ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Team Udayavani, Jan 8, 2025, 10:34 PM IST
ಆಂಧ್ರಪ್ರದೇಶ: ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದಲ್ಲಿ ಘೋರ ದುರಂತ ಸಂಭವಿಸಿದೆ, ವೈಕುಂಠ ಏಕಾದಶಿಯ ಟಿಕೆಟ್ ಕೌಂಟರ್ ಬಳಿ ಟಿಕೆಟ್ ಗಾಗಿ ನೂಕು ನುಗ್ಗಲು ಸಂಭವಿಸಿ ನಡೆದ ಕಾಲ್ತುಳಿತದಲ್ಲಿ ಆರು ಮಂದಿ ಮೃತಪಟ್ಟು ಹಲವರು ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ(ಜ.8) ರಾತ್ರಿ ನಡೆದಿದೆ.
ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್ ಪಡೆಯಲು ಬುಧವಾರ ಬೆಳಗ್ಗೆಯಿಂದಲೇ ತಿರುಪತಿಯ ವಿವಿಧ ಟಿಕೆಟ್ ಕೇಂದ್ರಗಳಲ್ಲಿ ಸುಮಾರು 4,000 ಕ್ಕೂ ಅಧಿಕ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಟೋಕನ್ ವಿತರಣೆಗಾಗಿ ಬೈರಾಗಿ ಪಟ್ಟಿಡಾ ಪಾರ್ಕ್ನಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಲ್ಲಲು ಅವಕಾಶ ನೀಡಿದಾಗ ಹೆಚ್ಚಿನ ಭಕ್ತರು ಅಲ್ಲಿ ಸೇರಿದ್ದರಿಂದ ನೂಕುನುಗ್ಗಲು ಉಂಟಾಗಿ ತಮಿಳುನಾಡು ಮೂಲದ ಮಹಿಳೆ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು ಅಲ್ಲದೆ ಘಟನೆಯಲ್ಲಿ ಇಪ್ಪತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿ ತಿರುಮಲ ತಿರುಪತಿ ದೇವಸ್ಥಾನದ ಮಂಡಳಿಯ ಅಧ್ಯಕ್ಷ ಬಿಆರ್ ನಾಯ್ಡು ತುರ್ತು ಸಭೆಯನ್ನು ಕರೆದಿದ್ದಾರೆ.
#WATCH | Andhra Pradesh: A stampede-like situation occurred at Vishnu Nivasam in Tirupati during the distribution of Vaikunta Dwara Sarva Darshan tokens. More details awaited. pic.twitter.com/vhoEYGLW2U
— ANI (@ANI) January 8, 2025
ಶ್ರೀವಾರಿ ವೈಕುಂಠ ದ್ವಾರದಲ್ಲಿ ದರ್ಶನ ಟೋಕನ್ ವಿತರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಭಕ್ತರು ಸಾವಿಗೀಡಾದ ಬಗ್ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಜೊತೆಗೆ ಘಟನೆ ನಡೆದ ಸ್ಥಳಕ್ಕೆ ತೆರಳಿ ಪರಿಹಾರ ಕ್ರಮ ಕೈಗೊಳ್ಳುವಂತೆ ಸಿಎಂ ನಾಯ್ಡು ಅವರು ಉನ್ನತ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಕಾಲ್ತುಳಿತದ ಹಿನ್ನೆಲೆಯಲ್ಲಿ ಸದ್ಯಕ್ಕೆ ವೈಕುಂಠ ದ್ವಾರ ದರ್ಶನದ ಟಿಕೆಟ್ ವಿತರಣೆಯನ್ನು ಸ್ಥಗಿತಗೊಳಿಸಲಾಗಿದ್ದು ಗುರುವಾರದಿಂದ ಟಿಕೆಟ್ ವಿತರಣೆ ಕಾರ್ಯ ನಡೆಸಲು ಆಡಳಿತ ಮಂಡಳಿ ನಿರ್ಧರಿಸಿರುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್ಶೂಟರ್ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.