Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!
Team Udayavani, Jan 7, 2025, 10:34 PM IST
ಗುವಾಹಟಿ: ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಕಲ್ಲಿದ್ದಲು ಗಣಿಯೊಳಗೆ ದಿಢೀರ್ ನೀರಿನ ಹರಿವು ಉಂಟಾಗಿದ್ದು, 100 ಅಡಿ ಆಳದಲ್ಲಿ ನೀರು ತುಂಬಿದ ಕಾರಣ ಒಳಗೆ 9 ಕಾರ್ಮಿಕರು ಸಿಲುಕಿದ್ದು, ಈ ಪೈಕಿ 3 ಮಂದಿ ಮೃತಪಟ್ಟಿದ್ದಾರೆ. ಉಳಿದ 6 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಸೇನೆ ಮತ್ತು ಅಸ್ಸಾಂ ರೈಫಲ್ಸ್ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ವಿಶಾಖಪಟ್ಟಣದಿಂದ ನೌಕಾಪಡೆಯ ಮುಳುಗುತಜ್ಞರನ್ನೂ ಕರೆಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಸ್ಸಾಂನ ಉಮ್ರಾಂಗ್ಸೊ ಪ್ರದೇಶದ ಗಣಿ ಕ್ವಾರಿಯಲ್ಲಿ ಈ ಘಟನೆ ನಡೆದಿದೆ. ನೀರಿನ ಮಟ್ಟ ಏಕಾಏಕಿ ಏರಿದ್ದರಿಂದ ಅವರಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ. ಘಟನೆ ವೇಳೆ ಗಣಿಯಲ್ಲಿ 15 ಕಾರ್ಮಿಕರಿದ್ದರು ಎಂದು ಮೂಲಗಳು ತಿಳಿಸಿವೆಯಾದರೂ ಸರ್ಕಾರ ಇದನ್ನು ದೃಢಪಡಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: 18ನೇ ಪ್ರವಾಸಿ ಭಾರತೀಯ ದಿವಸ್ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ
CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
MUST WATCH
ಹೊಸ ಸೇರ್ಪಡೆ
Odisha: 18ನೇ ಪ್ರವಾಸಿ ಭಾರತೀಯ ದಿವಸ್ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ
AUSvSL: ಲಂಕಾ ಸರಣಿಗೆ ಆಸೀಸ್ ತಂಡ ಪ್ರಕಟ: ಸ್ಟೀವ್ ಸ್ಮಿತ್ ಗೆ ನಾಯಕತ್ವ ಪಟ್ಟ
CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್ ನಾಮಿನೇಷನ್ ವೋಟಿಂಗ್ ವಿಸ್ತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.