Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ
ಸ್ಥಳೀಯರ ಪ್ರತಿಭಟನೆ, ಪೊಲೀಸರ ಸರ್ಪಗಾವಲು
Team Udayavani, Jan 7, 2025, 7:10 AM IST
ಚಿಕ್ಕಮಗಳೂರು: ನಗರದ ಕೋಟೆ ಬಡಾವಣೆಯಲ್ಲಿನ ದರ್ಗಾ ವಿವಾದ ತಾರಕಕ್ಕೇರಿದ್ದು, ದರ್ಗಾದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಹಾಗೂ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದುಕೊಳ್ಳಲಾಗಿದೆ ಎಂದು ಆರೋಪಿಸಿ ಸ್ಥಳೀಯರು ನಡೆಸುತ್ತಿರುವ ಪ್ರತಿಭಟನೆ ಸೋಮವಾರವೂ ಮುಂದುವರಿದಿದೆ.
ದರ್ಗಾ ಜಾಗದ ವಿವಾದ ನ್ಯಾಯಾಲಯದಲ್ಲಿದೆ. ದರ್ಗಾಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದು ಟೈಲ್ಸ್ ಹಾಕುವ ಕಾಮಗಾರಿ ನಡೆಸಲಾಗುತ್ತಿದೆ. ಕಾಮಗಾರಿ ನಡೆಸಲು ಬಿಡುವುದಿಲ್ಲವೆಂದು ಹಿಂದೂ ಪರ ಸಂಘಟನೆಗಳು ಪಟ್ಟು ಹಿಡಿದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಹಾಗೂ ಸದಸ್ಯರನ್ನು ಪೊಲೀಸರು ತಡೆದರು. ದರ್ಗಾದ 200 ಮೀಟರ್ ದೂರದಲ್ಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು “ಸ್ವಾಮಿಯೇ ಶರಣಂ ಅಯ್ಯಪ್ಪ’ ಘೋಷಣೆ ಕೂಗಿದರು. ನಮಗೆ ಅರಳಿ ಮರ ಸುತ್ತಲು ಬಿಡಿ, ದರ್ಗಾಕ್ಕೆ ಬ್ಯಾರಿಕೇಡ್ ಹಾಕಿ, ಅರಳಿ ಮರಕ್ಕೆ ಯಾಕೆ ಹಾಕುತ್ತೀರಾ ಎಂದು ಪ್ರಶ್ನಿಸಿದರು. ಈ ವೇಳೆ ಜನರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್ ಕುಮಾರ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
MUST WATCH
ಹೊಸ ಸೇರ್ಪಡೆ
Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್ ಆಟ
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
Siddapura: ಟ್ರಾಯ್‌ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ
Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.