Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Team Udayavani, Jan 6, 2025, 10:43 PM IST
ದಾವಣಗೆರೆ: ಅಡುಗೆ ಅನಿಲ ಸಿಲಿಂಡರ್ ಸ್ಫೋಟದ ಪರಿಣಾಮ ಇಡೀ ಗ್ರಾಮ ದಟ್ಟ ಹೊಗೆಯಿಂದ ಸಮಸ್ಯೆ ಎದುರಿಸಿದ ಘಟನೆ ಸೋಮವಾರ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದಲ್ಲಿ ನಡೆದಿದೆ.
ಚನ್ನೇಶಪುರದ ಕಾಶಪ್ಪ ಎಂಬುವರ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎಚ್ಚೆತ್ತ ಕಾಶಪ್ಪ ಮತ್ತು ಅವರ ತಾಯಿ ಮನೆಯಿಂದ ಹೊರಗೆ ಬಂದ ಕ್ಷಣಾರ್ಧದಲ್ಲಿ ಸಿಲಿಂಡರ್ ಸ್ಫೋಟ ಗೊಂಡಿದೆ. ಇಡೀ ಮನೆ ಬೆಂಕಿಗೆ ಸಂಪೂರ್ಣ ಆಹುತಿಯಾಗಿದೆ. ಸಿಲಿಂಡರ್ ಸ್ಫೋಟದ ಪರಿಣಾಮ ಇಡೀ ಗ್ರಾಮದಲ್ಲಿ ದಟ್ಟವಾದ ಹೊಗೆ ಆವರಿಸಿತ್ತು. ಇದರಿಂದ ಗ್ರಾಮಸ್ಥರು ಅಕ್ಷರಶಃ ಗಾಬರಿಗೊಂಡಿದ್ದರು. ಅಗ್ನಿಶಾಮಕ ದಳದವರು ಹೊಗೆ ನಿಯಂತ್ರಣ ಮಾಡಿ, ಇತರೆ ಮನೆಗಳಿಗೆ ಬೆಂಕಿ ಹರಡದಂತೆ ತಡೆಯಲು ಹರಸಾಹಸ ಪಡಬೇಕಾಯಿತು.ಕೊನೆಗೂ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.