Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ
Team Udayavani, Jan 7, 2025, 6:50 AM IST
ಹೊಸದಿಲ್ಲಿ: ವಕ್ಫ್ ಮಂಡಳಿಗೆ ಸೇರಿದ 18 ಎಕ್ರೆ ಭೂಮಿಯನ್ನು ಉತ್ತರ ಪ್ರದೇಶದ ಪ್ರಯಾಗ್ರಾಜ್ ಮಹಾಕುಂಭಮೇಳಕ್ಕೆ ಬಳಸಿಕೊಳ್ಳಲಾಗುತ್ತಿದೆ. ಇದು ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅಖೀಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಬುದ್ದೀನ್ ರಾಜ್ವಿ ಬರೆಲ್ವಿ ದೂರಿದ್ದಾರೆ.
ವಕ್ಫ್ ಮಂಡಳಿ ಜಮೀನು ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಪ್ರತಿಯಾಗಿ ಮುಸ್ಲಿಮರು ಈ ಕುಂಭಮೇಳದಲ್ಲಿ ಭಾಗಿಯಾಗಲು ಹಿಂದೂಗಳು ಅವಕಾಶ ನೀಡಬೇಕು. ಕಾರ್ಯಕ್ರಮದಲ್ಲಿ ಹಿಂದೂಯೇತರರು ಭಾಗಿಯಾಗಬಾರದೆಂದು ಹೇಳಿದ್ದ ಅಖೀಲ ಭಾರತ ಅಖಾಡ ಪರಿಷದ್ ಕ್ರಮವನ್ನು ರಾಜ್ವಿ ಟೀಕಿಸಿದ್ದಾರೆ. ರವಿವಾರ ಅವರು ಕುಂಭಮೇಳದಲ್ಲಿ ಮುಸ್ಲಿಮರನ್ನು ಸಾಮೂಹಿಕವಾಗಿ ಮತಾಂತರಿಸಲು ಪ್ರಯತ್ನ ನಡೆಯುತ್ತಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ಪತ್ರ ಬರೆದಿದ್ದರು.
ಹೇಳಿಕೆಗೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪ್ರತಿಕ್ರಿಯಿಸಿದ್ದು, “ಇಸ್ಲಾಂ ಹುಟ್ಟುವುದಕ್ಕೂ ಮೊದಲೇ ಕುಂಭಮೇಳ ನಡೆಯುತ್ತಿದೆ. ಹಿಂದೂಗಳನ್ನು ಪ್ರಚೋದಿಸಲು ಈ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
MUST WATCH
ಹೊಸ ಸೇರ್ಪಡೆ
Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ
UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Nuclear Power Plant: ಇನ್ನೊಂದು ಅಣುಸ್ಥಾವರ ಮೂರು ಜಿಲ್ಲೆಗಳಲ್ಲಿ ಪರಿಶೀಲನೆ
Demand: ಕೊರೆವ ಚಳಿಯಲ್ಲೂ ಮುಂದುವರಿದ ‘ಆಶಾ’ ಕಾರ್ಯಕರ್ತೆಯರ ಮುಷ್ಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.