Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
ನಕ್ಸಲರು ಮುಖ್ಯ ವಾಹಿನಿಗೆ ಮರಳುವ ಪ್ರಕ್ರಿಯೆ ಬಹುತೇಕ ಪೂರ್ಣ, ಚಿಕ್ಕಮಗಳೂರಿನಲ್ಲಿ ಶರಣು ಸಾಧ್ಯತೆ
Team Udayavani, Jan 7, 2025, 7:30 AM IST
ಚಿಕ್ಕಮಗಳೂರು: ರಾಜ್ಯ ಸರಕಾರದ ನಕ್ಸಲ್ ಶರಣಾಗತಿ ಪ್ಯಾಕೇಜ್ ಘೋಷಣೆ ಬಳಿಕ ಸಕ್ರಿಯ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಪ್ರಕ್ರಿಯೆ ನಡೆಯುತ್ತಿದ್ದು, ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ 6 ಮಂದಿ ನಕ್ಸಲರು ಜ. 8ರಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಮುಂದೆ ಶರಣಾಗಲಿದ್ದಾರೆಂದು ಖಚಿತ ಮೂಲಗಳಿಂದ ತಿಳಿದು ಬಂದಿದೆ.
ಮುಂಡಗಾರು ಲತಾ, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ. ವಸಂತ, ಟಿ.ಎನ್. ಜೀಶ್ 2024ರ ನಕ್ಸಲ್ ಶರಣಾಗತಿ ಪ್ಯಾಕೇಜ್‌ನಡಿ ಸಮಾಜದ ಮುಖ್ಯವಾಹಿಗೆ ಬರುವುದು ಬಹುತೇಕ ಖಚಿತವಾಗಿದೆ. ಉಡುಪಿ ಜಿಲ್ಲೆ ಕಾರ್ಕಳ ಸಮೀಪದಲ್ಲಿ ನಕ್ಸಲ್ ಮುಖಂಡ ವಿಕ್ರಮ್ ಗೌಡ ಎನ್‌ಕೌಂಟರ್ ಬಳಿಕ ಭೂಗತರಾಗಿರುವ ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನವನ್ನು ನಕ್ಸಲ್ ಶರಣಾಗತಿ ಸಮಿತಿ, ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರು ನಡೆಸಿದ್ದರು.
ಸರಕಾರ ಕೂಡ ಸಕ್ರಿಯ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಉದ್ದೇಶದಿಂದ ನಕ್ಸಲ್ ಶರಣಾಗತಿ ಪ್ಯಾಕೇಜ್-2024 ಘೋಷಣೆ ಮಾಡಿತ್ತು. ಇವರ ಶರಣಾಗತಿಯೊಂದಿಗೆ ಜಿಲ್ಲೆಯ ಮಲೆನಾಡು ನಕ್ಸಲ್ ಪೀಡಿತ ಪ್ರದೇಶವೆಂಬ ಹಣೆಪಟ್ಟಿಯಿಂದ ಹೊರಬರಲಿದೆ.
ʼ6 ಮಂದಿ ನಕ್ಸಲರ ಶರಣಾಗತಿ ಸಂಬಂಧ ಸರಕಾರದಿಂದ ಯಾವುದೇ ಆದೇಶ ಬಂದಿಲ್ಲ. ಅವರನ್ನು ಮುಖ್ಯವಾಹಿನಿಗೆ ಕರೆತರುವ ಪ್ರಯತ್ನ ನಡೆಯುತ್ತಿರುವುದು ನಿಜ.ʼ – ಡಾ| ವಿಕ್ರಮ್ ಅಮಟೆ, ಎಸ್‌ಪಿ, ಚಿಕ್ಕಮಗಳೂರು
ಶರಣಾಗತಿ ಪ್ರಸ್ತಾವ ಬಂದಿಲ್ಲ: ಡಿಸಿ ಮೀನಾ
ಚಿಕ್ಕಮಗಳೂರು: ನಕ್ಸಲ್ ಶರಣಾಗತಿ ಸಂಬಂಧ ಯಾವುದೇ ಪ್ರಸ್ತಾವ ಜಿಲ್ಲಾಡಳಿತದ ಮುಂದೆ ಬಂದಿಲ್ಲ. ನನಗೆ ಅದರ ಬಗ್ಗೆ ಮಾಹಿತಿ ಇಲ್ಲ ಎಂದು ಜಿಲ್ಲಾ ಧಿಕಾರಿ ಸಿ.ಎನ್. ಮೀನಾ ನಾಗರಾಜ್ ಸುದ್ದಿಗಾರರಿಗೆ ತಿಳಿಸಿದರು. ಆ ರೀತಿ ಏನಾದರೂ ಇದ್ದರೆ ನಕ್ಸಲ್ ಶರಣಾಗತಿ ಕಮಿಟಿ ಇದ್ದು ರಾಜ್ಯ ಸರಕಾರದಿಂದ ಮಾಹಿತಿ ನೀಡಬೇಕು. ಆದರೆ ಅಂತಹ ಯಾವುದೇ ಮಾಹಿತಿ ಬಂದಿಲ್ಲ.
ನಕ್ಸಲ್ ಶರಣಾಗತಿ ಪ್ರಸ್ತಾವ ರಾಜ್ಯ ಸರಕಾರದಿಂದ ನಮ್ಮ ಮುಂದೆ ಬಂದರೆ ಕಮಿಟಿ ನಿಯಮದಂತೆ ಶರಣಾಗತಿ ಮಾಡಲಾಗುವುದು. ಅವರ ಬೇಡಿಕೆಗಳ ಬಗ್ಗೆ ರಾಜ್ಯ ಸರಕಾರ ಮತ್ತು ಕಮಿಟಿಯ ಮುಂದೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ
Nuclear Power Plant: ಇನ್ನೊಂದು ಅಣುಸ್ಥಾವರ ಮೂರು ಜಿಲ್ಲೆಗಳಲ್ಲಿ ಪರಿಶೀಲನೆ
Demand: ಕೊರೆವ ಚಳಿಯಲ್ಲೂ ಮುಂದುವರಿದ ‘ಆಶಾ’ ಕಾರ್ಯಕರ್ತೆಯರ ಮುಷ್ಕರ
ಎಂಟು ಅಧಿಕಾರಿಗಳಿಗೆ ಸೇರಿದ 38 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ: 21 ಕೋಟಿ ರೂ. ಆಸ್ತಿ ಪತ್ತೆ
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
MUST WATCH
ಹೊಸ ಸೇರ್ಪಡೆ
Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ
UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Nuclear Power Plant: ಇನ್ನೊಂದು ಅಣುಸ್ಥಾವರ ಮೂರು ಜಿಲ್ಲೆಗಳಲ್ಲಿ ಪರಿಶೀಲನೆ
Demand: ಕೊರೆವ ಚಳಿಯಲ್ಲೂ ಮುಂದುವರಿದ ‘ಆಶಾ’ ಕಾರ್ಯಕರ್ತೆಯರ ಮುಷ್ಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.