Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Team Udayavani, Jan 8, 2025, 1:15 PM IST
ಕಾರ್ಕಳ: ಸಿಬಿಐ ಹೆಸರಲ್ಲಿ ಬೆದರಿಸಿ ಕಾರ್ಕಳದ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ವರದಿಯಾಗಿದೆ.
ಜ.7ರಂದು (ಮಂಗಳವಾರ) ಪ್ರೀಮ ಶರಿಲ್ ಡಿಸೋಜ (38) ಅವರಿಗೆ ಟೆಲಿಕಾಂ ಕಂಪೆನಿಯಿಂದ ಕರೆ ಮಾಡುವುದಾಗಿ ತಿಳಿಸಿದ ವ್ಯಕ್ತಿಯೊಬ್ಬ ನಿಮ್ಮ ಆಧಾರ್ ಕಾರ್ಡ್ ನಂಬರ್ನಿಂದ ಉತ್ತರ ಪ್ರದೇಶದಲ್ಲಿ ಬೇರೆ ಸಿಮ್ ಖರೀದಿಸಿ ಬೇರೆ ಬೇರೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ನಿಮ್ಮ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿರುತ್ತದೆ ಎಂದು ಹೆದರಿಸಿದ್ದಾನೆ.
ಈ ಸಂಬಂಧ ಸೈಬರ್ ಅಧಿಕಾರಿ ನಿಮ್ಮ ಜತೆಗೆ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ. ವೀಡಿಯೋ ಕಾಲ್ ಮಾಡಿ ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯು ತಾನು ಸಿಬಿಐ ಅಧಿಕಾರಿ ಎಂದು ತಿಳಿಸಿ ನೀವು ತನಿಖೆಗೆ ಸಹಕರಿಸಬೇಕು. ಈ ವಿಚಾರವನ್ನು ಯಾರ ಬಳಿಯಲ್ಲಿಯೂ ಹೇಳುವಂತಿಲ್ಲ ಹೇಳಿದರೆ ನಿಮ್ಮ ಗಂಡ ಮತ್ತು ಮಗುವಿಗೆ ತೊಂದರೆಯಾಗುತ್ತದೆ ಎಂದು ಬೆದರಿಸಿದ್ದಾನೆ. ಶರಿಲ್ ಅವರ ಬ್ಯಾಂಕ್ ಖಾತೆಗಳಲ್ಲಿರುವ ಹಣದ ವಿವರ ಪಡೆದುಕೊಂಡು ಹಣವನ್ನು ತಿಳಿಸಿದ ಖಾತೆಗೆ ವರ್ಗಾವಣೆ ಮಾಡಬೇಕು ಇಲ್ಲವಾದರೆ ಅರೆಸ್ಟ್ ವಾರಂಟ್ ಕಳುಹಿಸುತ್ತೇವೆ ಎಂದು ಹೆದರಿಸಲಾಗಿದೆ. ಇದರಿಂದ ಆತಂಕಗೊಂಡ ಮಹಿಳೆ ಫೆಡರಲ್ ಬ್ಯಾಂಕ್ನ ಖಾತೆಗೆ 14 ಲಕ್ಷ ರೂ. ಮತ್ತು ಯೆಸ್ ಬ್ಯಾಂಕ್ ಖಾತೆಗೆ 10 ಲಕ್ಷ ರೂ. ಹಣವನ್ನು ಎಫ್ಡಿ ಖಾತೆಯಿಂದ ಆರ್ಟಿಜಿಎಸ್ ಮೂಲಕ ವರ್ಗಾವಣೆ ಮಾಡಿ ಮೋಸ ಹೋಗಿದ್ದಾರೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.