Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Team Udayavani, Jan 6, 2025, 9:52 PM IST
ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರಿದಿದ್ದು, ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕಳೆದ 3 ತಿಂಗಳಿನಲ್ಲಿ ಮೃತಪಟ್ಟ ಬಾಣಂತಿಯರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.
ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ 24 ವರ್ಷದ ಸರಸ್ವತಿ ಎಂಬುವವರು ಸಾವಿಗೀಡಾಗಿದ್ದಾರೆ. ಜ. 2ರಂದು ರಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಈ ವೇಳೆ ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಅವರು ಜ. 5 ರಂದು ಕೊನೆಯುಸಿರೆಳೆದಿದ್ದಾರೆ.
ಸದ್ಯ ಮಗುವನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಸರಸ್ವತಿ ಅವರು ನಾಲ್ಕನೇ ಮಗುವಿಗೆ ಜನ್ಮ ನೀಡಿ ಸಾವಿಗೀಡಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸರಸ್ವತಿ ಅವರಿಗೆ ಹೆರಿಗೆ ಬಳಿಕ ರಕ್ತದೊತ್ತಡ ಹೆಚ್ಚಾಗಿದ್ದರಿಂದ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ರವಿವಾರ ಮೃತಪಟ್ಟಿದ್ದಾರೆ ಎಂದು ರಿಮ್ಸ್ನ ವೈದ್ಯಕೀಯ ಅಧೀಕ್ಷಕ ಡಾ. ಭಾಸ್ಕರ್ ತಿಳಿಸಿದ್ದಾರೆ. ರಿಮ್ಸ್ ಆಸ್ಪತ್ರೆಯಲ್ಲಿ 3 ತಿಂಗಳಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.