Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
Team Udayavani, Jan 8, 2025, 7:20 AM IST
ದುಬಾೖ: “ಆಸ್ಟ್ರೇಲಿಯ ವಿರುದ್ಧ ಭಾರತ ಸೋತದ್ದು ನನಗೆ ಅಷ್ಟೊಂದು ಬೇಸರ ತರಿಸಲಿಲ್ಲ. ಆದರೆ ತವರಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ವೈಟವಾಶ್ ಅನುಭವಿಸಿದ್ದು ಮಾತ್ರ ಅತ್ಯಂತ ದುಃಖಕರವಾಗಿತ್ತು’ ಎಂಬುದಾಗಿ ಟೀಮ್ ಇಂಡಿಯಾದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಹೇಳಿದ್ದಾರೆ.
“ವಿರಾಟ್ ಕೊಹ್ಲಿ, ರೋಹಿತ್ ಶರ್ಮ ಅವರು ಭಾರತದ ಪರ ಸಾಕಷ್ಟು ಪಂದ್ಯಗಳನ್ನು ಆಡಿ ತಂಡವನ್ನು ಗೆಲ್ಲಿಸಿದ ಛಾತಿ ಹೊಂದಿದ್ದಾರೆ. ಇವರಿಬ್ಬರೂ ಲೆಜೆಂಡ್ರಿ ಕ್ರಿಕೆಟಿಗರು. ಆದರೆ ನಾವೀಗ ಆಸ್ಟ್ರೇಲಿಯ ವಿರುದ್ಧ ಸರಣಿ ಸೋತ ಬಳಿಕ ತಂಡದ ಸ್ಟಾರ್ ಆಟಗಾರರ ವಿರುದ್ಧ ಬೇಕಾಬಿಟ್ಟಿ ಮಾತಾಡುತ್ತಿದ್ದೇವೆ. ಹಿಂದಿನ ಸಾಧನೆಯನ್ನು ಜನರು ಮರೆತು ಬಿಡುತ್ತಾರೆ. ರೋಹಿತ್ ಹಾಗೂ ಕೊಹ್ಲಿ ಈ ಕಾಲಘಟ್ಟದ ಶ್ರೇಷ್ಠ ಆಟಗಾರರು ಎಂಬುದನ್ನು ಮರೆಯಬಾರದು’ ಎಂಬುದಾಗಿ ಯುವರಾಜ್ ಸಿಂಗ್ ಹೇಳಿದರು.
“ಕೋಚ್ ಗೌತಮ್ ಗಂಭೀರ್, ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್, ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಅವರೆಲ್ಲ ನನಗಿಂತ ಹೆಚ್ಚು ಕ್ರಿಕೆಟ್ ಆಡಿದ್ದಾರೆ. ಭವಿಷ್ಯದಲ್ಲಿ ಭಾರತದ ಕ್ರಿಕೆಟ್ ಯಾವ ಹಾದಿಯಲ್ಲಿ ಮುನ್ನಡೆಯಬೇಕೆಂಬುದನ್ನು ಇವರೆಲ್ಲ ಸೇರಿ ನಿರ್ಧರಿಸಲಿದ್ದಾರೆ’ ಎಂದು ಯುವಿ ಹೇಳಿದರು.
ದುಬಾೖಯಲ್ಲಿ ನಡೆದ ಟೆನಿಸ್ ಬಾಲ್ ಕ್ರಿಕೆಟ್ ಪ್ರೀಮಿಯರ್ ಲೀಗ್ ಟಿ10 ಪಂದ್ಯಾವಳಿಯ ಉದ್ಘಾಟನ ಸಮಾರಂಭದ ವೇಳೆ ಯುವರಾಜ್ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.