HMP Virus: ಎಚ್‌ಎಂಪಿ ವೈರಸ್‌ ಭೀತಿ ಬೇಡ, ಪರೀಕ್ಷೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಎಚ್‌ಎಂಪಿವಿ ಮಾರಣಾಂತಿಕವಲ್ಲ, ಸೋಂಕು ಹರಡದಂತೆ ಕ್ರಮ, ತಾಯಂದಿರ ಮರಣ ತಡೆಯಿರಿ: ಅಧಿಕಾರಿಗಳಿಗೆ ಸಿಎಂ ಸೂಚನೆ

Team Udayavani, Jan 8, 2025, 7:25 AM IST

CM-siddu

ಬೆಂಗಳೂರು: ಹ್ಯೂಮನ್‌ ಮೆಟಾನ್ಯುಮೊ ವೈರಸ್‌ (ಎಚ್‌ಎಂಪಿವಿ) ಬಗ್ಗೆ ರಾಜ್ಯದ ಜನತೆ ಆತಂಕಪಡುವ ಅಗತ್ಯವಿಲ್ಲ. ಇದು ಮಾರಣಾಂತಿಕವಲ್ಲ. ಈ ಸೋಂಕುಪೀಡಿತರ ಪರೀಕ್ಷೆ ಮಾಡುವ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಅಗತ್ಯ ಕ್ರಮಗಳನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಕೈಗೊಳ್ಳಬೇಕು. ಸೋಂಕು ಹರಡದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸೂಚನೆ ನೀಡಿದರು.

ತಾಯಂದಿರ ಮರಣ ತಡೆಗೆ ಕ್ರಮ ಕೈಗೊಳ್ಳಿ
ತಾಯಂದಿರ ಮರಣ ಪ್ರಕರಣವನ್ನು ಶೂನ್ಯಕ್ಕೆ ಇಳಿಸಲು ವ್ಯಾಪಕ ಅಭಿಯಾನ ಆರಂಭಿಸಬೇಕು. ತಾಯಂದಿರ ಮರಣ ತಡೆಗಟ್ಟಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ವೇಳೆ ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ದೇಶಕ್ಕೆ ಹೋಲಿಸಿದರೆ ರಾಜ್ಯದಲ್ಲಿ ತಾಯಂದಿರ ಮರಣ ಅನುಪಾತ ಕಡಿಮೆಯಿದೆ. 2018-20ರ ಅವಧಿಯಲ್ಲಿ ರಾಜ್ಯದಲ್ಲಿ ಒಂದು ಲಕ್ಷ ಮಹಿಳೆಯರಲ್ಲಿ 69 ಮರಣ ಸಂಭವಿಸುತ್ತಿದ್ದು, ದೇಶದಲ್ಲಿ ಈ ಅನುಪಾತ 97 ಇದೆ. 2022-24ರ ಅವಧಿಯಲ್ಲಿ ರಾಜ್ಯದಲ್ಲಿ ಇದರ ಪ್ರಮಾಣ 55ಕ್ಕೆ ಇಳಿದಿದೆ ಎಂದು ಹೇಳಿದರು.

ಹೆರಿಗೆ ಪ್ರಮಾಣಕ್ಕೆ ಅನುಗುಣವಾಗಿ ಆಸ್ಪತ್ರೆಗಳಲ್ಲಿ ಪ್ರಸೂತಿ ತಜ್ಞರು ಮತ್ತು ಅರಿವಳಿಕೆ ತಜ್ಞರನ್ನು ನೇಮಕ ಮಾಡಬೇಕು. ಇದಕ್ಕಾಗಿ ಕಡಿಮೆ ಹೆರಿಗೆ ಪ್ರಮಾಣವಿರುವ ಆಸ್ಪತ್ರೆಗಳ ವೈದ್ಯಾಧಿಕಾರಿಗಳನ್ನು ಪುನರ್‌ ನಿಯೋಜನೆ ಮಾಡಬೇಕು. ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯಾಧಿಕಾರಿಗಳ ಲಭ್ಯತೆಯನ್ನು ಖಾತ್ರಿಪಡಿಸಬೇಕು. ಔಷಧ ಖರೀದಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಪ್ರಸ್ತುತ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 11,182 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಇದುವರೆಗೆ 6,593 ಕೋಟಿ ರೂ. ವೆಚ್ಚ ಮಾಡಲಾಗಿದೆ. ಶೇ. 58.96 ಪ್ರಗತಿ ಸಾಧಿಸಲಾಗಿದೆ. ಒಟ್ಟು 3,927 ಎಎನ್‌ಎಂ ಖಾಲಿ ಹುದ್ದೆಗಳ ಪೈಕಿ 1,205 ಹಾಗೂ 2,990 ಎಚ್‌ಐಒ ಖಾಲಿ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಈಗಾಗಲೇ ಅನುಮೋದನೆ ನೀಡಿದೆ. ಅಗತ್ಯ ಸೇವೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವಿಳಂಬ ಮಾಡಬಾರದು ಎಂದರು.

ಹೆಣ್ಣು ಭ್ರೂಣ ಹತ್ಯೆ ತಡೆಯಿರಿ
ಹೆಣ್ಣು ಭ್ರೂಣ ಹತ್ಯೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಲ್ಲ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಆಸ್ಪತ್ರೆಗಳಲ್ಲಿ ಸ್ವತ್ಛತೆ, ಅಗತ್ಯ ಮೂಲಸೌಕರ್ಯಗಳ ನಿರ್ವಹಣೆಗೆ ವ್ಯವಸ್ಥೆ ಮಾಡಬೇಕು. ನಗರ ಪ್ರದೇಶಗಳಲ್ಲಿ 817 “ನಮ್ಮ ಕ್ಲಿನಿಕ್‌’ಗಳನ್ನು ಮಂಜೂರು ಮಾಡಲಾಗಿದ್ದು, ಪ್ರಸ್ತುತ 512 ಕಾರ್ಯಾಚರಿಸುತ್ತಿವೆ. ಇವುಗಳನ್ನು ಇನ್ನಷ್ಟು ಬಲಪಡಿಸಲು ಕ್ರಮ ಕೈಗೊಳ್ಳಬೇಕು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಡಿ ಚಿಕಿತ್ಸಾ ಪ್ಯಾಕೇಜ್‌ ಮೊತ್ತ ಹೆಚ್ಚಳ ಮಾಡುವ ಕುರಿತು ಪರಿಶೀಲನೆ ಮಾಡಬೇಕು ಎಂದರು. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹಾಗೂ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಉಸಿರಾಟ ಸಂಬಂಧಿ ಕಾಯಿಲೆ ಬಗ್ಗೆ ಕಟ್ಟೆಚ್ಚರ: ಕೇಂದ್ರ ಸೂಚನೆ
ಹೊಸದಿಲ್ಲಿ: ದೇಶದಲ್ಲಿ ಎಚ್‌ಎಂಪಿ ವೈರಸ್‌ ಸೋಂಕು ಮತ್ತಿಬ್ಬರು ಮಕ್ಕಳಲ್ಲಿ ಕಂಡು ಬಂದಿದ್ದು, ಈ ಮೂಲಕ ಸೋಂಕುಪೀಡಿತರ ಸಂಖ್ಯೆ 7ಕ್ಕೆ ಏರಿದೆ. ಎಚ್‌ಎಂಪಿ ವೈರಸ್‌ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಎಚ್ಚೆತ್ತ ಕೇಂದ್ರ ಸರಕಾರವು ಉಸಿರಾಟ ಸಂಬಂಧಿ ಸೋಂಕುಗಳು ಬಗ್ಗೆ ನಿಗಾ ಇಡುವಂತೆ ಎಲ್ಲ ರಾಜ್ಯ ಸರಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ಮಂಗಳವಾರ ನಾಗಪುರದ 7 ಮತ್ತು 14 ವರ್ಷದ ಇಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್‌ ಸೋಂಕು ಕಂಡುಬಂದಿದೆ. ಆರೋಗ್ಯ ಇಲಾಖೆ ಕಾರ್ಯದರ್ಶಿ ಪುಣ್ಯ ಸಲಿಲ್‌ ಶ್ರೀವಾಸ್ತವ್‌ ಅವರು ಎಲ್ಲ ರಾಜ್ಯದ ಅಧಿಕಾರಿಗಳೊಂದಿಗೆ ವರ್ಚುವಲ್‌ ಸಭೆ ನಡೆಸಿದ್ದು ಸಾರಿ, ಐಎಲ್‌ಐ, ಎಚ್‌ಎಂಪಿವಿ ಸಹಿತ ಎಲ್ಲ ಉಸಿರಾಟ ಸಂಬಂಧಿ ಕಾಯಿಲೆಗಳ ಬಗ್ಗೆ ನಿಗಾ ಇರಿಸುವಂತೆ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

7-uv-fusion

UV Fusion: ವಾಸ್ತವದ ಗೂಡಲ್ಲಿ ಭಾವಸೆಲೆ ಅರಳಲಿ

SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ

SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.