Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ


Team Udayavani, Jan 9, 2025, 6:32 AM IST

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

ಮಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ನೇತೃತ್ವದ ನರಿಂಗಾನ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನ ಗ್ರಾಮ ಪಂಚಾಯತ್‌ ಸಹಕಾರದಲ್ಲಿ ನರಿಂಗಾನದ ಮೋರ್ಲ-ಬೋಳದಲ್ಲಿ ತೃತೀಯ ವರ್ಷದ ಹೊನಲು ಬೆಳಕಿನ “ಲವ-ಕುಶ’ ಜೋಡುಕರೆ ನರಿಂಗಾನ ಕಂಬಳ್ಳೋತ್ಸವ ಜ.11ರಂದು ಬೆಳಗ್ಗೆ 8.30ರಿಂದ ನಡೆಯಲಿದೆ. ಸಂಜೆ 4.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್‌, ಕರೆಯ ಗಾತ್ರದಲ್ಲಿ ದೊಡ್ಡದಾಗಿರುವ ನರಿಂಗಾನ ಕಂಬಳ ಕೇವಲ ಎರಡು ವರ್ಷಗಳಲ್ಲೇ ಜಿಲ್ಲೆಯಲ್ಲಿ ನಡೆದ ಸುಮಾರು 24 ಕಂಬಳಗಳ ಪೈಕಿ ಮೂರನೇ ಅತಿ ಹೆಚ್ಚು ಕೋಣಗಳು ಭಾಗವಹಿಸಿದ ದಾಖಲೆ ಹೊಂದಿದೆ. ಫಜೀರಿನಲ್ಲಿ 25 ವರ್ಷ ಕಂಬಳ ನಡೆಸಿದ, ಕೋಣದ ಯಜಮಾನ ವೆಂಕಪ್ಪ ಕಾಜವ ಮಿತ್ತಕೋಡಿ ಗೌರವಾಧ್ಯಕ್ಷತೆಯಲ್ಲಿ ಹಾಗೂ ಅವರ ಪುತ್ರ ಜಿಲ್ಲಾ ಕಂಬಳ ಸಮಿತಿಯ ಉಪಾಧ್ಯಕ್ಷ ಪ್ರಶಾಂತ್‌ ಕಾಜವ ಮಿತ್ತಕೋಡಿ ಕಾರ್ಯಧ್ಯಕ್ಷತೆಯಲ್ಲಿ ಎರಡು ವರ್ಷ ನಡೆದ ಕಂಬಳ ಯಶಸ್ಸು ಕಂಡಿದೆ ಎಂದರು.

ಸ್ಪರ್ಧಾಕೂಟದಲ್ಲಿ ವಿಜೇತರಾಗುವ ಕೋಣಗಳಿಗೆ ಚಿನ್ನದ ಪದಕದೊಂದಿಗೆ ಗೌರವಿಸಲಾಗುವುದು. ಭಾಗವಹಿಸಿದ ಕೋಣದ ಯಜಮಾನರಿಗೆ ಬೆಳ್ಳಿಯ ಪದಕ ಹಾಗೂ ಟ್ರೋಫಿ ಕೊಟ್ಟು ಗೌರವಿಸಲಾಗುವುದು. ವಿಜೇತ ಕೋಣಗಳನ್ನು ಓಡಿಸಿದ ಓಟಗಾರರಿಗೆ ಪ್ರಶಸ್ತಿ ಪತ್ರದೊಂದಿಗೆ ಬಹುಮಾನ ನೀಡಿ ಗೌರವಿಸಲಾಗುವುದು ಎಂದರು.

ಉದ್ಘಾಟನ ಸಮಾರಂಭದಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ವರ್ಕಾಡಿ ಹೊಸಮನೆ ರಾಜೇಶ್‌ ತಾಳಿತ್ತಾಯ, ಜಿಲ್ಲಾಧಿಕಾರಿ ಮುಲ್ಲೆ$ç ಮುಗಿಲನ್‌, ಸಯ್ಯದ್‌ ಮದನಿ ದರ್ಗಾ ಸಮಿತಿ ಅಧ್ಯಕ್ಷ ಪಿ.ಜಿ. ಹನೀಫ್‌, ಬೋಳ ಸಂತ ಲಾರೆನ್ಸ್‌ ಚರ್ಚ್‌ ಧರ್ಮಗುರು ವಂ| ಫೆಡ್ರಿಕ್‌ ಕೊರೆಯಾ, ನರಿಂಗಾನ ಗ್ರಾ.ಪಂ. ಅಧ್ಯಕ್ಷ ನವಾಝ್ ನರಿಂಗಾನ ಸಹಿತ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಹಿತ ಗಣ್ಯರು, ಚಲನಚತ್ರ ನಟರಾದ ಸುನಿಲ್‌ ಶೆಟ್ಟಿ, ರೂಪೇಶ್‌ ಶೆಟ್ಟಿ, ಅರವಿಂದ್‌ ಬೋಳಾರ, ಪ್ರದೀಪ್‌ ಆಳ್ವ ಕದ್ರಿ, ದೇವದಾಸ್‌ ಕಾಪಿಕಾಡ್‌, ಮಂಜು ಎಂ.ರೈ, ಭೋಜರಾಜ್‌ ವಾಮಂಜೂರು, ಸೂರಜ್‌ ಶೆಟ್ಟಿ ಅವರನ್ನು ಸಮ್ಮಾನಿಸಲಾಗುವುದು ಎಂದರು.

ನರಿಂಗಾನ ಗ್ರಾಮೋತ್ಸವ
ಜ.13ರಂದು ಸ್ನೇಹ ಸಮ್ಮಿಲನ, ಪ್ರತಿಭಾ ಪುರಸ್ಕಾರ, ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ನೃತ್ಯ ವೈಭವ, ನಾನಾ ಸ್ಪರ್ಧೆಗಳ ಸಹಿತ ನರಿಂಗಾನ ಗ್ರಾಮೋತ್ಸವ ನಡೆಯಲಿದೆ ಎಂದು ಖಾದರ್‌ ಹೇಳಿದರು.ನರಿಂಗಾನ ಕಂಬಳ ಸಮಿತಿ ಅಧ್ಯಕ್ಷ ಪ್ರಶಾಂತ್‌ ಕಾಜವ ಮಿತ್ತಕೋಡಿ, ಪ್ರಮುಖರಾದ ಮಮತಾ ಡಿ. ಗಟ್ಟಿ, ನವಾಝ್ ನರಿಂಗಾನ ಮೊದಲಾದವರು ಉಪಸ್ಥಿತರಿದ್ದರು.

ತುಳುವಿಗೆ ಸ್ಥಾನಮಾನ; ಸಿಎಂ ಜತೆ ಸಂವಾದ
ತುಳು ಭಾಷೆಗೆ ರಾಜ್ಯದ ಎರಡನೇ ಭಾಷೆ ಸ್ಥಾನ ನೀಡುವ ಕುರಿತು ಎಲ್ಲ ವರದಿ ತರಿಸಿಕೊಂಡಿದ್ದು, ಜಿಲ್ಲೆಯ ತುಳು ಸಾಹಿತಿಗಳು, ಮುಖಂಡರು ಹಾಗೂ ಪ್ರಮುಖರನ್ನು ಸೇರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಮಂಗಳೂರಿನಲ್ಲಿ ಸಂವಾದ ನಡೆಸಲಾಗುವುದು. ಬಳಿಕ ಅದಕ್ಕೆ ಪೂಕರವಾಗಿ ಮನವಿ ಸಲ್ಲಿಸಲಾಗುವುದು. ಮಂಗಳೂರು ಕ್ಷೇತ್ರಕ್ಕೆ ಒಂದು ಸಾವಿರ ಕೋಟಿ ರೂ.ಗಳ ವಿವಿಧ ಯೋಜನೆಗಳ ಶಿಲಾನ್ಯಾಸ ಶೀಘ್ರ ನಡೆಯಲಿದ್ದು, ಆಗ ಸಿಎಂ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಯು.ಟಿ. ಖಾದರ್‌ ಹೇಳಿದರು.

ನಕ್ಸಲರು ಶರಣಾದರೆ ತಪ್ಪೇನು?
ಕಾಡಿನಲ್ಲಿದ್ದ ನಕ್ಸಲರು ಶರಣಾಗತರಾಗಿ ಮುಖ್ಯವಾಹಿನಿಗೆ ಬಂದು ಒಳ್ಳೆಯ ಬದುಕು ನಡೆಸಿದರೆ ತಪ್ಪೇನು? ಹಿಂದೆ ದೇಶದ ಮಟ್ಟದಲ್ಲೇ ನಕ್ಸಲರ ಶರಣಾಗತಿ ನಡೆದಿತ್ತು. ರಕ್ತಪಾತ ಬಿಟ್ಟು ಯಾರಾದರೂ ಒಳ್ಳೆಯವರಾಗುವುದಾದರೆ ಅವರನ್ನು ಸಮಾಜವೂ ಸ್ವೀಕರಿಸಬೇಕು. ಕಾನೂನಾತ್ಮಕವಾಗಿ ಅವರನ್ನು ಸರಿಪಡಿಸಬೇಕು ಎಂದು ಖಾದರ್‌ ಪ್ರಶೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Kulai: ನೀರುಪಾಲಾದವರ ಶವ ಹಸ್ತಾಂತರ

Kulai: ನೀರುಪಾಲಾದವರ ಶವ ಹಸ್ತಾಂತರ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.