ಇಂದು ಉಪರಾಷ್ಟ್ರಪತಿ ಧನ್ಕರ್ ಧರ್ಮಸ್ಥಳಕ್ಕೆ
Team Udayavani, Jan 7, 2025, 6:50 AM IST
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಿರ್ಮಾಣಗೊಂಡಿರುವ ಶ್ರೀ ಸಾನ್ನಿಧ್ಯ ಕ್ಯೂ ಕಾಂಪ್ಲೆಕ್ಸ್ ಅನ್ನು ಜ.7ರಂದು ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಉದ್ಘಾಟಿಸಲಿದ್ದಾರೆ.
ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಉಪರಾಷ್ಟ್ರಪತಿಗಳ ಪತ್ನಿ ಡಾ| ಸುದೇಶ್ ಧನ್‌ಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಹೇಮಾವತಿ ವೀ.ಹೆಗ್ಗಡೆ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿಗಳಾಗಿರುವರು.
ವಿಶೇಷ ಪೂಜೆ
ಶ್ರೀ ಸಾನ್ನಿಧ್ಯ ಉದ್ಘಾಟನೆ ಪೂರ್ವಭಾವಿಯಾಗಿ ಜ.6ರಂದು ಸಂಜೆಯಿಂದ ಡಾ| ಹೆಗ್ಗಡೆ ಹಾಗೂ ಕುಟುಂಬಸ್ಥರು ಸಹಿತ ಪ್ರಮುಖರ ಉಪಸ್ಥಿತಿಯಲ್ಲಿ ವಿಶೇಷ ಧಾರ್ಮಿಕ ಪೂಜಾ ವಿಧಿವಿಧಾನಗಳು ನೆರವೇರಿದವು.
ವಿಶೇಷ ವಾಯುಪಡೆ ವಿಮಾನದಲ್ಲಿ ಆಗಮನ
ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರು ದಿಲ್ಲಿಯಿಂದ ವಾಯುಪಡೆಯ ವಿಶೇಷ ವಿಮಾನದಲ್ಲಿ ನೇರವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ವಾಯುವಪಡೆಯ ವಿಶೇಷ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ಹೆಲಿಪ್ಯಾಡ್‌ನಲ್ಲಿ ಬಂದಿಳಿಯುವರು. ಉಪರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ವಿಶೇಷ ಭದ್ರತಾ ತಂಡ ಸೋಮವಾರವೇ ಸ್ಥಳದಲ್ಲಿದ್ದು, ಭದ್ರತೆಯ ಉಸ್ತುವಾರಿ ವಹಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.