ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಭಾರತದ 21 ಸ್ಪರ್ಧಿಗಳು ಭಾಗಿ
Team Udayavani, Jan 7, 2025, 11:09 PM IST
ಹೊಸದಿಲ್ಲಿ: ಜನವರಿ 14ರಂದು ಹೊಸದಿಲ್ಲಿಯಲ್ಲಿ ಆರಂಭವಾಗಲಿರುವ “ಯೋನೆಕ್ಸ್-ಸನ್ರೈಸ್ ಇಂಡಿಯಾ ಓಪನ್ ಸೂಪರ್ 750′ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತದ 21 ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಇದು ತವರಿನ ಪಂದ್ಯಾವಳಿಯಲ್ಲಿ ಭಾರತದ ಅತ್ಯಧಿಕ ಸಂಖ್ಯೆಯ ಶಟ್ಲರ್ಗಳ ಪಾಲ್ಗೊಳ್ಳುವಿಕೆಯ ದಾಖಲೆ ಆಗಿದೆ.
ತಾರಾ ಆಟಗಾರರಾದ ಪಿ.ವಿ. ಸಿಂಧು, ಲಕ್ಷ್ಯ ಸೇನ್ ಈ ಪಂದ್ಯಾವಳಿಯ ಪ್ರಮುಖ ಆಕರ್ಷಣೆ ಆಗಲಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ಸಿಂಧು ಮೊದಲ ಸಲ ಸ್ಪರ್ಧೆಗೆ ಇಳಿಯಲಿದ್ದಾರೆ. ಪುರುಷರ ಸಿಂಗಲ್ಸ್ನಲ್ಲಿ 3, ವನಿತಾ ಸಿಂಗಲ್ಸ್ ನಲ್ಲಿ 4, ಪುರುಷರ ಡಬಲ್ಸ್ನಲ್ಲಿ 2, ವನಿತಾ ಡಬಲ್ಸ್ನಲ್ಲಿ 8, ಮಿಶ್ರ ಡಬಲ್ಸ್ನಲ್ಲಿ 4 ಮಂದಿ, ಒಟ್ಟು 21 ಆಟಗಾರರ ಭಾರತ ತಂಡ ಹೋರಾಟಕ್ಕೆ ಸಜ್ಜಾಗಲಿದೆ.
“ಸೂಪರ್ 750 ಪಂದ್ಯಾವಳಿಯಲ್ಲಿ ಇಷ್ಟೊಂದು ಸಂಖ್ಯೆಯ ಆಟಗಾರರು ಪಾಲ್ಗೊಳ್ಳುತ್ತಿರುವುದು ಸಂತಸದ ಸಂಗತಿ. ಇದು ಜಾಗತಿಕ ಮಟ್ಟದಲ್ಲಿ ಭಾರತೀಯ ಬ್ಯಾಡ್ಮಿಂಟನ್ನ ಬೆಳವಣಿಗೆಗೆ ಸಾಕ್ಷಿ. ಹಾಗೆಯೇ 2025ರ ಬ್ಯಾಡ್ಮಿಂಟನ್ ಋತುವನ್ನು ಹೆಚ್ಚಿನ ಭರವಸೆಯೊಂದಿಗೆ ಆರಂಭಿಸಲು ಇದೊಂದು ವೇದಿಕೆ ಆಗಿದೆ’ ಎಂಬುದಾಗಿ ಭಾರತೀಯ ಬ್ಯಾಡ್ಮಿಂಟನ್ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಂಜಯ್ ಮಿಶ್ರಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಕಿವೀಸ್ ಸರ್ಜನ್ ಭೇಟಿಯಾದ ಬುಮ್ರಾ: ಚಾಂಪಿಯನ್ಸ್ ಟ್ರೋಫಿಗೆ ಅನುಮಾನ?
SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
AUSvSL: ಲಂಕಾ ಸರಣಿಗೆ ಆಸೀಸ್ ತಂಡ ಪ್ರಕಟ: ಸ್ಟೀವ್ ಸ್ಮಿತ್ ಗೆ ನಾಯಕತ್ವ ಪಟ್ಟ
Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್ ಆಟ
MUST WATCH
ಹೊಸ ಸೇರ್ಪಡೆ
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.