Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್‌ ಡಿನ್ನರ್‌ಗೆ ಹೈ ಕಮಾಂಡ್‌ ತಡೆ

ಸತೀಶ್‌ ಜಾರಕಿಹೊಳಿ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ ಅವರಿಂದಲೂ ಭೋಜನಕೂಟ, ದೂರು ಹಿನ್ನೆಲೆಯಲ್ಲಿ ಔತಣಕೂಟ ರದ್ದುಪಡಿಸಲು ಹೈಕಮಾಂಡ್‌ನಿಂದ ಸೂಚನೆ

Team Udayavani, Jan 8, 2025, 7:45 AM IST

Cong-CM-Dinner-Meet

ಬೆಂಗಳೂರು: ಹೊಸ ವರ್ಷದ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷರ ಗೈರು ಹಾಜರಿಯಲ್ಲಿ ಆರಂಭವಾಗಿದ್ದ ಸರಣಿ ಭೋಜನ ಕೂಟ ಗಳಿಗೆ ಪಕ್ಷದ ಹೈಕಮಾಂಡ್‌ ತಡೆ ಹಾಕಿದೆ. ಇದರೊಂದಿಗೆ ಆ ಔತಣಕೂಟಗಳು ಎಡೆ ಮಾಡಿಕೊಡಬಹುದಾದ ರಾಜಕೀಯ ಚರ್ಚೆಗಳಿಗೂ ತೆರೆ ಎಳೆಯುವ ಪ್ರಯತ್ನ ಮಾಡಿದೆ.

ಹೊಸ ವರ್ಷಾಚರಣೆ ನೆಪದಲ್ಲಿ ಈಚೆಗೆ ಸಚಿವ ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಬಣದವರು ನಡೆಸಿದ್ದ ಔತಣಕೂಟ ಭಾರೀ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಜ. 8ರಂದು ಗೃಹ ಸಚಿವ ಡಾ| ಪರಮೇಶ್ವರ ಅವರು ತಮ್ಮ ನಿವಾಸದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಸಚಿವರು ಮತ್ತು ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದರು. ಈ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ಗೆ ದೂರು ಹೋದ ಬೆನ್ನಲ್ಲೇ ವರಿಷ್ಠರು ಮಧ್ಯಪ್ರವೇಶಿಸಿ ಸಭೆಯನ್ನು ರದ್ದು ಮಾಡುವಂತೆ ಸೂಚಿಸಿದ್ದಾರೆ.

ಡಾ| ಪರಮೇಶ್ವರ ಮಂಗಳವಾರ ಬೆಳಗ್ಗೆಯಷ್ಟೇ ತಾವೂ “ಡಿನ್ನರ್‌’ ಏರ್ಪಡಿ ಸಿದ್ದು, ಪಕ್ಷದ ಅನುಮತಿ ಪಡೆದೇ ಇದನ್ನು ಆಯೋಜಿಸಿರುವುದಾಗಿ ಪ್ರಕಟಿಸಿದ್ದರು. ಸಂಜೆ 7 ಗಂಟೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ನಾಯಕರು ಸೇರಲು ಸಮಯ ನಿಗದಿಯಾಗಿತ್ತು. ಆದರೆ ಸಂಜೆ ಹೈಕಮಾಂಡ್‌ ಸೂಚನೆ ಮೇರೆಗೆ ಮುಂದೂಡಿರುವುದಾಗಿ ಸಚಿವರು ಪ್ರಕಟಿಸಿದರು.

ಹೈಕಮಾಂಡ್‌ ಗಮನ ಸೆಳೆದ ಡಿಕೆಶಿ?
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ದಿಲ್ಲಿಯಲ್ಲಿ ಬೀಡುಬಿಟ್ಟಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿರುವುದು ಹಲವು ರಾಜಕೀಯ ಚರ್ಚೆಗಳಿಗೆ ಎಡೆ ಮಾಡಿ ಕೊಟ್ಟಿದೆ. ಡಿಕೆಶಿಯವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರನ್ನು ಭೇಟಿಯಾಗಿ ಭೋಜನ ಕೂಟಗಳಿಂದ ಪಕ್ಷ ಹಾಗೂ ಸರಕಾರಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಈಚೆಗೆ ನಡೆದ ಔತಣಕೂಟ ಹಾಗೂ ಅದರ ಬೆನ್ನಲ್ಲೇ ಆರಂಭವಾದ ಚರ್ಚೆಗಳು ಮತ್ತು ಆಯೋಜನೆ ಗೊಂಡಿದ್ದ ಮತ್ತೊಂದು ಔತಣ ಕೂಟದ ಬಗ್ಗೆ ಹೈಕಮಾಂಡ್‌ ಗಮನ ಸೆಳೆಯು ವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಮಧ್ಯೆ ಇಡೀ ದಿನ ಔತಣ ಕೂಟವನ್ನು ಕೆಪಿಸಿಸಿ ಅಧ್ಯಕ್ಷರಾದಿ ಯಾಗಿ ಕಾಂಗ್ರೆಸ್‌ನ ಎಲ್ಲ ನಾಯಕರು ಸಮರ್ಥಿಸಿಕೊಂಡಿದ್ದಾರೆ. ಸ್ವತಃ ಸಿಎಂ ಭಾಗವಹಿಸಿದ್ದ ಔತಣಕೂಟಕ್ಕೆ ಬೇರೆ ಅರ್ಥ ಕಲ್ಪಿಸುವುದು ಸರಿ ಅಲ್ಲ. ಹೀಗೆ ಸೇರಿದಾಗ ಸಮಸ್ಯೆಗಳನ್ನು ಹೇಳಿಕೊಂಡಿ ರಬಹುದು. ಹಾಗೆ ಹೇಳಿಕೊಳ್ಳುವುದು ತಪ್ಪಾ?’ ಪ್ರಶ್ನಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಪಕ್ಷವೇ ಡಿ.ಕೆ.ಶಿ. ಅವರಿಗೆ ನೀಡಿದೆ ವಿನಾ ಅವರು ಕಿತ್ತುಕೊಂಡಿದ್ದಲ್ಲ. ಈ ಸ್ಥಾನ ಅಲಂಕರಿಸುವ ಆತುರ ಇದ್ದವರು ಸ್ವತಃ ಸಿಎಂ ಸಹಿತ ಯಾರೇ ಆಗಲಿ; ತಮ್ಮ ಮುಂದಿರುವ ಸವಾಲು ತಿಳಿದು, ಪಕ್ಷ ಸಂಘಟನೆಯ ಸಾಮರ್ಥ್ಯ ಇರುವವರು ಆಯ್ಕೆಯಾಗಲಿ ಎಂದು ಮಾಜಿ
ಸಂಸದ ಡಿ.ಕೆ. ಸುರೇಶ್‌ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಚಿವರು, ಶಾಸಕರು, ಸಂಸದರು ಹಾಗೂ ಮುಖಂಡರ ಸಭೆಯನ್ನು ಜ. 8ರಂದು ಆಯೋಜಿಸಲಾಗಿತ್ತು. ಆದರೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯದ ಉಸ್ತುವಾರಿ ಸಚಿವ ರಣದೀಪ್‌ ಸಿಂಗ್‌ ಸುರ್ಜೇ ವಾಲ ಅವರ ಸೂಚನೆ ಮೇರೆಗೆ ಮುಂದೂಡ ಲಾಗಿದೆ. ಈ ಸಭೆಯ ಮುಂದಿನ ದಿನಾಂಕ ವನ್ನು ಶೀಘ್ರ ತಿಳಿಸಲಾಗುವುದು. – ಡಾ| ಪರಮೇಶ್ವರ, ಗೃಹ ಸಚಿವ

ನಾನು ಹೊರದೇಶದಲ್ಲಿದ್ದ ಕಾರಣ ನನಗೆ ಔತಣಕೂಟದ ಬಗ್ಗೆ ಮಾಹಿತಿ ಇಲ್ಲ. ಬೆಂಗಳೂರಿಗೆ ಹೋದ ಅನಂತರ ಇದರ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸುತ್ತೇನೆ.
– ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ

ಗೃಹ ಸಚಿವ ಜಿ. ಪರಮೇಶ್ವರ ಅವರು ಏರ್ಪಡಿಸಿದ್ದ ಔತಣ ಕೂಟ ರದ್ದಾಗಿರುವ ಬಗ್ಗೆ ಗೊತ್ತಿಲ್ಲ. – ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

8

Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ

7(2

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

7(1

Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.