ್ನು ನೋವಿಗೆ ಮೈಸೂರಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ. ಸಂಕ್ರಾಂತಿ ಸಂದರ್ಭದಲ್ಲಿ ದರ್ಶನ್ ಅವರು ಸರ್ಜರಿಗೆ ಒಳಗಾಗಲಿದ್ದಾರೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.