Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್!
ತಿಪಟೂರಲ್ಲಿ ಜನರ ನಿದ್ದೆಗೆಡಿಸಿದ್ದ ಚಿರತೆ ಅಂದರ್, ಯುವಕನ ಧೈರ್ಯಕ್ಕೆ ಭಾರೀ ಮೆಚ್ಚುಗೆ
Team Udayavani, Jan 8, 2025, 7:20 AM IST
ತುಮಕೂರು ಗ್ರಾಮಾಂತರ: ಚಿರತೆ ಹೆಸರು ಕೇಳಿದರೆ ಸಾಕು, ಯಾರಿಗೆ ತಾನೇ ಭಯ ಇಲ್ಲ. ದೂರದಲ್ಲಿ ಚಿರತೆ ಕಂಡರೂ ಮರುಕ್ಷಣವೇ ಓಡಿ ಹೋಗುವವರೇ ಹೆಚ್ಚು. ಆದರೆ, ಯುವಕನೊಬ್ಬ ಧೈರ್ಯ ಮಾಡಿ ಅರಣ್ಯ ಇಲಾಖೆಗೇ ಚಿರತೆಯನ್ನು ಸೆರೆ ಹಿಡಿದುಕೊಟ್ಟಿರುವ ಘಟನೆ ತಿಪಟೂರು ತಾಲೂಕಿನ ಕೆರೆಗೋಡಿ ರಂಗಾಪುರ ಗ್ರಾಮದಲ್ಲಿ ನಡೆದಿದೆ.
ಕೆರೆಗೋಡಿ ರಂಗಾಪುರ ಗ್ರಾಮದಲ್ಲಿ ಹಲವು ದಿನಗಳಿಂದ ಚಿರತೆ ಹಾವಳಿ ಜೋರಾಗಿತ್ತು. ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳ ತಂಡ ಹೋದಾಗ ಸಾರ್ವಜನಿಕರ ಕೂಗಾಟದಿಂದ ಚಿರತೆ ಗಾಬರಿಯಾಗಿ ಬಲೆಗೆ ಬೀಳದೆ ತಪ್ಪಿಸಿಕೊಳ್ಳುವ ಯತ್ನ ಮಾಡಿತ್ತು. ಈ ವೇಳೆ ತನ್ನ ಪ್ರಾಣವನ್ನೂ ಲೆಕ್ಕಿಸದ ಯುವಕ ನವೀನ್ ಎಂಬಾತ ನಾಲ್ಕು ವರ್ಷದ ಚಿರತೆಯ ಬಾಲವನ್ನು ಹಿಡಿದಿದ್ದಾನೆ.
ಯುವಕನ ಅದೃಷ್ಟ ಚೆನ್ನಾಗಿದ್ದರಿಂದ ಚಿರತೆ ಮರು ದಾಳಿ ನಡೆಸಿಲ್ಲ. ಒಂದು ವೇಳೆ ದಾಳಿ ಮಾಡಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು. ಕೂಡಲೇ ಅರಣ್ಯ ಇಲಾಖೆಯವರು ಚಿರತೆ ಮೇಲೆ ಬಲೆ ಬೀಸಿ ಸೆರೆ ಹಿಡಿದಿದ್ದಾರೆ. ಯುವಕನ ಧೈರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊನೆಗೂ ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಯುವಕನ ನೆರವಿನೊಂದಿಗೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.