Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಶೀಘ್ರ ಟೆಂಡರ್: ಇಂಧನ ಸಚಿವ
Team Udayavani, Jan 8, 2025, 7:05 AM IST
ಮಂಡ್ಯ: ಈ ಬಾರಿ ಕೃಷಿ ಪ್ರದೇಶ ವಿಸ್ತರಣೆಯಾಗಿರುವ ಕಾರಣ ಜನವರಿಯಿಂದ ಮೇ ತಿಂಗಳವರೆಗೆ ಹೆಚ್ಚುವರಿ ವಿದ್ಯುತ್ ಅಗತ್ಯವಿದೆ. ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಇಂಧನ ಇಲಾಖೆಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿ, ಜನವರಿ ಮತ್ತು ಫೆಬ್ರವರಿಯಲ್ಲಿ ತಲಾ 400 ಮೆಗಾವ್ಯಾಟ್ ಹಾಗೂ ಮಾರ್ಚ್, ಎಪ್ರಿಲ್, ಮೇ ತಿಂಗಳಲ್ಲಿ ತಲಾ 1 ಸಾವಿರ ಮೆ.ವ್ಯಾ. ವಿದ್ಯುತ್ ಖರೀದಿಗೆ ಯೋಜನೆ ರೂಪಿಸಲಾಗಿದೆ. ದೀರ್ಘಾವಧಿ ವಿದ್ಯುತ್ ಖರೀದಿ ಮಾಡಿದರೆ ಕಡಿಮೆ ದರಕ್ಕೆ ವಿದ್ಯುತ್ ಲಭ್ಯವಾಗುತ್ತದೆ ಎಂದರು.
ಪಂಪ್ ಸ್ಟೋರೇಜ್ ಸಿಸ್ಟಂ
ಪ್ರಸ್ತುತ ಶರಾವತಿ ನದಿಯಲ್ಲಿ ಸಾವಿರ ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಇದರಿಂದ ಹೆಚ್ಚುವರಿ ಸಾವಿರ ಮೆ.ವ್ಯಾ. ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ. ಯೋಜನೆಗೆ 9 ಸಾವಿರ ಕೋಟಿ ರೂ. ವೆಚ್ಚವಾಗಲಿದೆ. ಟೆಂಡರ್ ಕರೆದು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಮಂತ್ರಿಗಳಿಗೆ ಊಟ ಕೊಟ್ಟರೆ ತಪ್ಪೇನು?: ಸಚಿವ
ಡಿನ್ನರ್ ಪಾರ್ಟಿ ಮಾಡುವುದು ತಪ್ಪಿಲ್ಲ ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಪಾರ್ಟಿ ಮಾಡಿದ್ದನ್ನು ಸಮರ್ಥಿಸಿಕೊಂಡರು. ಡಿನ್ನರ್ ಪಾರ್ಟಿ ಮಾಡುವುದು ತಪ್ಪಿಲ್ಲ ಎಂದು ಸಿಎಂ ಹೇಳಿದ್ದಾರೆ.
ಮಂತ್ರಿಗಳನ್ನು ಕರೆದು ಊಟ ಕೊಟ್ಟರೆ ತಪ್ಪೇನು? ಡಿನ್ನರ್ ಪಾರ್ಟಿ ಮಾಡಿದರೆ ಮುಖ್ಯಮಂತ್ರಿ ಬದಲಾವಣೆ ಮಾಡಲಾಗುವುದಿಲ್ಲ. ಒಂದು ಮನೆಯಲ್ಲಿ 4 ಜನ ಕುಳಿತು ಊಟ ಮಾಡಿದರೆ ಮುಖ್ಯಮಂತ್ರಿ ಬದಲಾವಣೆ ಎಂದು ಯಾಕೆ ಅಂದುಕೊಳ್ಳಬೇಕು ಎಂದು ಪ್ರಶ್ನಿಸಿದರು. ಸಂಕ್ರಾಂತಿ ಅನಂತರ ಏನೂ ನಡೆಯೋದಿಲ್ಲ. ಹಬ್ಬ ಎಲ್ಲರೂ ಆಚರಿಸುತ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.