illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
ಕೊಳವೆಬಾವಿ ಯೋಜನೆಯಲ್ಲಿ ಕೋಟ್ಯಂತರ ರೂ. ಅಕ್ರಮ
Team Udayavani, Jan 8, 2025, 3:08 AM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊಳವೆ ಬಾವಿ ಕೊರೆಸುವ ಸಂಬಂಧ 2016ರಿಂದ 2019ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ. ಅಕ್ರಮ ಕುರಿತು ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು, ಮಂಗಳವಾರ ಬಿಬಿಎಂಪಿ ಪ್ರಧಾನ ಅಭಿಯಂತರ ಡಾ| ಬಿ.ಎಸ್. ಪ್ರಹ್ಲಾದ್ ಕಚೇರಿ ಮೇಲೆ ದಾಳಿ ನಡೆಸಿದ್ದು, ಅವರಿಂದ ಹೇಳಿಕೆ ದಾಖಲಿಸಿಕೊಂಡು ಮಾಹಿತಿ ಕಲೆ ಹಾಕಿದ್ದಾರೆ.
ಬಿಬಿಎಂಪಿ ಮುಖ್ಯ ಲೆಕ್ಕಾಧಿಕಾರಿ ಬೀನಾ ಅವರನ್ನು ಕರೆಸಿದ ಇಡಿ ಅಧಿಕಾರಿಗಳು, ಅವರಿಂದ ಯೋಜನೆಗೆ ಸಂಬಂಧಿಸಿದ ಲೆಕ್ಕದ ದಾಖಲೆ ಕೆದಕಿದ್ದಾರೆ. ಬಿಬಿಎಂಪಿಯ ಎಕ್ಸಿಕ್ಯೂಟಿವ್ ಎಂಜಿನಿಯರ್‌ಗಳು ಹಾಗೂ 8 ವಲಯಗಳ ಮುಖ್ಯ ಅಭಿಯಂತರರನ್ನು ಬಿಬಿಎಂಪಿ ಕೇಂದ್ರ ಕಚೇರಿಗೆ ಕರೆಯಿಸಿ ಪ್ರಕರಣದ ಕುರಿತು ಕೂಲಂಕಷವಾಗಿ ಮಾಹಿತಿ ಕಲೆ ಹಾಕಲು ಇ.ಡಿ. ಮುಂದಾಗಿದೆ ಎಂದು ತಿಳಿದುಬಂದಿದೆ.
ಏನಿದು ಪ್ರಕರಣ?
2016-19ರ ಅವಧಿಯಲ್ಲಿ ಬೊಮ್ಮನಹಳ್ಳಿ, ಆರ್.ಆರ್.ನಗರ, ಮಹದೇವಪುರ, ಯಲಹಂಕ, ದಾಸರಹಳ್ಳಿಯಲ್ಲಿರುವ 9 ವಿಧಾನಸಭಾ ಕ್ಷೇತ್ರದ 68 ವಾರ್ಡ್‌ಗಳಲ್ಲಿ 9,558 ಬೋರ್‌ವೆಲ್ ಕೊರೆಸಲಾಗಿದೆ. ಇದರ ಜತೆಗೆ 976 ನೀರು ಸಂಸ್ಕರಣ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಅಂದು ಲೆಕ್ಕ ತೋರಿಸಿದ್ದರು. ಆದರೆ 1 ಸಾವಿರಕ್ಕೂ ಕಡಿಮೆ ಕೊಳವೆಬಾವಿ ಕೊರೆಸಿ ಬಿಬಿಎಂಪಿ ಅಧಿಕಾರಿಗಳು ತಪ್ಪು ಲೆಕ್ಕ ಕೊಟ್ಟು ಕೋಟ್ಯಂತರ ರೂ. ಅಕ್ರಮ ಎಸಗಿರುವ ಆರೋಪ ಕೇಳಿ ಬಂದಿತ್ತು.
2019ರಲ್ಲಿ ಈ ಕುರಿತು ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಬಿಜೆಪಿ ಮುಖಂಡ ಎನ್.ಆರ್. ರಮೇಶ್ ದೂರು ನೀಡಿದ್ದರು. 10 ಕೋಟಿ ರೂ.ಗಿಂತ ಅಧಿಕ ಹಣ ವರ್ಗಾವಣೆ ವಹಿವಾಟು ನಡೆದರೆ ಆ ಪ್ರಕರಣದಲ್ಲಿ ಇಡಿ ತನಿಖೆ ಮಾಡುತ್ತದೆ. ಈ ಯೋಜನೆಯಲ್ಲಿ ಒಟ್ಟು 400 ಕೋಟಿ ರೂ.ಗೂ ಅಧಿಕ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಈ ಬಗ್ಗೆ ಇಸಿಐಆರ್ (ಪ್ರಕರಣ) ದಾಖಲಿಸಿಕೊಂಡು ಪ್ರಕರಣದ ತನಿಖೆ ಕೈಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು
Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.