Sandalwood: ಫೆ.7ಕ್ಕೆ ಗಜರಾಮ ತೆರೆಗೆ
Team Udayavani, Jan 7, 2025, 4:10 PM IST
ನಟ ರಾಜವರ್ಧನ್ ನಾಯಕರಾಗಿರುವ “ಗಜರಾಮ’ ಚಿತ್ರ ಫೆ.7ರಂದು ತೆರೆಕಾಣುತ್ತಿದೆ. ಟೈಟಲ್, ಟೀಸರ್ ಹಾಗೂ ಸಾರಾಯಿ ಶಾಂತಮ್ಮ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸುನಿಲ್ ಕುಮಾರ್ ವಿ. ಎ ಆ್ಯಕ್ಷನ್ ಕಟ್ ಹೇಳಿದ್ದಾರೆ. ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿರುವ ರಾಜವರ್ಧನ್‌ಗೆ ಜೋಡಿಯಾಗಿ ತಪಸ್ವಿನಿ ಬಣ್ಣ ಹಚ್ಚಿದ್ದಾರೆ. ಪೊಲೀಸ್ ಪಾತ್ರದಲ್ಲಿ ದೀಪಕ್ ನಟಿಸಿದರೆ, ಕಬೀರ್ ಸಿಂಗ್ ಖಳನಾಯಕನ ಪಾತ್ರ ನಿರ್ವಹಿಸಿದ್ದಾರೆ.
ರಾಗಿಣಿ ಸ್ಪೆಷಲ್ ನಂಬರ್‌ಗೆ ಹೆಜ್ಜೆ ಹಾಕಿದ್ದಾರೆ. ಚಿತ್ರಕ್ಕೆ ಕೆ.ಎಸ್.ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್ ಬಿ. ಮಠದ್ ಸಂಕಲನ, ಧನಂಜಯ್ ಅವರ ಕೊರಿಯೋಗ್ರಾಫಿ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಅವರ ಸಾಹಿತ್ಯವಿದೆ. “ಬಾಂಡ್ ರವಿ’ ಸಿನಿಮಾವನ್ನು ನಿರ್ಮಾಣ ಮಾಡಿರುವ ಲೈಫ್ ಲೈನ್ ಫಿಲ್ಮ್ ಪ್ರೊಡಕ್ಷನ್ ಅಡಿಯಲ್ಲಿ ನರಸಿಂಹಮೂರ್ತಿ “ಗಜರಾಮ’ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಮಾಸ್ ಆಕ್ಷನ್ ಎಂಟರ್‌ಟೈನರ್ ಆಗಿರುವ “ಗಜರಾಮ’ ಚಿತ್ರಕ್ಕೆ ಮನೋಮೂರ್ತಿ ಸಂಗೀತ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
MUST WATCH
ಹೊಸ ಸೇರ್ಪಡೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.