Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
ಒಂದು ಸಂಜೆ ಊಟಕ್ಕೆ ಸೇರಿದ್ದರಲ್ಲಿ ತಪ್ಪೇನಿದೆ: ಡಿಸಿಎಂ ಪ್ರಶ್ನೆ, ಸಂಪುಟ ಪುನಾರಚನೆ ಮುಖ್ಯಮಂತ್ರಿಗೆ ಬಿಟ್ಟ ವಿಚಾರ: ಸ್ಪಷ್ಟನೆ
Team Udayavani, Jan 7, 2025, 7:40 AM IST
ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಔತಣಕೂಟಕ್ಕೆ ಇಲ್ಲಸಲ್ಲದ ಅರ್ಥ ಕಲ್ಪಿಸುವುದು ಸರಿಯಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಟರ್ಕಿ ಪ್ರವಾಸದಿಂದ ವಾಪಸ್ ಆಗಿರುವ ಅವರು ದಿಲ್ಲಿಯಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, ಈ ಔತಣಕೂಟಕ್ಕೆ ಮಾಧ್ಯಮದವರು ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ಎಂದು ಪ್ರಶ್ನಿಸಿದರು.
ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಆಗಾಗ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ. ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ ಜತೆ ಎಲ್ಲಿಯೂ ಹೋಗಿರಲಿಲ್ಲ. ಆದ ಕಾರಣಕ್ಕೆ ವಿದೇಶ ಪ್ರವಾಸಕ್ಕೆ ತೆರಳಿದ್ದೆ. ಅನೇಕ ಸಚಿವರು ಕೂಡ ಕುಟುಂಬ ಸಹಿತ ವಿದೇಶ ಪ್ರವಾಸಕ್ಕೆ ತೆರಳಿದ್ದರು. ಬೆಂಗಳೂರಿನಲ್ಲಿದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದರು.
ಯಾವುದೂ ಇಲ್ಲ
ಸಚಿವ ಸಂಪುಟ ಪುನಾರಚನೆ ಆಗಬೇಕೆಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಮಾತುಗಳು ಕೇಳಿಬರುತ್ತಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಯಾವ ಚರ್ಚೆಯೂ ನಡೆದಿಲ್ಲ. ಮಾಧ್ಯಮದವರಿಗೆ ಯಾರೋ ತಪ್ಪು ಮಾಹಿತಿ ನೀಡಿ, ನಿಮಗೆ ಬಿಡುವು ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಇದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಷಯ. ಅವರು ಇದರ ಬಗ್ಗೆ ಮಾತನಾಡುತ್ತಾರೆ ಎಂದರು.
ಸಿಎಂ ಬದಲಾವಣೆ ವಿಷಯ ಬರುವುದಿಲ್ಲ:
2028ಕ್ಕೆ ನಾನೇ ಮುಖ್ಯಮಂತ್ರಿ ಅಭ್ಯರ್ಥಿ. ಆಗಿನ ಪರಿಸ್ಥಿತಿ ಹೇಗಿರುತ್ತದೋ, ಏನಾಗುತ್ತದೆಯೋ ಕಾದು ನೋಡಬೇಕು. ಸದ್ಯಕ್ಕೆ ಮುಖ್ಯಮಂತ್ರಿ ಇದ್ದಾರೆ. ಸಿಎಂ ಬದಲಾವಣೆ ವಿಷಯ ಬರುವುದಿಲ್ಲ. ರಹಸ್ಯ ಸಭೆ ಏನೂ ಇರಲಿಲ್ಲ. ಎಲ್ಲರೂ ಕೂಡಿಯೇ ಸಭೆ ಮಾಡಿದ್ದೇವೆ. ಅದು ಭೋಜನಕೂಟ ಅಷ್ಟೇ. ಸಭೆಯಲ್ಲಿ ಅಂಥದ್ದೇನೂ ಚರ್ಚೆ ಆಗಿಲ್ಲ. ಸಚಿವ ಸಂಪುಟ ವಿಸ್ತರಣೆಯೂ ಇಲ್ಲ. –ಸತೀಶ್ ಜಾರಕಿಹೊಳಿ, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.